For Quick Alerts
  ALLOW NOTIFICATIONS  
  For Daily Alerts

  "ಕ್ಷಮಿಸಿ.. ಈ ವರ್ಷದ ಹುಟ್ಟುಹಬ್ಬಕ್ಕೆ ನಿಮ್ಮ ಜೊತೆ ಇರಲು ಸಾಧ್ಯವಾಗುತ್ತಿಲ್ಲ": ಯಶ್

  |

  ರಾಕಿಂಗ್ ಸ್ಟಾರ್ ಯಶ್ ಹುಟ್ಟುಹಬ್ಬಕ್ಕೆ ಒಂದೇ ಒಂದು ದಿನ ಬಾಕಿಯಿದೆ. ನಾನಾ ಕಾರಣಗಳಿಂದ ಯಶ್ ಅಭಿಮಾನಿಗಳ ಜೊತೆ ಹುಟ್ಟುಹಬ್ಬ ಆಚರಿಸಿರಲಿಲ್ಲ. ಈ ಬಾರಿ ಅಭಿಮಾನಿಗಳು ನೆಚ್ಚಿನ ನಟನನ್ನು ಭೇಟಿ ಮಾಡಲು ಕಾಯುತ್ತಿದ್ದರು. ಆದರೆ ಅವರಿಗೆಲ್ಲಾ ಯಶ್ ಸೋಶಿಯಲ್ ಮೀಡಿಯಾದಲ್ಲಿ ಬರೆದ ಪತ್ರ ನಿರಾಸೆ ತಂದಿದೆ.

  ಈ ಬಾರಿ ಕೂಡ ಯಶ್ ಅಭಿಮಾನಿಗಳ ಜೊತೆ ಹುಟ್ಟುಹಬ್ಬ ಆಚರಿಸಿಕೊಳ್ಳುವುದಿಲ್ಲ. ಅದನ್ನು ಸೋಶಿಯಲ್ ಮೀಡಿಯಾದಲ್ಲಿ ತಿಳಿಸಿದ್ದಾರೆ. "ಜಗದಗಲದ ನಿರೀಕ್ಷೆಯಲ್ಲಿರುವ ನಿಮ್ಮ ಮುಂದೆ ನಿಲ್ಲಲು ಇನ್ನೂ ಸ್ವಲ್ಪವೇ ಸ್ವಲ್ಪ ಸಮಯ ಕೊಡಿ. ನಿಮಗಾಗಿ ವಿಭಿನ್ನವಾಗಿರೋದೆನನ್ನೂ ನಿಮ್ಮ ಮುಂದೆ ತರಲು ಶ್ರದ್ಧೆಯಿಂದ ಕೆಲಸ ಮಾಡುತ್ತಿದ್ದೇನೆ" ಎಂದಿದ್ದಾರೆ. ಯಶ್‌19 ಅಪ್‌ಡೇಟ್‌ಗಾಗಿ ಅಭಿಮಾನಿಗಳು ಚಾತಕ ಪಕ್ಷಿಗಳಂತೆ ಕಾಯುತ್ತಿದ್ದಾರೆ. ಅದಕ್ಕಾಗಿ ಯಶ್ ಕೂಡ ವಿಶೇಷ ಪ್ರಯತ್ನ ಮಾಡುತ್ತಿದ್ದಾರೆ. ಹಾಲಿವುಡ್ ರೇಂಜ್ ಸಿನಿಮಾ ಮಾಡುವ ಲೆಕ್ಕಾಚಾರದಲ್ಲಿದ್ದಾರೆ. ಆದರೆ ಅದಕ್ಕೆ ಎಲ್ಲವೂ ಇನ್ನು ಕೂಡಿ ಬಂದಿಲ್ಲ.

  Yash Birthday CDP: ದ್ವೇಷಿಸುವವರ ಎದುರು ಅಭಿಮಾನದ ಬಲದಿಂದ ಬೆಳೆದು ನಿಂತ ನಾಯಕ Yash Birthday CDP: ದ್ವೇಷಿಸುವವರ ಎದುರು ಅಭಿಮಾನದ ಬಲದಿಂದ ಬೆಳೆದು ನಿಂತ ನಾಯಕ

  ಅಭಿಮಾನಿಗಳಿಗೆ ನಮಸ್ಕಾರ... ಎಂದು ಹೇಳಿ ಪತ್ರ ಶುರು ಮಾಡಿರುವ ಯಶ್, "ನಿಮ್ಮ ಕಲ್ಮಶವಿಲ್ಲದ ಪ್ರೀತಿ, ಸಾಟಿಯೇ ಇಲ್ಲದ ಅಭಿಮಾನ, ನನ್ನ ಹೃದಯ ತುಂಬುವಂತೆ ಮಾಡಿದೆ. ನನಗೆ ಗೊತ್ತು ನೀವೆಲ್ಲಾ ಕಾಯುತ್ತಿದ್ದೀರಾ. ಹುಟ್ಟಿದ ದಿನ ತುಂಬಾ ವಿಶೇಷ ಅಂತ ನನಗೆ ಅನ್ನಿಸೋಕೆ ಶುರುವಾಗಿದ್ದೆ ಇತ್ತೀಚಿನ ವರ್ಷಗಳಲ್ಲಿ. ಯಾವಾಗ ನೀವು ನನ್ನ ದಿನವನ್ನ ನಿಮ್ಮ ದಿನವನ್ನಾಗಿಸಿಕೊಂಡು ಆಚರಿಸಿ ವಿಜೃಂಭಿಸೋಕೆ ಶುರು ಮಾಡಿದ್ದರಿಂದ. ಹಾಗಾಗಿ ನಾನು ಕೂಡ ಈ ವರ್ಷದ ಹುಟ್ಟುಹಬ್ಬದಂದು ನಿಮ್ಮನ್ನ ನೋಡಬೇಕು. ನಿಮ್ಮೊಂದಿಗೆ ಸಮಯ ಕಳೆಯಬೇಕು ಅಂದುಕೊಂಡಿದ್ದೆ. ಆದರೆ ಜಗದಗಲದ ನಿರೀಕ್ಷೆಯಲ್ಲಿರುವ ನಿಮ್ಮ ಮುಂದೆ ನಿಲ್ಲಲು ಇನ್ನೂ ಸ್ವಲ್ಪವೇ ಸ್ವಲ್ಪ ಸಮಯ ಕೊಡಿ."

  "ನಿಮಗಾಗಿ ವಿಭಿನ್ನವಾಗಿರೋದೆನನ್ನೂ ನಿಮ್ಮ ಮುಂದೆ ತರಲು ಶ್ರದ್ಧೆಯಿಂದ ಕೆಲಸ ಮಾಡುತ್ತಿದ್ದೇನೆ. ಅಲ್ಲಿಯವರೆಗೂ ನಿಮ್ಮ ತಾಳ್ಮೆ ಮತ್ತು ಪ್ರೀತಿಯೇ ನನಗೆ ಈ ವರ್ಷದ ಹುಟ್ಟುಹಬ್ಬದ ನಿಮ್ಮ ಉಡುಗೊರೆ . ಕ್ಷಮಿಸಿ..ಈ ವರ್ಷದ ಹುಟ್ಟುಹಬ್ಬಕ್ಕೆ ನಿಮ್ಮ ಜೊತೆ ಇರಲು ಸಾಧ್ಯವಾಗುತ್ತಿಲ್ಲ, ಆದರೆ ಆದಷ್ಟು ಬೇಗ ನಿಮಗೆ ಸಿಗುತ್ತೇನೆ ಮತ್ತು ನಿಮ್ಮ ಕಾಯುವಿಕೆಯನ್ನುಅರ್ಥಪೂರ್ಣವಾಗಿಸುತ್ತೇನೆ" ನಿಮ್ಮ ಪ್ರೀತಿಯ ಯಶ್- ಎಂದು ಪತ್ರದಲ್ಲಿ ಬರೆದಿದ್ದಾರೆ.

  KGF Actor Yashs Special message for his fans ahead of his Birthday

  ಈ ಬಾರಿ ಬಹಳ ಅದ್ಧೂರಿಯಾಗಿ ಹುಟ್ಟುಹಬ್ಬ ಆಚರಣೆಗೆ ಅಭಿಮಾನಿಗಳು ಸಿದ್ದತೆ ನಡೆಸಿದ್ದಾರೆ. ಈಗಾಗಲೇ ಸ್ಪೆಷಲ್ ಕಾಮನ್ ಡಿಪಿ ಸಿದ್ಧಪಡಿಸಿ ವೈರಲ್ ಮಾಡಿದ್ದರು. ಈ ಬಾರಿ ನೆಚ್ಚಿನ ನಟನ ಮನೆ ಬಳಿ ಹೋಗಿ ಕೈ ಕುಲುಕಿ ಶುಭಾಶಯ ಕೋರಲು ಬಯಸಿದ್ದರು. ಜೊತೆಗೆ ಯಶ್19 ಅಪ್‌ಡೇಟ್‌ಗಾಗಿ ಕೂಡ ಕಾಯುತ್ತಿದ್ದರು. ಆದರೆ ಯಶ್ ನಿರ್ಣಯ ಕೊಂಚ ಬೇಸರ ತರಿಸಿದೆ. ಆದರೆ ಬಹಳ ದೊಡ್ಡದಾಗಿ ಏನೋ ಕಾದಿದೆ ಎಂದು ಕಾಯುವಂತೆ ಮಾಡಿದೆ.

  English summary
  KGF Actor Yash's Special message for his fans ahead of his Birthday. This year, Yash will not be at his residence on his birthday. Know more.
  Thursday, January 5, 2023, 23:26
  IIFA

  Kannada Photos

  Go to : More Photos
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X
  X