ಸಿನಿಮಾ ನಿರ್ಮಾಣಕ್ಕೆ ಇಳಿದ 'ಕೆಜಿಎಫ್' ನಿರ್ದೇಶಕ ಪ್ರಶಾಂತ್ ನೀಲ್
Recommended Video
ಕೆಜಿಎಫ್ ಚಿತ್ರದ ಮೂಲಕ ಇಡೀ ಭಾರತೀಯ ಚಿತ್ರರಂಗವೆ ಕನ್ನಡ ಚಿತ್ರರಂಗದತ್ತತ ತಿರುಗಿ ನೋಡುವಂತೆ ಮಾಡಿದ್ದ ನಿರ್ದೇಶಕ ಪ್ರಶಾಂತ್ ನೀಲ್. ಕನ್ನಡ ಚಿತ್ರರಂಗವನ್ನು ಮತ್ತೊಂದು ಲೆವೆಲ್ ಗೆ ಕರೆದೊಯ್ದ ನಿರ್ದೇಶಕ ಪ್ರಶಾಂತ್ ನೀಲ್ ಸದ್ಯ ಕೆಜಿಎಫ್ ಪಾರ್ಟ್-2ನಲ್ಲಿ ಬ್ಯುಸಿಯಾಗಿದ್ದಾರೆ.
ಪ್ರಶಾಂತ್ ನೀಲ್ ಕಡೆಯಿಂದ ಮತ್ತೊಂದು ಸುದ್ದಿ ಕೇಳಿ ಬರುತ್ತಿದೆ. ಪ್ರಶಾಂತ್ ನಿರ್ದೇಶನದ ಜೊತೆಗೆ ಸದ್ಯ ಸಿನಿಮಾ ನಿರ್ಮಾಣ ಕ್ಷೇತ್ರಕ್ಕೂ ಕಾಲಿಟ್ಟಿದ್ದಾರೆ. ಹೌದು, ಮೊದಲ ಬಾರಿಗೆ ಪ್ರಶಾಂತ್ ಸಿನಿಮಾ ನಿರ್ಮಾಣ ಮಾಡುತ್ತಿದ್ದಾರೆ. ಅಂದ್ಹಾಗೆ ಪ್ರಶಾಂತ್ ಚೊಚ್ಚಲ ಸಿನಿಮಾ ನಿರ್ಮಾಣ ಮಾಡುತ್ತಿರುವುದು ನಟ ಶ್ರೀಮುರಳಿಗಾಗಿ. ಅಂದರೆ ಶ್ರೀಮುರಳಿ ಸಿನಿಮಾಗೆ ಬಂಡವಾಳ ಹೂಡುತ್ತಿದ್ದಾರೆ. ಶ್ರೀಮುರಳಿ ಮುಂದಿನ ಸಿನಿಮಾಗೆ ಪ್ರಶಾಂತ್ ಬಂಡವಾಳ ಹೂಡುತ್ತಿದ್ದಾರೆ.

ಪ್ರಶಾಂತ್ ನೀಲ್ ಚೊಚ್ಚಲ ನಿರ್ಮಾಣ
ನಿರ್ದೇಶಕ ಪ್ರಶಾಂತ್ ನೀಲ್ ಕೆಜಿಎಫ್-2 ಚಿತ್ರದ ನಿರ್ದೇಶನದ ಜೊತೆಗೆ ಸಿನಿಮಾ ನಿರ್ಮಾಣ ಕೂಡ ಮಾಡಲು ಸಜ್ಜಾಗಿದ್ದಾರೆ. ಅಂದ್ಹಾಗೆ ಪ್ರಶಾಂತ್, ಶ್ರೀಮುರಳಿ ಸಿನಿಮಾಗೆ ಬಂಡವಾಳ ಹೂಡುತ್ತಿದ್ದಾರೆ. ಪ್ರಶಾಂತ್ ನೀಲ್ ಮೊದಲ ಬಾರಿಗೆ ನಿರ್ದೇಶನ ಮಾಡಿದ್ದು ಕೂಡ ಶ್ರೀಮುರಳಿಗೆ. 'ಉಗ್ರಂ' ಮೂಲಕ ನಿರ್ದೇಶಕರಾಗಿ ಎಂಟ್ರಿ ಕೊಟ್ಟ ಪ್ರಶಾಂತ್ ಈಗ ಶ್ರೀಮುರಳಿ ಸಿನಿಮಾಗೆ ಬಂಡವಾಳ ಹೂಡುವ ಮೂಲಕ ನಿರ್ಮಾಕರನಾಗಿ ಕಾಣಿಸಿಕೊಳ್ಳುತ್ತಿದ್ದಾರೆ.

ಶ್ರೀಮುರಳಿ ಹುಟ್ಟುಹಬ್ಬಕ್ಕೆ ಸಿನಿಮಾ ಅನೌನ್ಸ್
ನಟ ಶ್ರೀಮುರಳಿ ಹುಟ್ಟುಹಬ್ಬದ ದಿನ ಅಂದರೆ ಇದೇ ತಿಂಗಳು 17ಕ್ಕೆ ಪ್ರಶಾಂತ್ ನೀಲ್ ನಿರ್ಮಾಣದ ಶ್ರೀಮುರಳಿ ನಟನೆಯ ಸಿನಿಮಾ ಅನೌನ್ಸ್ ಆಗಲಿದೆ. ಚಿತ್ರಕ್ಕೆ ಸದ್ಯ ಪ್ರೊಡಕ್ಷನ್ ನಂ.7 ಎಂದು ಹೆಸರಿಡಲಾಗಿದೆ. ನಿರ್ಮಾಪಕ ಕೃಷ್ಣ ಚೈತನ್ಯ ಅವರ ಶ್ರೀ ಸ್ವರ್ಣಲತಾ ಬ್ಯಾನರ್ ನಲ್ಲಿ ಶ್ರೀಮುರಳಿ ಹೊಸ ಸಿನಿಮಾ ಮೂಡಿ ಬರಲಿದೆ.

'ಲಕ್ಕಿ' ನಿರ್ದೇಶಕರ ಸಾರಥ್ಯದಲ್ಲಿ ಬರ್ತಿದೆ ಸಿನಿಮಾ
ಶ್ರೀಮುರಳಿ ಹೊಸ ಸಿನಿಮಾಗೆ ಲಕ್ಕಿ ಖ್ಯಾತಿಯ ನಿರ್ದೇಶಕ ಡಾ.ಸೂರಿ ನಿರ್ದೇಶನ ಮಾಡುತ್ತಿದ್ದಾರೆ. ಈ ಮೊದಲು ಯಶ್ ಮತ್ತು ರಮ್ಯಾ ನಟನೆಯ ಲಕ್ಕಿ ಸಿನಿಮಾ ನಿರ್ದೇಶನ ಮಾಡಿದ್ದ ಸೂರಿ ಈಗ ಶ್ರೀಮುರಳಿಗೆ ಆಕ್ಷನ್ ಕಟ್ ಹೇಳಲು ಸಜ್ಜಾಗಿದ್ದಾರೆ. ಡಾಕ್ಟರ್ ಆಗಿದ್ದ ಸೂರಿ 'ಲಕ್ಕಿ' ಮೂಲಕ ನಿರ್ದೇಶಕರಾಗಿ ಗುರುತಿಸಿಕೊಂಡಿದ್ದರು.

'ಮದಗಜ' ನಂತರ ಸೆಟ್ಟೇರಲಿದೆ ಸಿನಿಮಾ
ಶ್ರೀಮುರಳಿ ಇತ್ತೀಚಿಗೆ ಭರಾಟೆ ಸಿನಿಮಾ ಮೂಲಕ ಅಭಿಮಾನಿಗಳ ಮುಂದೆ ಬಂದಿದ್ದರು. ಆ ನಂತರ ಬಹು ನಿರೀಕ್ಷೆಯ ಮದಗಜ ಚಿತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಈಗಾಗಲೆ ಮದಗಜ ಚಿತ್ರದ ಪೋಸ್ಟರ್ ಕೂಡ ರಿವೀಲ್ ಆಗಿದೆ. ಚಿತ್ರಕ್ಕೆ ಅಯೋಗ್ಯ ಖ್ಯಾತಿಯ ನಿರ್ದೇಶಕ ಮಹೇಶ್ ಅಕ್ಷನ್ ಕಟ್ ಹೇಳುತ್ತಿದ್ದಾರೆ. ಮದಗಜ ಚಿತ್ರದ ಚಿತ್ರೀಕರಣ ಮುಗಿದ ಬಳಿಕ ಶ್ರೀಮುರಳಿ ಮತ್ತು ಪ್ರಶಾಂತ್ ನೀಲ್ ನಿರ್ಮಾಣದ ಸಿನಿಮಾ ಸೆಟ್ಟೇರಲಿದೆ.


Click it and Unblock the Notifications











