ಸಿಎಂ ಯಡಿಯೂರಪ್ಪ ಭೇಟಿಯಾದ ಕಿಚ್ಚ ಸುದೀಪ್: ಕಾರಣವೇನು?
ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಸಿಎಂ ಯಡಿಯೂರಪ್ಪ ಅವರನ್ನು ದಿಢೀರ್ ಭೇಟಿಯಾಗಿದ್ದಾರೆ. ಸಿಎಂ ಕಾವೇರಿ ನಿವಾಸಕ್ಕೆ ತೆರಳಿದ್ದ ಸುದೀಪ್, ಸಿಎಂ ಜೊತೆ ಕೆಲ ಸಮಯ ಮಾತುಕತೆ ನಡೆಸಿದ್ದಾರೆ. ಕಿಚ್ಚ ದಿಢೀರ್ ಸಿಎಂ ಭೇಟಿಯಾಗಿರುವುದು ಅಚ್ಚರಿ ಮೂಡಿಸಿದೆ.
Recommended Video
ಔಪಚಾರಿಕ ಭೇಟಿ ಎಂದು ಸಿಎಂ ಕಚೇರಿ ತಿಳಿಸಿದರೂ ಸಹ ಅಭಿಮಾನಿಗಳಲ್ಲಿ ಕುತೂಹಲ ಮೂಡಿಸಿದೆ. ಸಿಎಂ ಮತ್ತು ಸುದೀಪ್ ನಡುವೆ ಅನೇಕ ವಿಚಾರಗಳು ಚರ್ಚೆ ನಡೆಯಿತು ಎನ್ನಲಾಗಿದೆ. ಇತ್ತೀಚಿಗಷ್ಟೆ ಸುದೀಪ್ 25 ವರ್ಷದ ಬೆಳ್ಳಿಹಬ್ಬ ಸಂಭ್ರಮಕ್ಕೆ ಸಿಎಂ ಯಡಿಯೂರಪ್ಪ ಭೇಟಿ ನೀಡಿದ್ದರು.

ಬೆಳ್ಳಿಹಬ್ಬದ ಸಂಭ್ರಮದಲ್ಲಿ ಕಿಚ್ಚನಿಗೆ ಸನ್ಮಾನಿಸಿ ಗೌರವ ಸಲ್ಲಿಸಿದ್ದರು. ಹೀಗಾಗಿ ಅಭಿನಂದನೆ ಸಲ್ಲಿಸಲು ಸುದೀಪ್ ಸಿಎಂ ನಿವಾಸಕ್ಕೆ ತೆರಳಿದ್ದರು ಎನ್ನುವ ಮಾಹಿತಿ ತಿಳಿದುಬಂದಿದೆ. ಇದೇ ಸಮಯದಲ್ಲಿ ಕಿಚ್ಚ, ಸಿಎಂ ಯಡಿಯೂರಪ್ಪ ಅವರಿಗೆ ಶಾಲು ಹೊದಿಸಿ ಸನ್ಮಾನಿಸಿದರು. ಸುದೀಪ್‌ಗೆ ನಿರ್ಮಾಪಕ ಜಾಕ್ ಮಂಜು ಸಾಥ್ ನೀಡಿದ್ದಾರೆ. ಸುದೀಪ್ ಭೇಟಿಯ ವೇಳೆ ಸಿಎಂ ಪುತ್ರ ಬಿವೈ ವಿಜಯೇಂದ್ರ ಕೂಡ ಉಪಸ್ಥಿತರಿದ್ದರು.

ಸುದೀಪ್ ಸದ್ಯ ಕೋಟಿಗೊಬ್ಬ-3 ಸಿನಿಮಾದ ರಿಲೀಸ್‌ಗೆ ಎದುರು ನೋಡುತ್ತಿದ್ದಾರೆ. ಈಗಾಗಲೇ ಚಿತ್ರದ ಪ್ರಮೋಷನ್ ಕೆಲಸಗಳು ಭರದಿಂದ ನಡೆಯುತ್ತಿದೆ. ಇನ್ನು ವಿಕ್ರಾಂತ್ ರೋಣ ಸಿನಿಮಾದಲ್ಲೂ ಸುದೀಪ್ ನಿರತರಾಗಿದ್ದಾರೆ.


Click it and Unblock the Notifications











