For Quick Alerts
  ALLOW NOTIFICATIONS  
  For Daily Alerts

  ಇದೇ ವಾರ 'ದಬಂಗ್-3' ಚಿತ್ರೀಕರಣದಲ್ಲಿ ಭಾಗಿಯಾಗಲಿದ್ದಾರೆ ಸುದೀಪ್

  |

  ಅಭಿನಯದ ಚಕ್ರವರ್ತಿ ಕಿಚ್ಚ ಸುದೀಪ್ ಸದ್ಯ ಪೈಲ್ವಾನ್ ಚಿತ್ರೀಕರಣ ಮುಗಿಸಿ 'ಕೋಟಿಗೊಬ್ಬ-3' ಚಿತ್ರದಲ್ಲಿ ಬ್ಯುಸಿಯಾಗಿದ್ದಾರೆ. ಇದರ ನಡುವೆ ಕಿಚ್ಚನ ಬಾಲಿವುಡ್ ಸಿನಿಮಾ ಸಿಕ್ಕಾಪಟ್ಟೆ ಸದ್ದು ಮಾಡುತ್ತಿದೆ. ಬಾಲಿವುಡ್ ಬಾಕ್ ಆಫೀಸ್ ಸುಲ್ತಾನ್ ಸಲ್ಮಾನ್ ಖಾನ್ ಅಭಿನಯದ ದಬಂಗ್-3 ಚಿತ್ರದಲ್ಲಿ ಸುದೀಪ್ ಅಭಿನಯಿಸುತ್ತಿದ್ದಾರೆ. ಕಿಚ್ಚ ಯಾವಾಗ ಚಿತ್ರೀಕರಣದಲ್ಲಿ ಭಾಗಿಯಾಗಲಿದ್ದಾರೆ ಎನ್ನುವ ಕುತೂಹಲ ಅಭಿಮಾನಿಗಳಲ್ಲಿತ್ತು.

  ಆದ್ರೀಗ ಈ ಕುತೂಹಲಕ್ಕೆ ತೆರೆ ಬಿದ್ದಿದೆ. ಕಿಚ್ಚನ ಬಾಲಿವುಡ್ ಸಿನಿಮಾಗೆ ದಿನಾಂಕ ನಿಗದಿಯಾಗಿದೆ. ಅಭಿನಯ ಚಕ್ರವರ್ತಿ ಇದೇ ಶನಿವಾರ 'ದಬಂಗ್-3' ಚಿತ್ರತಂಡ ಸೇರಿಕೊಳ್ಳಲಿದ್ದಾರೆ. ಈಗಾಗಲೆ 'ದಬಂಗ್-3' ಚಿತ್ರೀಕರಣ ಪ್ರಾರಂಭವಾಗಿದ್ದು ಮೊದಲ ಹಂತದ ಶೂಟಿಂಗ್ ಮುಗಿಸಿ ಎರಡನೆ ಹಂತದ ಚಿತ್ರೀಕರಣದಲ್ಲಿ ಬ್ಯುಸಿಯಾಗಿದೆ.

  'ದಬಾಂಗ್' ಚಿತ್ರಕ್ಕೆ ಸುದೀಪ್ ಅವರನ್ನ ಸೂಚಿಸಿದ್ದು ಯಾರು ಗೊತ್ತಾ?

  ಸ್ಯಾಂಡಲ್ ವುಡ್ ಮಾಣಿಕ್ಯ ಬಾಲಿವುಡ್ ಬ್ಯಾಡ್ ಬಾಯ್ ಸಲ್ಲುಮೀಯಾ ಎದುರು ತೊಡೆ ತಟ್ಟಲಿದ್ದಾರೆ. ಸುದೀಪ್ ಸಿಕಂದರ್ ಭಾರದ್ವಜ್ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಚಿತ್ರಕ್ಕೆ ಪ್ರಭುದೇವ ಆಕ್ಷನ್ ಕಟ್ ಹೇಳುತ್ತಿದ್ದಾರೆ. ಸಲ್ಮಾನ್ ಜೊತೆ ಮೊದಲ ಬಾರಿಗೆ ತೆರೆ ಹಂಚಿಕೊಳ್ಳುತ್ತಿರುವ ಕಿಚ್ಚನನ್ನು ನೋಡಲು ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ.

  ಈಗಾಗಲೆ ಸುದೀಪ್ ಬಾಲಿವುಡ್ ನಲ್ಲಿ ಫೂಂಕ್, ರಣ್ ಮತ್ತು ರಕ್ತ ಚರಿತ್ರ ಚಿತ್ರದಲ್ಲಿ ಅಭಿನಯಿಸಿದ್ದಾರೆ. ಅನೇಕ ವರ್ಷಗಳ ಬಳಿಕ ಮತ್ತೆ ಹಿಂದಿ ಚಿತ್ರರಂಗದಲ್ಲಿ ಮಿಂಚಲು ಸಜ್ಜಾಗಿದ್ದಾರೆ. ಇನ್ನು ಸುದೀಪ್ ಅಭಿನಯದ ತೆಲುಗಿನ 'ಸೈರ ನರಸಿಂಹ ರೆಡ್ಡಿ' ಚಿತ್ರ ಪೋಸ್ಟ್ ಪ್ರೊಡಕ್ಷನ್ ಕೆಲಸದಲ್ಲಿ ಬ್ಯುಸಿಯಾಗಿದೆ. ಕನ್ನಡದ ಜೊತೆಗೆ ಬೇರೆ ಬೇರೆ ಭಾಷೆಯ ಚಿತ್ರರಂಗದಲ್ಲು ತೊಡಗಿಕೊಂಡಿರುವ ಕಿಚ್ಚನ ವಿಭಿನ್ನ ಸಿನಿಮಾಗಳನ್ನು ನೋಡಲು ಅಭಿಮಾನಿಗಳು ಜಾತಕ ಪಕ್ಷಿಯಂತೆ ಕಾಯುತ್ತಿದ್ದಾರೆ.

  English summary
  Kannada actor Kiccha Sudeep joins Dabangg-3 sets on this saturday. Sudeep playing a role of the antagonist Sikander Bharadwaj. This movie is directed by prabhudeva.

  Kannada Photos

  Go to : More Photos
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X
  X