ಸುದೀಪ್ ಅನಾರೋಗ್ಯದ ಬಗ್ಗೆ ಸ್ಪಷ್ಟನೆ: ನಿರೂಪಣೆಯಿಂದ ಹಿಂದೆ ಸರಿದ ಕಿಚ್ಚ
ನಟ, ನಿರ್ದೇಶಕ ಹಾಗೂ ನಿರೂಪಕ ಕಿಚ್ಚ ಸುದೀಪ್ ಅವರ ಆರೋಗ್ಯದಲ್ಲಿ ವ್ಯತ್ಯಾಸ ಉಂಟಾಗಿದೆ ಎಂಬ ಮಾಹಿತಿ ಲಭ್ಯವಾಗಿತ್ತು. ಇದೀಗ, ಸ್ವತಃ ಸುದೀಪ್ ಅವರೇ ಆರೋಗ್ಯ ಕುರಿತು ಟ್ವಿಟ್ಟರ್ ಮೂಲಕ ಮಾಹಿತಿ ನೀಡಿದ್ದಾರೆ.
Recommended Video
ಸುದೀಪ್ ಅನಾರೋಗ್ಯದಿಂದ ಬಳಲುತ್ತಿರುವುದಾಗಿ ಸ್ಪಷ್ಟಪಡಿಸಿದ್ದಾರೆ. ಆದರೆ, ನಿಖರವಾಗಿ ಏನಾಗಿದೆ ಎಂಬುದರ ಬಗ್ಗೆ ತಿಳಿಸಿಲ್ಲ. ವೈದ್ಯರ ಸಲಹೆಯಂತೆ ವಿಶ್ರಾಂತಿ ಪಡೆಯುತ್ತಿರುವುದಾಗಿ ಹೇಳಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಸುದೀಪ್ ''ಅನಾರೋಗ್ಯದಿಂದ ಬಳಲುತ್ತಿದ್ದರು ವಾರಾಂತ್ಯದೊಳಗೆ ಚೇತರಿಸಿಕೊಳ್ಳುವ ನಂಬಿಕೆ ಇದೆ. ಆದರೆ, ವೈದ್ಯರ ಸಲಹೆಯ ಮೇರೆಗೆ ನಾನು ಸ್ವಲ್ಪ ಹೆಚ್ಚು ವಿಶ್ರಾಂತಿ ಪಡೆಯಬೇಕಿದೆ'' ಎಂದು ಟ್ವೀಟ್ ಮಾಡಿದ್ದಾರೆ.

ಸುದೀಪ್ ಅವರ ಆರೋಗ್ಯದಲ್ಲಿ ವ್ಯತ್ಯಯ ಉಂಟಾಗಿರುವ ಹಿನ್ನೆಲೆ ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ರಿಯಾಲಿಟಿ ಶೋ ನಿರೂಪಣೆಯಿಂದ ಸುದೀಪ್ ಈ ವಾರ ಹಿಂದೆ ಸರಿಯಲಿದ್ದಾರೆ.
ವಾರಾಂತ್ಯಕ್ಕೆ ಸುದೀಪ್ ಅವರು ಪ್ರಮುಖ ಪಾತ್ರ ವಹಿಸುತ್ತಿದ್ದರು. ಈಗ ಸುದೀಪ್ ಇಲ್ಲದೇ ಈ ಶೋ ಹೇಗೆ ಆಗಲಿದೆ ಎಂಬ ಕುತೂಹಲ ವೀಕ್ಷಕರನ್ನು ಕಾಡ್ತಿದೆ. ಈ ಕುತೂಹಲ ಪ್ರೇಕ್ಷಕರಿಗೆ ಮಾತ್ರವಲ್ಲ ಸ್ವತಃ ಸುದೀಪ್ ಅವರಿಗೂ ಕಾಡ್ತಿದೆ.

ಸುದೀಪ್ ಅವರ ಅನಾರೋಗ್ಯದ ಬಗ್ಗೆ ತಿಳಿಯುತ್ತಿದ್ದಂತೆ ಅಭಿಮಾನಿಗಳು 'ಆದಷ್ಟೂ ಬೇಗ ಚೇತರಿಸಿಕೊಳ್ಳಿ, ವಿಶ್ರಾಂತಿ ಪಡೆಯಿರಿ' ಎಂದು ಪ್ರಾರ್ಥಿಸಿದ್ದಾರೆ. 'ನೀವಿಲ್ಲದೇ ಆ ಶೋ ನೋಡಲು ಸಾಧ್ಯವಿಲ್ಲ, ಬೇಗ ಗುಣಮುಖರಾಗಿ ಸರ್'' ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಇನ್ನುಳಿದಂತೆ ಸುದೀಪ್ ನಟನೆಯ ಕೋಟಿಗೊಬ್ಬ 3 ಸಿನಿಮಾ ತೆರೆಗೆ ಬರಲು ಸಜ್ಜಾಗಿದೆ. ಅನೂಪ್ ಭಂಡಾರಿ ನಿರ್ದೇಶನದ ವಿಕ್ರಾಂತ್ ರೋಣ ಚಿತ್ರ ಆಗಸ್ಟ್ 19ಕ್ಕೆ ವರ್ಲ್ಡ್ ವೈಡ್ ಬಿಡುಗಡೆಯಾಗುತ್ತಿದೆ ಎಂದು ಅಧಿಕೃತವಾಗಿ ಪ್ರಕಟವಾಗಿದೆ.


Click it and Unblock the Notifications











