ಚುನಾವಣೆಗೆ ಮುಂಚೆ ಯುವಕರಿಗೆ ಸಂದೇಶ ನೀಡಿದ ಕಿಚ್ಚ ಸುದೀಪ್

By Bharath Kumar

Recommended Video

ಚುನಾವಣೆಗೆ ಮುಂಚೆ ಯುವಕರಿಗೆ ಸಂದೇಶ ನೀಡಿದ ಕಿಚ್ಚ ಸುದೀಪ್ | FIlmibeat Kannada

ಕರ್ನಾಟಕ ವಿಧಾನಸಭೆ ಚುನಾವಣೆಗೆ ಇನ್ನೇನೂ ಕೆಲವೇ ತಿಂಗಳು ಮಾತ್ರ ಬಾಕಿಯಿದೆ. ಎಲ್ಲ ಪಕ್ಷಗಳು ತಮ್ಮ ಅಭ್ಯರ್ಥಿಗಳನ್ನ ಅಂತಿಮಗೊಳಿಸಿ, ಪ್ರಚಾರಕ್ಕಾಗಿ ಸ್ಟಾರ್ ಕಲಾವಿದರನ್ನ ಕರೆತರುವ ಪ್ರಯತ್ನ ಮಾಡುತ್ತಿದೆ.

ಇನ್ನು ಕಿಚ್ಚ ಸುದೀಪ್ ಈ ಬಾರಿ ಚುನಾವಣ ಅಖಾಡಕ್ಕೆ ಧುಮುಕುತ್ತಾರೆ, ರಾಜಕೀಯ ಪಕ್ಷದ ಪರ ಪ್ರಚಾರ ಮಾಡ್ತಾರೆ ಎನ್ನಲಾಗಿದೆ. ಈ ಮಧ್ಯೆ ಸುದೀಪ್ ಅವರು ಮತದಾನದ ಬಗ್ಗೆ ಕ್ಯಾಂಪೈನ್ ಆರಂಭಿಸಿದ್ದಾರೆ.

ಹೌದು, ಮುಂಬರುವ ಚುನಾವಣೆಯಲ್ಲಿ ಯುವಕರು ಹೆಚ್ಚು ಭಾಗವಹಿಸಬೇಕು. ಎಲ್ಲರೂ ಮತದಾನದಲ್ಲಿ ಪಾಲ್ಗೊಳ್ಳಬೇಕು ಎಂದು ಸುದೀಪ್ ಒತ್ತಾಯಿಸಿದ್ದಾರೆ. ಈ ಕುರಿತು ಒಂದು ವಿಡಿಯೋ ಕೂಡ ಮಾಡಿದ್ದಾರೆ.

Kiccha Sudeep urged the youth register themselves as voters

ಒಂದು ಉತ್ತಮ ಸಮಾಜ ಮತ್ತು ಉತ್ತಮ ದೇಶವನ್ನ ಕಟ್ಟಲು ಮತದಾನ ತುಂಬ ಅವಶ್ಯಕ. ಭ್ರಷ್ಟಚಾರಿಗಳು ಕಿತ್ತೆಸೆಯಲು ಮತ್ತು ಒಬ್ಬ ಉತ್ತಮ ನಾಯಕನನ್ನ ಉಳಿಸಿಕೊಳ್ಳಲು ನಿಮ್ಮ ಮತ ಅತ್ಯಾಮೂಲ್ಯ. ಹೀಗಾಗಿ, ಮತದಾನ ಮಾಡಿ, ಮತದಾನ ಮಾಡಲು ಮತದಾರರ ಗುರುತಿನ ಚೀಟಿ ಮಾಡಿಸಿಕೊಳ್ಳಿ. 18 ವರ್ಷ ಆಗುತ್ತಿದ್ದಾಗೆ ನೀವು ಮತದಾನ ಮಾಡಲು ಅರ್ಹರು. ಯಾರ ಬಳಿ ವೋಟ್ ಐಡಿ ಕಾರ್ಡ್ ಇಲ್ವೋ, ದಯವಿಟ್ಟು ಎಲ್ಲರೂ ವೋಟ್ ಐಡಿ ಕಾರ್ಡ್ ಮಾಡಿಸಿ'' ಎಂದು ಮನವಿ ಮಾಡಿಕೊಂಡಿದ್ದಾರೆ.

''ಸದೃಡ ಪ್ರಜಾಪ್ರಭುತ್ವ ನಿರ್ಮಾಣಕ್ಕೆ ಮತದಾರನೇ ನಿರ್ಣಾಯಕ, ಈಗಲೇ ಮತದಾರರಾಗಿ ನೊಂದಾಯಿಸಿಕೊಳ್ಳಿ'' ಎಂದು ಬಿ-ಪ್ಯಾಕ್ ಎಂಬ ಸಂಸ್ಥೆ ಅಭಿಯಾನ ಆರಂಭಿಸಿದ್ದಾರೆ. ಇವರಿಗೆ ಕಿಚ್ಚ ಸುದೀಪ್ ಸಹಕರಿಸಿದ್ದು, ಯುವಕರಿಗೆ ಸಂದೇಶ ನೀಡಿದ್ದಾರೆ.

More from Filmibeat

English summary
Sandalwood actor, Kiccha Sudeep urged the youth, to register themselves as voters & to actively participate in the upcoming elections.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X