For Quick Alerts
  ALLOW NOTIFICATIONS  
  For Daily Alerts

  ಜೂ.ಎನ್.ಟಿ.ಆರ್ ಬಳಿಕ ಮತ್ತೊಬ್ಬ ತೆಲುಗು ಸ್ಟಾರ್ ನಟನಿಗೆ ಪ್ರಶಾಂತ್ ನೀಲ್ ನಿರ್ದೇಶನ

  |

  ಸ್ಯಾಂಡಲ್ ವುಡ್ ನ ಖ್ಯಾತ ನಿರ್ದೇಶಕ ಪ್ರಶಾಂತ್ ನೀಲ್ ಗೆ ಇಂದು ಹುಟ್ಟುಹಬ್ಬದ ಸಂಭ್ರಮ. ಕೆಜಿಎಫ್ ಮಾಂತ್ರಿಕನ ಜನ್ಮದಿನಕ್ಕೆ ಅಭಿಮಾನಿಗಳು, ಕನ್ನಡ ಚಿತ್ರರಂಗದ ಗಣ್ಯರು ಸೇರಿದ್ದಂತೆ ಪರಭಾಷೆಯ ಗಣ್ಯರು ಸಹ ಶುಭ ಕೋರುತ್ತಿದ್ದಾರೆ. ಸದ್ಯ ಕೆಜಿಎಫ್-2 ಸಿನಿಮಾದಲ್ಲಿ ಬ್ಯುಸಿಯಾಗಿರುವ ಪ್ರಶಾಂತ್ ನೀಲ್ ಬಳಿಕ ತೆಲುಗು ಸಿನಿಮಾ ಮಾಡಲು ಸಜ್ಜಾಗಿದ್ದಾರೆ.

  ದೆಹಲಿಯ ಅಭಿಮಾನಿ ಯಲ್ಲಿ ಹೆಚ್ಚಾಯ್ತು KGF-2 ನೋಡುವ ಕಾತುರ | KGF 2 | Yash | Prashanth Neel

  ಕೆಜಿಎಫ್ ಸಿನಿಮಾ ಸೂಪರ್ ಹಿಟ್ ಆಗುತ್ತಿದ್ದಂತೆ ಪ್ರಶಾಂತ್ ನೀಲ್ ಗೆ ಪರಭಾಷೆಯಲ್ಲಿ ಬೇಡಿಕೆ ಹೆಚ್ಚಾಗಿದೆ. ಬೇರೆ ಭಾಷೆಯವರು ಪ್ರಶಾಂತ್ ನೀಲ್ ಆಗಮನಕ್ಕೆ ಕಾಯುತ್ತಿದ್ದಾರೆ. ಅವರ ಆಸೆಯಂತೆ ಪ್ರಶಾಂತ್ ನೀಲ್ ತೆಲುಗು ಚಿತ್ರರಂಗಕ್ಕೆ ಎಂಟ್ರಿ ಕೊಡುತ್ತಿದ್ದಾರೆ. ಈಗಾಗಲೆ ಜೂ.ಎನ್.ಟಿ.ಆರ್ ಜೊತೆ ಸಿನಿಮಾ ಮಾಡುವ ಸುಳಿವು ಬಿಟ್ಟುಕೊಟ್ಟಿದ್ದಾರೆ. ಅಚ್ಚರಿಕರ ಸಂಗತಿಯೆಂದರೆ ಪ್ರಶಾಂತ್ ತೆಲುಗಿನಲ್ಲಿ ಎರಡು ಸಿನಿಮಾ ಮಾಡುತ್ತಿದ್ದಾರೆ. ಮುಂದೆ ಓದಿ...

  ಕೆಜಿಎಫ್ ಚಾಪ್ಟರ್ 2 ಚಿತ್ರದ ಕ್ಲೈಮ್ಯಾಕ್ಸ್ ಲೀಕ್?: ದುರಂತ ಅಂತ್ಯ ಕಾಣಲಿದ್ದಾನಾ ರಾಕಿ ಭಾಯ್?ಕೆಜಿಎಫ್ ಚಾಪ್ಟರ್ 2 ಚಿತ್ರದ ಕ್ಲೈಮ್ಯಾಕ್ಸ್ ಲೀಕ್?: ದುರಂತ ಅಂತ್ಯ ಕಾಣಲಿದ್ದಾನಾ ರಾಕಿ ಭಾಯ್?

  ಹುಟ್ಟುಹಬ್ಬಕ್ಕೆ ಶುಭಕೋರಿದ ಮೈತ್ರಿ ಮೂವಿ ಮೇಕರ್ಸ್

  ಹುಟ್ಟುಹಬ್ಬಕ್ಕೆ ಶುಭಕೋರಿದ ಮೈತ್ರಿ ಮೂವಿ ಮೇಕರ್ಸ್

  ತೆಲುಗಿನ ಖ್ಯಾತ ಸಿನಿಮಾ ನಿರ್ಮಾಣ ಸಂಸ್ಥೆಗಳಲ್ಲಿ ಮೈತ್ರಿ ಮೂವಿ ಮೇಕರ್ಸ್ ಕೂಡ ಒಂದು. ತೆಲುಗಿನ ಸೂಪರ್ ಹಿಟ್ ಸಿನಿಮಾಗಳನ್ನು ನೀಡಿರುವ ಶ್ರೀಮಂತಡು, ಜನತಾ ಗ್ಯಾರೇಜ್, ರಂಗಸ್ಥಳಂ ಹೀಗೆ ಸಾಕಷ್ಟು ಸಿನಿಮಾಗಳನ್ನು ನೀಡಿರುವ ಮೈತ್ರಿ ಮೂವಿ ಮೇಕರ್ಸ್ ಪ್ರಶಾಂತ್ ನೀಲ್ ಹುಟ್ಟುಹಬ್ಬಕ್ಕೆ ಶುಭಕೋರಿದ್ದಾರೆ.

  ಮೈತ್ರಿ ಮೂವಿ ಮೇಕರ್ಸ್ ಬ್ಯಾನರ್ ನಲ್ಲಿ ಪ್ರಶಾಂತ್ ನೀಲ್ ಸಿನಿಮಾ

  ಮೈತ್ರಿ ಮೂವಿ ಮೇಕರ್ಸ್ ಬ್ಯಾನರ್ ನಲ್ಲಿ ಪ್ರಶಾಂತ್ ನೀಲ್ ಸಿನಿಮಾ

  ಮೈತ್ರಿ ಮೂವಿ ಮೇಕರ್ಸ್ ಸದ್ಯ ಅಲ್ಲು ಅರ್ಜುನ್ ಅಭಿನಯದ ಪುಷ್ಟ ಮತ್ತು ಮಹೇಶ್ ಬಾಬು ಅಭಿನಯದ ಸರ್ಕಾರ ವಾಲಿ ಪಾಠ ಸಿನಿಮಾಗೆ ಬಂಡವಾಳ ಹೂಡಿದ್ದಾರೆ. ಜೊತೆಗೆ ಪ್ರಶಾಂತ್ ನೀಲ್ ನಿರ್ದೇಶನದ ಜೂ.ಎನ್ ಟಿ ಆರ್ ಅಭಿನಯದ ಸಿನಿಮಾ ಸಹ ಮೈತ್ರಿ ಮೂವಿ ಮೇಕರ್ಸ್ ಬ್ಯಾನರ್ ನಲ್ಲಿ ನಿರ್ಮಾಣವಾಗುತ್ತಿದೆ.

  Jr.NTRಗೆ ನಿರ್ದೇಶನ ಮಾಡಲು ಇಷ್ಟೊಂದು ಸಂಭಾವನೆ ಪಡೆಯುತ್ತಿದ್ದಾರಾ ಪ್ರಶಾಂತ್ ನೀಲ್?Jr.NTRಗೆ ನಿರ್ದೇಶನ ಮಾಡಲು ಇಷ್ಟೊಂದು ಸಂಭಾವನೆ ಪಡೆಯುತ್ತಿದ್ದಾರಾ ಪ್ರಶಾಂತ್ ನೀಲ್?

  ಪ್ರಶಾಂತ್ ನೀಲ್ ಗೆ ಶುಭ ಕೋರಿದ DVV Entertainment

  ಪ್ರಶಾಂತ್ ನೀಲ್ ಗೆ ಶುಭ ಕೋರಿದ DVV Entertainment

  ಪ್ರಶಾಂತ್ ನೀಲ್ ಮೈತ್ರಿ ಮೂವಿ ಮೇಕರ್ಸ್ ಜೊತೆ ಸಿನಿಮಾ ಮಾಡುತ್ತಿದ್ದಾರೆ. ಹಾಗಾಗಿ ಶುಭಾಶಯ ಕೋರಿದ್ದಾರೆ. ಜೊತೆಗೆ ತೆಲುಗಿನ ಮತ್ತೊಂದು ದೊಡ್ಡ ಬ್ಯಾನರ್ ಆಗಿರುವ DVV Entertainment ಪ್ರಶಾಂತ್ ನೀಲ್ ಅವರನ್ನು ಹಾಡಿ ಹೊಗಳಿ ಶುಭಕೋರುವ ಮೂಲಕ ಅಚ್ಚರಿ ಮೂಡಿಸಿದ್ದಾರೆ. ಈ ಮೂಲಕ ಪ್ರಶಾಂತ್ ನೀಲ್ ಮತ್ತೊಂದು ಸಿನಿಮಾ ಮಾಡುವ ಸಿಕ್ಕಿದೆ.

  ತೆಲುಗಿನ ಸಿನಿಮಾ ನಿರ್ದೇಶನ: ಟೀಕಾಕಾರರಿಗೆ ನಿರ್ದೇಶಕ ಪ್ರಶಾಂತ್ ನೀಲ್ ಕೊಟ್ಟ ಉತ್ತರವೇನು?ತೆಲುಗಿನ ಸಿನಿಮಾ ನಿರ್ದೇಶನ: ಟೀಕಾಕಾರರಿಗೆ ನಿರ್ದೇಶಕ ಪ್ರಶಾಂತ್ ನೀಲ್ ಕೊಟ್ಟ ಉತ್ತರವೇನು?

  ಆರ್ ಆರ್ ಆರ್ ಸಿನಿಮಾ ನಿರ್ಮಾಣ ಮಾಡುತ್ತಿರುವ DVV Entertainment

  ಆರ್ ಆರ್ ಆರ್ ಸಿನಿಮಾ ನಿರ್ಮಾಣ ಮಾಡುತ್ತಿರುವ DVV Entertainment

  DVV Entertainment ಸದ್ಯ ಆರ್ ಆರ್ ಆರ್ ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ. ಬಳಿಕ ಪ್ರಶಾಂತ್ ನೀಲ್ ಜೊತೆ ಸಿನಿಮಾ ಮಾಡುವ ಸೂಚನೆ ನೀಡಿದೆ. ಅಂದ್ಹಾಗೆ ಜೂ.ಎನ್ ಟಿ ಆರ್ ಬಳಿಕ ಪ್ರಶಾಂತ್ ನೀಲ್ ಯಾರಿಗೆ ನಿರ್ದೇಶನ ಮಾಡಲಿದ್ದಾರೆ ಎನ್ನುವ ಕುತೂಹಲ ಅಭಿಮಾನಿಗಳಲ್ಲಿ ಹುಟ್ಟುಹಾಕಿದೆ.

  English summary
  Kannada Director Prashanth Neel will direct two Telugu movies. Telugu productions DVV Entertainment and Mytri movie makers birthday wish to Prashanth Neel.

  Kannada Photos

  Go to : More Photos
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X
  X