Just In
Don't Miss!
- News
ನಮ್ಮನ್ನು ಬಿಟ್ಟು ಓಡುತ್ತಿವೆ 500 ನಕ್ಷತ್ರಗಳು, ವಿಜ್ಞಾನಿಗಳಿಂದ ರಹಸ್ಯ ರಿವೀಲ್..!
- Lifestyle
"ಗುರುವಾರದ ರಾಶಿಫಲ: ಮೇಷ-ಮೀನದವರೆಗಿನ ದಿನ ಭವಿಷ್ಯ"
- Sports
ಐಎಸ್ಎಲ್: ಬೆಂಗಳೂರಿಗೆ ಸೋಲಿನ ಆಘಾತ ನೀಡಿದ ಕೇರಳ ಬ್ಲಾಸ್ಟರ್ಸ್
- Education
WAPCOS Recruitment 2021: 11 ಇಂಜಿನಿಯರ್ ಹುದ್ದೆಗಳಿಗೆ ಅರ್ಜಿ ಆಹ್ವಾನ
- Finance
ಇಪ್ಪತ್ತು ದಿನದಲ್ಲಿ 47 ಪರ್ಸೆಂಟ್ ನಷ್ಟು ಏರಿಕೆ ಕಂಡ ಟಾಟಾ ಮೋಟಾರ್ಸ್ ಷೇರು
- Automobiles
ಡ್ಯುಯಲ್ ಟೋನ್ ಬಣ್ಣದ ಆಯ್ಕೆಯೊಂದಿಗೆ ರೋಡ್ ಟೆಸ್ಟಿಂಗ್ ನಡೆಸಿದ ಸಿಟ್ರನ್ ಸಿ5 ಏರ್ಕ್ರಾಸ್ ಕಾರು
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
KGF-2 ಸಿನಿಮಾದ ಬಿಗ್ ಅನೌನ್ಸ್ ಮೆಂಟ್; ಟೀಸರ್ ರಿಲೀಸ್ ಗೆ ಡೇಟ್ ಫಿಕ್ಸ್
ಭಾರತೀಯ ಸಿನಿಮಾರಂಗ ಕಾತರದಿಂದ ಕಾಯುತ್ತಿರುವ ಬಹುನಿರೀಕ್ಷೆಯ ಕೆಜಿಎಫ್-2 ಸಿನಿಮಾದ ಟೀಸರ್ ರಿಲೀಸ್ ಗೆ ದಿನಾಂಕ ನಿಗದಿಯಾಗಿದೆ. ಕೆಜಿಎಫ್-2 ಸಿನಿಮಾದ ಅಪ್ ಡೇಟ್ ಗಾಗಿ ಅಭಿಮಾನಿಗಳು ವರ್ಷದಿಂದ ಕಾಯುತ್ತಿದ್ದರು. ಕೆಜಿಎಫ್ ತಂಡ ಯಾವುದೇ ಪೋಸ್ಟ್ ಹಾಕಿದರೂ ಸಿನಿಮಾದ ಟೀಸರ್, ಟ್ರೈಲರ್ ಬಗ್ಗೆಯೇ ಪ್ರಶ್ನೆ ಮಾಡುತ್ತಿದ್ದರು.
ಇದೀಗ ಕೆಜಿಎಫ್ ತಂಡ ಬಿಗ್ ಅಪ್ ಡೇಟ್ ನೀಡುವ ಮೂಲಕ ಅಭಿಮಾನಿಗಳಿಗೆ ಸಂತಸ ಸುದ್ದಿ ನೀಡಿದ್ದಾರೆ. ಇತ್ತೀಚಿಗಷ್ಟೆ ನಿರ್ದೇಶಕ ಪ್ರಶಾಂತ್ ನೀಲ್ ಡಿಸೆಂಬರ್ 21ಕ್ಕೆ ಸಿನಿಮಾದ ಬಗ್ಗೆ ಅಪ್ ಡೇಟ್ ನೀಡುವುದಾಗಿ ಹೇಳಿ ಅಭಿಮಾನಿಗಳ ಹಾರ್ಟ್ ಬೀಟ್ ಹೆಚ್ಚಿಸಿದ್ದರು. ಅದರಂತೆ ಇಂದು ಅಪ್ ಡೇಟ್ ನೀಡುವ ಮೂಲಕ ಟೀಸರ್ ರಿಲೀಸ್ ಡೇಟ್ ಅನ್ನು ಬಹಿರಂಗ ಪಡಿಸಿದ್ದಾರೆ.
'KGF-2' ಕ್ಲೈಮ್ಯಾಕ್ಸ್ ಚಿತ್ರೀಕರಣ ಮುಕ್ತಾಯ; ಸಂಜಯ್ ದತ್ ರನ್ನು ಬೀಳ್ಕೊಟ್ಟ ಪ್ರಶಾಂತ್ ನೀಲ್ ತಂಡ

ಯಶ್ ಹುಟ್ಟುಹಬ್ಬಕ್ಕೆ ಟೀಸರ್ ರಿಲೀಸ್
ಬಹುನಿರೀಕ್ಷೆಯ ಕೆಜಿಎಫ್-2 ಸಿನಿಮಾದ ಟೀಸರ್ ನಿರೀಕ್ಷೆಯಂತೆ ಯಶ್ ಹುಟ್ಟುಹಬ್ಬಕ್ಕೆ ರಿಲೀಸ್ ಆಗುತ್ತಿದೆ. ಈ ಹಿಂದೆಯೇ ಟೀಸರ್ ಯಶ್ ಹುಟ್ಟುಹಬ್ಬಕ್ಕೆ ಬಿಡುಗಡೆ ಯಾಗುತ್ತೆ ಎನ್ನುವ ಮಾತು ಕೇಳಿಬರುತ್ತಿತ್ತು. ಇದೀಗ ಪ್ರಶಾಂತ್ ನೀಲ್ ಖಚಿತ ಪಡಿಸಿದ್ದಾರೆ. ಯಶ್ ಹುಟ್ಟುಹಬ್ಬ ಜನವರಿ 8ರಂದು ಬೆಳಗ್ಗೆ 10.18ಕ್ಕೆ ಚಿತ್ರದ ಟೀಸರ್ ಆಗುತ್ತಿದೆ. ಟೀಸರ್ ರಿಲೀಸ್ ಡೇಟ್ ಜೊತೆಗೆ ಚಿತ್ರದ ಹೊಸ ಪೋಸ್ಟರ್ ಸಹ ಹಂಚಿಕೊಂಡಿದ್ದಾರೆ.

ಇನ್ನಷ್ಟು ಬಲಿಷ್ಟವಾಗಿ, ದೊಡ್ಡದಾಗಿ ಆಗಮಿಸುತ್ತಿದ್ದೇವೆ
ಪ್ರಶಾಂತ್ ನೀಲ್ ಅಪ್ ಡೇಟ್ ನೀಡುವ ಜೊೆತೆಗೆ 'ಆ ಸಾಮ್ರಾಜ್ಯದ ಒಂದು ನೋಟ. ಇದನ್ನು ಸೃಷ್ಟಿಸಲು ಒಂದು ವರ್ಷಕ್ಕಿಂತ ಹೆಚ್ಚು ಸಮಯ ತೆಗೆದುಕೊಂಡಿರಬಹುದು. ಆದರೆ ನಾವು ಇನ್ನಷ್ಟು ಬಲಿಷ್ಟವಾಗಿ, ದೊಡ್ಡದಾಗಿ ಆಗಮಿಸುತ್ತಿದ್ದೇವೆ' ಎಂದು ಬರೆದುಕೊಂಡಿದ್ದಾರೆ.
ಯಶ್ ಹುಟ್ಟುಹಬ್ಬಕ್ಕೆ ಅಭಿಮಾನಿಗಳಿಗೆ ಕಾದಿದೆ ಸಖತ್ ಸರ್ಪ್ರೈಸ್!

ಕ್ಲೈಮ್ಯಾಕ್ಸ್ ಚಿತ್ರೀಕರಣ ಮುಗಿಸಿ ಸಂಜಯ್ ದತ್ ಬೀಳ್ಕೊಟ್ಟ ತಂಡ
ಇತ್ತೀಚಿಗಷ್ಟೆ ಸಿನಿಮಾತಂಡ ಚಿತ್ರದ ಕ್ಲೈಮ್ಯಾಕ್ಸ್ ಚಿತ್ರೀಕರಣ ಮುಗಿಸಿದೆ. ಸಂಜಯ್ ದತ್ ಮತ್ತು ಯಶ್ ನಡುವಿನ ಭಯಾನಕ ಫೈಟ್ ದೃಶ್ಯವನ್ನು ಹೈದರಾಬಾದ್ ನಲ್ಲಿ ಸೆರೆಹಿಡಿದ್ದಾರೆ. ಕ್ಲೈಮ್ಯಾಕ್ಸ್ ದೃಶ್ಯ ಯಶಸ್ವಿಯಾಗಿ ಮುಗಿಸಿದ ಬಳಿಕ ಪ್ರಶಾಂತ್ ನೀಲ್ ಮತ್ತು ತಂಡ ಸೆಲ್ಫಿ ಕ್ಲಿಕ್ಕಿಸಿಕೊಂಡು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಾರೆ. ಫೋಟೋದಲ್ಲಿ ಸಂಜಯ್ ದತ್ ಸಹ ಸೆರೆಯಾಗಿದ್ದಾರೆ.

ಡಿಸೆಂಬರ್ 21ಕೆಜಿಎಫ್ ರಿಲೀಸ್ ಆದ ದಿನ
ಡಿಸೆಂಬರ್ 21ರ ದಿನ ಕೆಜಿಎಫ್ ತಂಡಕ್ಕೆ ಅತ್ಯಂತ ಮಹತ್ವದ ದಿನ. ಕಳೆದ ಎರಡು ವರ್ಷಗಳ ಹಿಂದೆ ಇದೇ ದಿನ ಕೆಜಿಎಫ್ ಚಾಪ್ಟರ್ 1 ಸಿನಿಮಾ ಬಿಡುಗಡೆಯಾಗಿ ಇತಿಹಾಸ ಸೃಷ್ಟಿಸಿತ್ತು. ಈಗ ಇದೇ ದಿನ ಸಿನಿಮಾ ಕುರಿತಂತೆ ಪ್ರಮುಖ ಅಪ್‌ಡೇಟ್ ನೀಡುವ ಮೂಲಕ ಅಭಿಮಾನಿಗಳ ಕುತೂಹಲ, ನಿರೀಕ್ಷೆಯನ್ನು ಮತ್ತಷ್ಟು ಹೆಚ್ಚಿಸಿದ್ದಾರೆ.