ಕನ್ನಡ ರಾಜ್ಯೋತ್ಸವಕ್ಕೆ ಸಿಹಿ ಸುದ್ದಿ ನೀಡಿದ 'ಕೆಜಿಎಫ್' ತಂಡ
Recommended Video
ಬಾಕ್ಸ್ ಆಫೀಸ್ ಧೂಳಿಪಟ ಮಾಡಿ, ಕನ್ನಡ ಚಿತ್ರರಂಗವನ್ನು ನೆಕ್ಸ್ಟ್ ಲೆವೆಲ್ ಗೆ ತೆಗೆದುಕೊಂಡು ಹೋಗಿ, ಯಶ್ ರನ್ನು ನ್ಯಾಷನಲ್ ಸ್ಟಾರ್ ಮಾಡಿ, ಹೊರ ರಾಜ್ಯಗಳಿಗೆ ಕನ್ನಡದ ಪವರ್ ತೋರಿಸಿದ್ದ ಸಿನಿಮಾ 'ಕೆಜಿಎಫ್ ಚಾಪ್ಟರ್ 1'. ಇಂತಹ ಸಿನಿಮಾ ಇದೀಗ ಮತ್ತೆ ಬಿಡುಗಡೆ ಆಗುತ್ತಿದೆ.
'ಕೆಜಿಎಫ್ ಚಾಪ್ಟರ್ 2' ಸಿನಿಮಾಗಾಗಿ ಒಂದು ಕಡೆ ಪ್ರೇಕ್ಷಕರು ಕಾಯುತ್ತಿದ್ದಾರೆ. ಈ ವೇಳೆ ಚಾಪ್ಟರ್ 1 ಸಿನಿಮಾ ಮರು ಬಿಡುಗಡೆ ಮಾಡಲಾಗುತ್ತಿದೆ. ಕನ್ನಡ ರಾಜ್ಯೋತ್ಸವದ ವಿಶೇಷವಾಗಿ ಸಿನಿಮಾ ರೀ ರಿಲೀಸ್ ಆಗುತ್ತಿದೆ. ಈ ವಿಷಯವನ್ನು ಚಿತ್ರದ ಕಾರ್ಯಕಾರಿ ನಿರ್ಮಾಪಕ ಕಾರ್ತಿಕ್ ಗೌಡ ಹಂಚಿಕೊಂಡಿದ್ದಾರೆ.
ನವೆಂಬರ್ 1 ರಂದು ಕರ್ನಾಟಕದ 25 ರಿಂದ 30 ಸೆಂಟರ್ ಗಳಲ್ಲಿ 'ಕೆಜಿಎಫ್ ಚಾಪ್ಟರ್ 1' ಸಿನಿಮಾ ಬಿಡುಗಡೆ ಆಗುತ್ತಿದೆ. ಕೆಲವು ಚಿತ್ರಮಂದಿರಗಳಲ್ಲಿ ಒಂದು ವಾರಗಳ ಕಾಲ ಸಿನಿಮಾ ಪ್ರದರ್ಶನ ಆಗಲಿದೆ. ಬೆಂಗಳೂರಿನ ಊರ್ವಶಿ, ಕಾವೇರಿ, ಗೋಪಾಲನ್, ಸಂಧ್ಯಾ, ಮಾನಸ ಸೇರಿದಂತೆ ರಾಜ್ಯಾದಂತ್ಯ ಸಿನಿಮಾ ಚಿತ್ರ ರಿಲೀಸ್ ಆಗುತ್ತಿವೆ.

ಕನ್ನಡ ರಾಜ್ಯೋತ್ಸವಕ್ಕೆ ಶಿವರಾಜ್ ಕುಮಾರ್ ನಟನೆಯ 'ಆಯುಷ್ಮಾನ್ ಭವ' ಸಿನಿಮಾ ಬಿಡುಗಡೆ ಆಗಬೇಕಾಗಿತ್ತು. ಆದರೆ, ಆ ಸಿನಿಮಾ ಮುಂದಕ್ಕೆ ಹೋಗಿದೆ. ಹೀಗಾಗಿ ರಾಜ್ಯೋತ್ಸವಕ್ಕೆ ಯಾವುದೇ ದೊಡ್ಡ ಸಿನಿಮಾ ಇಲ್ಲ ಎಂದು ಬೇಸರಗೊಂಡಿದ್ದ ಕನ್ನಡಿಗರಿಗಾಗಿ ರಾಕಿ ವಾಪಸ್ ಬಂದಿದ್ದಾರೆ.
ಕನ್ನಡ ಚಿತ್ರರಂಗ ಹೆಮ್ಮೆಪಡುವಂತೆ ಮಾಡಿದ್ದ ಈ ಸಿನಿಮಾ ಕನ್ನಡ ರಾಜ್ಯೋತ್ಸವದ ದಿನ ಮತ್ತೆ ಬಿಡುಗಡೆ ಆಗುತ್ತಿರುವುದು ಖುಷಿಯ ವಿಷಯ. ಅಂದಹಾಗೆ, 'ಕೆಜಿಎಫ್ ಚಾಪ್ಟರ್ 2' ಸಿನಿಮಾ ಮುಂದಿನ ವರ್ಷದ ಏಪ್ರಿಲ್ ತಿಂಗಳಿನಲ್ಲಿ ಬಿಡುಗಡೆ ಆಗಲಿದೆ.
ಯಶ್ ಹಾಗೂ ಶ್ರೀನಿಧಿ ಶೆಟ್ಟಿ 'ಕೆಜಿಎಫ್' ಸಿನಿಮಾದಲ್ಲಿ ನಟಿಸಿದ್ದಾರೆ. ವಿಜಯ್ ಕಿರಗಂದೂರು ನಿರ್ಮಾಣ, ಪ್ರಶಾಂತ್ ನೀಲ್ ನಿರ್ದೇಶನ ಚಿತ್ರಕ್ಕಿದೆ.


Click it and Unblock the Notifications











