For Quick Alerts
  ALLOW NOTIFICATIONS  
  For Daily Alerts

  'KGF-2' ಕ್ಲೈಮ್ಯಾಕ್ಸ್ ಶೂಟಿಂಗ್; ರಾಕಿ ಭಾಯ್ ಮತ್ತು ಆಧೀರ ಫೈಟ್ ಗೆ ವೇದಿಕೆ ಸಿದ್ಧ

  |

  ಭಾರತೀಯ ಸಿನಿಮಾರಂಗದಲ್ಲಿ ಭಾರಿ ನಿರೀಕ್ಷೆ ಮೂಡಿಸಿರುವ ಕೆಜಿಎಫ್ 2 ಸಿನಿಮಾದ ಕ್ಲೈಮ್ಯಾಕ್ಸ್ ಶೂಟಿಂಗ್ ಗೆ ವೇದಿಕೆ ಸಿದ್ಧವಾಗಿದೆ. ಹೈದರಾಬಾದ್ ನಲ್ಲಿ ಚಿತ್ರದ ಕ್ಲೈಮ್ಯಾಕ್ಸ್ ಚಿತ್ರೀಕರಣ ನಡೆಯುತ್ತಿದ್ದು, ಈಗಾಗಲೇ ಇಡೀ ಸಿನಿಮಾತಂಡ ಮುತ್ತಿನನಗರಿಯಲ್ಲಿ ಬೀಡುಬಟ್ಟಿದೆ.

  ಸಂಜಯ್ ದತ್ ಎಂಟ್ರಿ ಯಾವಾಗ ಎನ್ನುವ ಪ್ರಶ್ನೆ ಅಭಿಮಾನಿಗಳಲ್ಲಿ ಮನೆಮಾಡಿತ್ತು, ಇದೀಗ ಅಧೀರ ಕೆಜಿಎಫ್-2 ತಂಡ ಸೇರಿಕೊಂಡಿದ್ದಾರೆ. ಚಿತ್ರದ ಹೈ ವೋಲ್ಟೇಜ್ ಆಕ್ಷನ್ ದೃಶ್ಯ ಚಿತ್ರೀಕರಣ ಮಾಡಲಾಗುತ್ತಿದೆ. ಚಿತ್ರೀಕರಣ ಸೆಟ್ ನಿಂದ ನಿರ್ದೇಶಕ ಪ್ರಶಾಂತ್ ನೀಲ್ ಫೋಟೋವನ್ನು ಹಂಚಿಕೊಂಡಿದ್ದಾರೆ. ಮುಂದೆ ಓದಿ..

  'KGF-2' ಸಿನಿಮಾದ ಬಿಗ್ ಅಪ್ ಡೇಟ್: ಟೀಸರ್ ಬಿಡುಗಡೆಗೆ ಡೇಟ್ ಫಿಕ್ಸ್'KGF-2' ಸಿನಿಮಾದ ಬಿಗ್ ಅಪ್ ಡೇಟ್: ಟೀಸರ್ ಬಿಡುಗಡೆಗೆ ಡೇಟ್ ಫಿಕ್ಸ್

  ಅಧೀರ v/s ರಾಕಿ ಭಾಯ್

  ಅಧೀರ v/s ರಾಕಿ ಭಾಯ್

  ಕೆಜಿಎಫ್-2 ಸಿನಿಮಾದ ಕ್ಲೈಮ್ಯಾಕ್ಸ್ ಶೂಟಿಂಗ್ ಹೈದರಾಬಾದ್ ನಲ್ಲಿ ನಡೆಯುತ್ತಿದೆ. ಈಗಾಗಲೇ ಸಿನಿಮಾತಂಡ ಹೈದರಾಬಾದ್ ನಲ್ಲಿ ಬೀಡುಬಿಟ್ಟಿದೆ. ಕ್ಲೈಮ್ಯಾಕ್ಸ್ ಶೂಟಿಂಗ್ ಪ್ರಾರಂಭವಾದ ಬಗ್ಗೆ ನಿರ್ದೇಶ ಪ್ರಶಾಂತ್ ನೀಲ್ ಸಾಮಾಜಿಕ ಜಾಲತಾಣದಲ್ಲಿ ಬಹಿರಂಗ ಪಡಿಸಿದ್ದಾರೆ. ಚಿತ್ರೀಕರಣ ಸೆಟ್ ನಿಂದ ಫೋಟೋ ಶೇರ್ ಮಾಡಿ, ಕ್ಲೈಮ್ಯಾಕ್ಸ್ ಶೂಟಿಂಗ್, ರಾಕಿ ಮತ್ತು ಅಧೀರ ನಡುವೆ ಫೈಟ್ ದಶ್ಯ ಚಿತ್ರೀಕರಣ ಮಾಡಲಾಗುತ್ತಿದೆ. ಎಂದು ಹೇಳಿದ್ದಾರೆ.

  ಅನ್ಬರಿವ್ ಸಹೋದರರಿಂದ ಸಾಹಸ ನಿರ್ದೇಶನ

  ಅನ್ಬರಿವ್ ಸಹೋದರರಿಂದ ಸಾಹಸ ನಿರ್ದೇಶನ

  ಕೆಜಿಎಫ್-2 ಸಿನಿಮಾಗೆ ದಕ್ಷಿಣ ಭಾರತದ ಖ್ಯಾತ ಸಾಹಸ ನಿರ್ದೇಶಕರಾದ ಅನ್ಬರಿವ್ ಸಹೋದರರು ಸಾಹಸ ನಿರ್ದೇಶನ ಮಾಡುತ್ತಿದ್ದಾರೆ. ಅನ್ಬರಿವ್ ಈಗಾಗಲೇ ಸಾಕಷ್ಟು ಸಿನಿಮಾಗಳಿಗೆ ಸ್ಟಂಟ್ ಮಾಸ್ಟರ್ ಆಗಿ ಕೆಲಸ ಮಾಡಿದ್ದಾರೆ. ಕೆಜಿಎಫ್-1 ಗೂ ಇವರೆ ಕೆಲಸ ಮಾಡಿದ್ದರು. ಇನ್ನು ದರ್ಶನ್ ಅಭಿನಯದ ರಾಬರ್ಟ್ ಸಿನಿಮಾದಲ್ಲು ಕೆಲಸ ಮಾಡಿದ್ದಾರೆ. ಅನ್ಬರಿವ್ ಫೋಟೋವನ್ನು ಪ್ರಶಾಂತ್ ನೀಲ್ ಶೇರ್ ಮಾಡಿ, ಕ್ಲೈಮ್ಯಾಕ್ಸ್ ಫೈಟ್ ದೃಶ್ಯಗೆ ನಿರ್ದೇಶನ ಮಾಡುತ್ತಿದ್ದಾರೆ ಎಂದು ಹೇಳಿದ್ದಾರೆ.

  ಹೈದರಾಬಾದ್‌ಗೆ ಬಂದಿಳಿದ ರಾಕಿ ಭಾಯ್: ಏರ್‌ಪೋರ್ಟ್‌ ಫೋಟೋ ವೈರಲ್

  ಡಿಸೆಂಬರ್ ನಲ್ಲಿ ಚಿತ್ರೀಕರಣ ಮುಕ್ತಾಯ

  ಡಿಸೆಂಬರ್ ನಲ್ಲಿ ಚಿತ್ರೀಕರಣ ಮುಕ್ತಾಯ

  ಕೆಜಿಎಫ್-2 ಸಿನಿಮಾದ ಚಿತ್ರೀಕರಣ ಸಂಪೂರ್ಣವಾಗಿ ಡಿಸೆಂಬರ್ ತಿಂಗಳಲ್ಲಿ ಮುಕ್ತಾಯ ಮಾಡಲು ಸಿನಿಮಾತಂಡ ನಿರ್ಧರಿಸಿದೆ. ಈ ವರ್ಷ ಚಿತ್ರೀಕರಣ ಮುಗಿಸಿ ನಿರ್ದೇಶಕ ಪ್ರಶಾಂತ್ ನೀಲ್ ಮತ್ತು ತಂಡ ಪ್ರಭಾಸ್ ಸಿನಿಮಾದಲ್ಲಿ ಬ್ಯುಸಿಯಾಗಲಿದ್ದಾರೆ. ಬಹುನಿರೀಕ್ಷೆಯ ಕೆಜಿಎಫ್-2 ಸಿನಿಮಾ ಯಾವಾಗ ರಿಲೀಸ್ ಆಗುತ್ತೆ ಎನ್ನುವ ಕುತೂಹಲ ಅಭಿಮಾನಿಗಳಲ್ಲಿ ಮನೆ ಮಾಡಿದೆ.

  ಇದು ನನ್ನ ಬಹು ದಿನದ ಕನಸು ಎಂದ ಪಂಕಜ್ ತ್ರಿಪಾಠಿ | Pankaj Tripathi | Filmibeat Kannada
  ಯಶ್ ಹುಟ್ಟುಹಬ್ಬಕ್ಕೆ ಟೀಸರ್ ರಿಲೀಸ್

  ಯಶ್ ಹುಟ್ಟುಹಬ್ಬಕ್ಕೆ ಟೀಸರ್ ರಿಲೀಸ್

  ಕೆಜಿಎಫ್-2 ಚಿತ್ರದ ಟೀಸರ್ ಗಾಗಿ ಅಭಿಮಾನಿಗಳು ಸುಮಾರು ಒಂದು ವರ್ಷದಿಂದ ಉಸಿರು ಬಿಗಿಹಿಡಿದು ಕಾಯುತ್ತಿದ್ದರು. ಇದೀಗ ಯಶ್ ಹುಟ್ಟುಹಬ್ಬಕ್ಕೆ ಭರ್ಜರಿ ಸರ್ಪ್ರೈಸ್ ಕಾದಿದೆ ಎಂದು ಚಿತ್ರದ ಕಾರ್ಯಕಾರಿ ನಿರ್ಮಾಪಕ ಕಾರ್ತಿಕ್ ಗೌಡ ಬಹಿರಂಗ ಪಡಿಸಿದ್ದಾರೆ. ಅಂದಹಾಗೆ ರಾಕಿಂಗ್ ಸ್ಟಾರ್ ಹುಟ್ಟುಹಬ್ಬ ಜನವರಿ 8. ಇನ್ನೇನು ಕೆಲವೇ ದಿನಗಳು ಬಾಕಿ ಇದೆ. ಕನ್ನಡ ಭಾರಿ ನಿರೀಕ್ಷೆಯ ಸಿನಿಮಾದ ಟೀಸರ್ ಅನ್ನು ಅದ್ದೂರಿಯಾಗಿ ಸ್ವಾಗತ ಮಾಡಲು ಕನ್ನಡ ಪ್ರೇಕ್ಷಕರು ಮಾತ್ರವಲ್ಲದೆ, ಭಾರತೀಯ ಸಿನಿ ಅಭಿಮಾನಿಗಳು ಕಾತರರಾಗಿದ್ದಾರೆ.

  English summary
  Yash starrer KGF Chapter 2 Climax Shoot is going on in Hyderabad, Prashant Neel Shares Picture.

  Kannada Photos

  Go to : More Photos
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X
  X