For Quick Alerts
  ALLOW NOTIFICATIONS  
  For Daily Alerts

  KGF-2 ಚಿತ್ರೀಕರಣ: ಹೈದರಾಬಾದ್ ಏರ್ ಪೋರ್ಟ್ ನಲ್ಲಿ ರಾಕಿ ಭಾಯ್ ಯಶ್

  |

  ಭಾರತೀಯ ಸಿನಿಮಾರಂಗ ಕಾತರದಿಂದ ಕಾಯುತ್ತಿರುವ ಕೆಜಿಎಫ್-2 ಸಿನಿಮಾದ ಚಿತ್ರೀಕರಣ ಭರ್ಜರಿಯಾಗಿ ನಡೆಯುತ್ತಿದೆ. ಲಾಕ್ ಡೌನ್ ಬಳಿಕ ಚಿತ್ರೀಕರಣ ಪ್ರಾರಂಭವಾಗಿದ್ದು, ಇದೀಗ ಕೊನೆಯ ಹಂತದ ಚಿತ್ರೀಕರಣದಲ್ಲಿ ಬ್ಯುಸಿಯಾಗಿದೆ ಸಿನಿಮಾತಂಡ.

  ಇತ್ತೀಚಿಗೆ ಉಡುಪಿಯ ಕಡಲತೀರದಲ್ಲಿ ಚಿತ್ರೀಕರಣ ಮಾಡಿ ಮುಗಿಸಿದ್ದ ಸಿನಿಮಾತಂಡ ಈಗ ಹೈದರಾಬಾದ್ ಗೆ ಪಯಣ ಬೆಳೆಸಿದೆ. ರಾಕಿ ಭಾಯ್ ಯಶ್ ಲಾಕ್ ಡೌನ್ ಬಳಿಕ ಮೊದಲ ಬಾರಿಗೆ ಉಡುಪಿಯ ಕಡಲತೀರದಲ್ಲಿ ನಡೆದ ಚಿತ್ರೀಕರಣದಲ್ಲಿ ಭಾಗಿಯಾಗಿದ್ದರು. ಇದೀಗ ಹೈದರಾಬಾದ್ ಚಿತ್ರೀಕರಣದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.

  Big News: ಕೆಜಿಎಫ್ ಚಾಪ್ಟರ್ 2 ಬಗ್ಗೆ ಕೊನೆಗೂ ಸ್ಪಷ್ಟನೆ ನೀಡಿದ ಸಂಜಯ್ ದತ್

  ಯಶ್ ಹೈದರಾಬಾದ್ ಗೆ ಎಂಟ್ರಿ ಕೊಟ್ಟಿರುವ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿವೆ. ಹೈದರಾಬಾದ್ ಏರ್ ಪೋರ್ಟ್ ನಲ್ಲಿ ಕ್ಯಾಮರಾ ಕಣ್ಣಿಗೆ ಸೆರೆಯಾಗಿರುವ ಯಶ್ ನೋಡಿ ಅಭಿಮಾನಿಗಳು ಫಿದಾ ಆಗಿದ್ದಾರೆ. ಇಂದಿನಿಂದ ಯಶ್ ಹೈದರಾಬಾದ್ ಚಿತ್ರೀಕರಣದಲ್ಲಿ ಭಾಗಿಯಾಗಲಿದ್ದಾರೆ.

  ಈ ಮೊದಲು ನಿರ್ದೇಶಕ ಪ್ರಶಾಂತ್ ನೀಲ್ ಮುಂದಿನ ಚಿತ್ರೀಕರಣ ಬೆಂಗಳೂರು ಮತ್ತು ಹೈದರಾಬಾದ್ ಎಂದು ಹೇಳಿದ್ದರು. ಅದರಂತೆ ಈ ಗ ಹೈದರಾಬಾದ್ ನಲ್ಲಿ ಚಿತ್ರೀಕರಣ ನಡೆಯುತ್ತಿರುವುದು ಕನ್ಫರ್ಮ್ ಆಗಿದೆ.

  ನಮ್ಮ ಜನ ಏನು ಅಂತ ಅವತ್ತು ಪ್ರೂವ್ ಮಾಡಿದ್ರು | Filmibeat Kannada

  ಅಂದ್ಹಾಗೆ ಬಾಲಿವುಡ್ ನಟಿ ಸಂಜಯ್ ದತ್ ಮತ್ತೆ ಚಿತ್ರೀಕರಣದಲ್ಲಿ ಭಾಗಿಯಾಗಲು ಸಜ್ಜಾಗಿದ್ದಾರೆ. ಕ್ಯಾನ್ಸರ್ ಚಿಕಿತ್ಸೆಯ ನಡುವೆಯೂ ಸಂಜುಬಾಬಾ ಚಿತ್ರೀಕರಣದಲ್ಲಿ ಭಾಗಿಯಾಗುತ್ತಿದ್ದಾರೆ. ಹೈದರಾಬಾದ್ ಚಿತ್ರೀಕರಣಕ್ಕೆ ಹಾಜರಾಗುತ್ತಾರ ಅಥವಾ ಮುಂಬೈನಲ್ಲಿ ಚಿತ್ರೀಕರಣ ಮಾಡಲಾಗುತ್ತಾರಾ ಎಂದು ಕಾದು ನೋಡಬೇಕು.

  English summary
  KGF-2 shooting is going on in Hyderabad. Yash joins in the Hyderabad shooting.

  Kannada Photos

  Go to : More Photos
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X
  X