ಕನ್ನಡ ನಿರ್ದೇಶಕರ ಹೃದಯ ಬಡಿತ ಹೆಚ್ಚಿಸಿದ 'ಕೆ ಜಿ ಎಫ್'
Recommended Video

ರಾಕಿಂಗ್ ಸ್ಟಾರ್ ಯಶ್ ಅಭಿನಯದ 'ಕೆ ಜಿ ಎಫ್' ಸಿನಿಮಾದ ಕ್ರೇಜ್ ಬಗ್ಗೆ ಹೆಚ್ಚು ಹೇಳಬೇಕಿಲ್ಲ. ಈಗಾಗಲೇ, ಈ ಚಿತ್ರ ಸಿಕ್ಕಾಪಟ್ಟೆ ಸದ್ದು ಮಾಡಿದೆ. ಆದರೆ, ನಿನ್ನೆಯಿಂದ ಸಿನಿಮಾ ಮತ್ತೊಂದು ರೀತಿಯಲ್ಲಿ ಸಂಚಲನವನ್ನು ಸೃಷ್ಟಿ ಮಾಡುತ್ತಿದೆ.
ಸಿನಿಮಾದ ಪೋಸ್ಟರ್ ಸಾಮಾಜಿಕ ಜಾಲತಾಣಗಳಲ್ಲಿ ಟ್ರೆಂಡ್ ಆಗಿದೆ. ಪ್ರೇಕ್ಷಕರಿಗೆ ಮಾತ್ರವಲ್ಲ ಕನ್ನಡದ ಅನೇಕ ನಿರ್ದೇಶಕರು 'ಕೆಜಿಎಫ್' ಸಿನಿಮಾದ ಹೊಸ ಪೋಸ್ಟರ್ ನೋಡಿ ಮೆಚ್ಚಿಕೊಂಡಿದ್ದಾರೆ.

ನಿರ್ದೇಶಕ ತರುಣ್ ಸುಧೀರ್, ಪವನ್ ಒಡೆಯರ್, ಸಿಂಪಲ್ ಸುನಿ, ನಿರ್ಮಾಪಕ ಪುಷ್ಕರ್ ಮಲ್ಲಿಕಾರ್ಜುನಯ್ಯ ಸೇರಿದಂತೆ ಅನೇಕರು ತಮ್ಮ ಫೇಸ್ ಬುಕ್ ಹಾಗೂ ಟ್ವಿಟ್ಟರ್ ಖಾತೆಯಲ್ಲಿ 'ಕೆಜಿಎಫ್' ಸಿನಿಮಾದ ಬಗ್ಗೆ ಬರೆದುಕೊಳ್ಳುತ್ತಿದ್ದಾರೆ.
ನಿನ್ನೆ ಈ ಸಿನಿಮಾದ ಬಿಡುಗಡೆಯ ದಿನಾಂಕ ಅನೌನ್ಸ್ ಆಗಿದೆ. ಅಕ್ಟೋಬರ್ 14 ರಂದು ಚಿತ್ರದ ಟ್ರೇಲರ್ ಹಾಗೂ ನವೆಂಬರ್ 16 ರಂದು ಸಿನಿಮಾ ರಿಲೀಸ್ ಆಗಲಿದೆ.
ಯಶ್ ಜೊತೆಗೆ ಶ್ರೀನಿಧಿ ಶೆಟ್ಟಿ ಸಿನಿಮಾದಲ್ಲಿ ನಟಿಸಿದ್ದಾರೆ. 'ಉಗ್ರಂ' ನಿರ್ದೇಶಕ ಪ್ರಶಾಂತ್ ನೀಲ್ ಕನಸಿನ ಸಿನಿಮಾ ಇದಾಗಿದೆ. ರವಿ ಬಸ್ರೂರ್ ಚಿತ್ರಕ್ಕೆ ಸಂಗೀತ ನೀಡಿದ್ದಾರೆ.


Click it and Unblock the Notifications











