For Quick Alerts
  ALLOW NOTIFICATIONS  
  For Daily Alerts

  ಶೆಟ್ರು ಶಾಲೆ ಸೇರಿದ ಕಿಚ್ಚ ಸುದೀಪ್

  By Pavithra
  |

  'ಕಿರಿಕ್ ಪಾರ್ಟಿ' ,'ರಿಕ್ಕಿ' ಅಂತಹ ಸೂಪರ್ ಹಿಟ್ ಸಿನಿಮಾವನ್ನು ನಿರ್ದೇಶನ ಮಾಡಿದಂತಹ ರಿಷಬ್ ಶೆಟ್ಟಿ ನಿರ್ದೇಶನದ 'ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆ ಕಾಸರಗೋಡು' ಸಿನಿಮಾದ ಹಾಡುಗಳು ಇಂದು ಬಿಡುಗಡೆಯಾಗುತ್ತಿದೆ .

  ಸಿನಿಮಾದ ಹೆಸರೇ ಹೇಳುವಂತೆ "ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆ ಕಾಸರಗೋಡು' ಮಕ್ಕಳ ಸಿನಿಮ .ಮನೋರಂಜನೆ ಜೊತೆಯಲ್ಲಿ ಸಾಮಾಜಿಕ ಕಳಕಳಿಯೊಂದಿಗೆ ತೆರೆಗೆ ಬರಲು ಸಿದ್ಧವಾಗಿರುವ "ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆ ಕಾಸರಗೋಡು ಚಿತ್ರದ ಹಾಡುಗಳನ್ನು ಇಂದು ಕಿಚ್ಚ ಸುದೀಪ್ ಬಿಡುಗಡೆ ಮಾಡಲಿದ್ದಾರೆ .

  ಈಗಾಗಲೇ ಸಿನಿಮಾದ 'ದಡ್ಡ ದಡ್ಡ' ಹಾಗೂ 'ಬಲೂನ್' ಮತ್ತು 'ತಾಯಿ ಶಾರದೆ'....ಹಾಡುಗಳು ಸೂಪರ್ ಹಿಟ್ ಆಗಿದ್ದು. ಚಿತ್ರಕ್ಕೆ ವಾಸುಕಿ ವೈಭವ್ ಸಂಗೀತ ನಿರ್ದೇಶನ ಮಾಡಿದ್ದಾರೆ . ಚಿತ್ರೀಕರಣ ಕಂಪ್ಲೀಟ್ ಮಾಡಿರುವ 'ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆ ಕಾಸರಗೋಡು' ಸಿನಿಮಾ ಆಗಸ್ಟ್ ತಿಂಗಳಲ್ಲಿ ತೆರೆಗೆ ಬರಲು ಸಿದ್ಧವಾಗಿದೆ .

  ಮಕ್ಕಳ ಸಿನಿಮಾಗಳು ಕಣ್ಮರೆಯಾಗುತ್ತಿರುವ ಇಂತಹ ಸಂದರ್ಭದಲ್ಲಿ ಮಕ್ಕಳ ಚಿತ್ರವನ್ನು ನಿರ್ದೇಶನ ಮಾಡಿರುವ ರಿಷಬ್ ಶೆಟ್ಟಿ ಅವರ ನಿರ್ಧಾರಕ್ಕೆ ಗಾಂಧಿನಗರದ ಮಂದಿ ಮೆಚ್ಚುಗೆ ವ್ಯಕ್ತಪಡಿಸಿದ್ದ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

  ಸಿನಿಮಾವನ್ನು ನಿರ್ದೇಶನ ಮಾಡುವುದರ ಜತೆಯಲ್ಲಿ 'ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆ ಕಾಸರಗೋಡು' ಚಿತ್ರದ ನಿರ್ಮಾಣದ ಜವಾಬ್ದಾರಿಯನ್ನು ರಿಷಬ್ ಅವರೇ ಹೊತ್ತುಕೊಂಡಿದ್ದಾರೆ .

  ಹಿಂದಿನಿಂದಲೂ ಕಿಚ್ಚ ಸುದೀಪ್ ಅವರೊಂದಿಗೆ ಉತ್ತಮ ಬಾಂಧವ್ಯವನ್ನು ಹೊಂದಿರುವ ರಿಷಬ್ ಶೆಟ್ಟಿ ಅವರ ಚಿತ್ರದ ಆಡಿಯೋ ಬಿಡುಗಡೆ ಮಾಡುವ ಮೂಲಕ ಸುದೀಪ್ ಚಿತ್ರಕ್ಕೆ ಬೆಂಬಲ ನೀಡುತ್ತಿದ್ದಾರೆ .

  English summary
  Kannada actor Kiccha Sudeep will release audio from sa.hi.pra.patashale Kasargod. The film directed by Rishab Shetty.

  Kannada Photos

  Go to : More Photos
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X
  X