For Quick Alerts
  ALLOW NOTIFICATIONS  
  For Daily Alerts

  ಹುಟ್ಟುಹಬ್ಬದ ಸಂಭ್ರಮದಲ್ಲಿ ಕಿಚ್ಚ ಸುದೀಪ್

  |

  ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಪಾಲಿಗೆ ಇಂದು ವಿಶೇಷವಾದ ದಿನ. ಕೋಟ್ಯಂತರ ಅಭಿಮಾನಿಗಳ ಅಭಿಮಾನಿ ಅಭಿನಯ ಚಕ್ರವರ್ತಿಗೆ ಇಂದು (ಸೆಪ್ಟಂಬರ್ 2) ಹುಟ್ಟುಹಬ್ಬದ ಸಂಭ್ರಮ. 47ನೇ ವಸಂತಕ್ಕೆ ಕಾಲಿಟ್ಟಿರುವ ಸುದೀಪ್ ಈ ಬಾರಿ ಸರಳವಾಗಿ ಜನ್ಮದಿನಾಚರಣೆಯನ್ನು ಆಚರಿಸಿಕೊಳ್ಳುತ್ತಿದ್ದಾರೆ.

  Sudeep ಹುಟ್ಟು ಹಬ್ಬದಂದು ಅವರ ಬಯೋಗ್ರಫಿ ಬಿಡುಗಡೆ ಮಾಡಿದ Puneeth Rajkumar | Filmibeat Kannada

  ಪ್ರತೀ ವರ್ಷ ಹುಟ್ಟುಹಬ್ಬದ ದಿನ ಕಿಚ್ಚನ ಮನೆ ಮುಂದೆ ಅಭಿಮಾನಿಗಳ ದೊಡ್ಡ ದಂಡೇ ನೆರೆದಿರುತ್ತಿತ್ತು. ರಾಜ್ಯದ ಮೂಲೆ ಮೂಲೆಯಿಂದ ಬಂದ ಅಭಿಮಾನಿಗಳು ರಾತ್ರಿಯಿಂದಲೇ ಸುದೀಪ್ ಮನೆ ಮುಂದೆ ಕ್ಯೂ ನಿಂತಿರುತ್ತಿದ್ದರು. ನೆಚ್ಚಿನ ನಟನ ದರ್ಶನ ಮಾಡಿ, ಶುಭಹಾರೈಸಿ ಸಂತಸ ಪಡುತ್ತಿದ್ದರು.

  ಸಿದ್ದಗಂಗಾ ಮಠಕ್ಕೆ ಸುದೀಪ್, ಇಂದ್ರಜಿತ್ ಲಂಕೇಶ್ ಭೇಟಿ: ಡ್ರಗ್ಸ್ ಬಗ್ಗೆ ಕಿಚ್ಚ ಹೇಳಿದ್ದೇನು?

  ಅಭಿಮಾನಿಗಳೊಂದಿಗೆ ಸುದೀಪ್ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದರು. ಆದರೆ ಈ ಬಾರಿ ಎಲ್ಲಾ ಸಂಭ್ರಮ, ಸಡಗರಗಳಿಗೆ ಬ್ರೇಕ್ ಬಿದ್ದಿದೆ. ಸಾಮಾಜಿಕ ಜಾಲತಾಣದ ಮೂಲಕವೇ ಎಲ್ಲರೂ ಶುಭ ಹಾರೈಸುತ್ತಿದ್ದಾರೆ. ಅಭಿಮಾನಿಗಳು, ಚಿತ್ರರಂಗದ ಗಣ್ಯರು ಮತ್ತು ಸ್ನೇಹಿತರು ಕಿಚ್ಚನಿಗೆ ವಿಶ್ ಮಾಡುತ್ತಿದ್ದಾರೆ.

  'ಈ ಬಾರಿ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿಲ್ಲ, ಯಾರು ಮನೆಯ ಬಳಿ ಬರಬೇಡಿ, ಸಂಭ್ರಮದ ಹುಟ್ಟುಹಬ್ಬ ಆಚರಿಸುವುದು ಬೇಡ. ನೀವು ಇದ್ದಲ್ಲಿಂದನೇ ಶುಭ ಹಾರೈಸಿ' ಎಂದು ಸುದೀಪ್ ಟ್ವೀಟ್ ಮಾಡಿ ಅಭಿಮಾನಿಗಳಲ್ಲಿ ಮನವಿ ಮಾಡಿದ್ದಾರೆ.

  ಅದ್ದೂರಿ ಆಚರಣೆ ಇಲ್ಲದಿದ್ದರೂ ಅಭಿಮಾನಿಗಳ ಸಂಭ್ರಮಕ್ಕೇನು ಕೊರತೆ ಇಲ್ಲ. ಹುಟ್ಟುಹಬ್ಬದ ಪ್ರಯುಕ್ತ ಕೋಟಿಗೊಬ್ಬ-3 ಸಿನಿಮಾದ ಟೀಸರ್, ಫ್ಯಾಂಟಮ್ ಸಿನಿಮಾದ ಪೋಸ್ಟರ್, ಕಿಚ್ಚನ ಬಯೋಗ್ರಫಿ ಇಂದು ರಿಲೀಸ್ ಆಗುತ್ತಿದೆ. ಜೊತೆಗೆ ಹೊಸ ಸಿನಿಮಾಗಳು ಅನೌನ್ಸ್ ಆಗುವ ಸಾಧ್ಯತೆ ಇದೆ. ಈ ಸರ್ಪ್ರೈಸ್ ಗಳು ಕಿಚ್ಚಿನ ಹುಟ್ಟುಹಬ್ಬದ ಉಡುಗೊರೆಯಾಗಿ ಅಭಿಮಾನಿಗಳಿಗೆ ಸಿಗಲಿದೆ.

  English summary
  Kiccha Sudeep celebrating his 47th birthday on September 2. Fans and Film Celebrities birthday wishes to Sudeep.

  Kannada Photos

  Go to : More Photos
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X
  X