For Quick Alerts
  ALLOW NOTIFICATIONS  
  For Daily Alerts

  ಪುನೀತ್ ಮೊದಲ ಬಯೋಗ್ರಫಿ ‘ನೀನೇ ರಾಜಕುಮಾರ’ ಕೃತಿ ಬಿಡುಗಡೆ ಮಾಡಿದ ಸುದೀಪ್!

  |

  ಅತೀ ನಿರೀಕ್ಷಿತ ಪುನೀತ್ ರಾಜ್ ಕುಮಾರ್ ಬಯೋಗ್ರಫಿ 'ನೀನೇ ರಾಜಕುಮಾರ' ಕೃತಿಯನ್ನು ಹೆಸರಾಂತ ನಟ ಕಿಚ್ಚ ಸುದೀಪ್ ಇಂದು (ಮಾರ್ಚ್ 15) ಬೆಂಗಳೂರಿನಲ್ಲಿ ಬಿಡುಗಡೆ ಮಾಡಿದ್ದಾರೆ. ಪತ್ರಕರ್ತ ಡಾ. ಶರಣು ಹುಲ್ಲೂರು ಬರೆದಿರುವ ಈ ಕೃತಿ ಈಗಾಗಲೇ ಬಿಡುಗಡೆಗೂ ಮುನ್ನ ಎರಡನೇ ಮುದ್ರಣ ಕಂಡಿದೆ. ಕೃತಿಯ ಬಿಡುಗಡೆ ನಂತರ ಮಾತನಾಡಿದ ಸುದೀಪ್, 'ಒಂದೊಳ್ಳೆಯ ಕೃತಿಯ ಮೂಲಕ ಶರಣು ಹುಲ್ಲೂರು ಪುನೀತ್ ರಾಜ್ ಕುಮಾರ್ ಅವರಿಗೆ ನಮನ ಸಲ್ಲಿಸಿದ್ದಾರೆ. ಪುನೀತ್ ಅವರದ್ದು ಪುಸ್ತಕವಾಗುವಂತಹ ವ್ಯಕ್ತಿತ್ವ. ಈ ಕೃತಿ ಅವರ ಜೀವನವನ್ನು ಸೊಗಸಾಗಿ ಹಿಡಿದಿಟ್ಟಿದೆ' ಎಂದರು. ಅಲ್ಲದೆ 'ಯಾವತ್ತಿಗೂ ನಾನು ಪುನೀತ್ ಅವರನ್ನು ಮಿಸ್ ಮಾಡಿಕೊಳ್ಳುತ್ತೇನೆ' ಎಂದಿದ್ದಾರೆ.

  ಕಿಚ್ಚ ಸುದೀಪ್ ಪುಸ್ತಕವನ್ನು ಎರಡು ವರ್ಷಗಳ ಹಿಂದೆ ಪುನೀತ್ ರಾಜ್ ಕುಮಾರ್ ಬಿಡುಗಡೆ ಮಾಡಿದ್ದರು. ಪುನೀತ್ ಬಯೋಗ್ರಫಿಯನ್ನು ಇದೀಗ ಸುದೀಪ್ ರಿಲೀಸ್ ಮಾಡಿದ್ದು ಭಾವುಕತೆಗೆ ಸಾಕ್ಷಿಯಾಗಿತ್ತು. ಈ ಪುಸ್ತಕ ಬಿಡುಗಡೆ ಸಂದರ್ಭದಲ್ಲಿ ನಿರ್ಮಾಪಕರಾದ ಜಾಕ್ ಮಂಜು, ಕುಮಾರ್, ಸಾವಣ್ಣ ಪ್ರಕಾಶನದ ಜಮೀಲ್ ಮತ್ತು ಲೇಖಕ ಶರಣು ಹುಲ್ಲೂರು ಉಪಸ್ಥಿತರಿದ್ದರು. ಪುನೀತ್ ಕುರಿತಾಗಿ ಬಂದಂತಹ ಮೊದಲ ಬಯೋಗ್ರಫಿ ಇದಾಗಿದ್ದು, 260ಕ್ಕೂ ಹೆಚ್ಚು ಪುಟಗಳನ್ನು ಹೊಂದಿದೆ. ಪುನೀತ್ ಹುಟ್ಟುಹಬ್ಬದ ದಿನದಿಂದ 'ನೀನೇ ರಾಜಕುಮಾರ್' ಕೃತಿ ಮಾರಾಟವಾಗಲಿದೆ. ವಿಶೇಷ ಅಂದರೆ, ಪುನೀತ್ ಅವರ ಖಾಸಗಿ ಜೀವನ, ವೃತ್ತಿ ಜೀವನ, ಅಪರೂಪದ ಸಂಗತಿಗಳು ಮತ್ತು ಫೋಟೋಗಳನ್ನುಈ ಪುಸ್ತಕದಲ್ಲಿ ಸೊಗಸಾಗಿ ಹಿಡಿದಿಟ್ಟಿದ್ದಾರೆ ಲೇಖಕ ಶರಣು ಹುಲ್ಲೂರು.

  ಈ ಹಿಂದೆ 'ಅಂಬರೀಶ' ಪುಸ್ತಕವನ್ನು ಪ್ರಕಟಿಸಿರುವ ಸಾವಣ್ಣ ಪ್ರಕಾಶನವೇ 'ನೀನೇ ರಾಜಕುಮಾರ' ಪುಸ್ತಕವನ್ನು ಸಹ ಪ್ರಕಟಿಸಿದೆ. ಖ್ಯಾತ ಬರಹಗಾರ ಜೋಗಿ ಈ ಪುಸ್ತಕಕ್ಕೆ ಹಿನ್ನುಡಿ ಬರೆದಿದ್ದಾರೆ. ಹಿರಿಯ ಪತ್ರಕರ್ತರಾದ ಮುರಳೀಧರ್ ಖಜಾನೆ ಮುನ್ನುಡಿ ಬರೆದಿದ್ದಾರೆ. ಡಾ.ಅಂಬರೀಶ್, ಡಾ.ವಿಷ್ಣುವಧರ್ನ್, ಕಿಚ್ಚ ಸುದೀಪ್ ಹಾಗೂ ಸಂಚಾರಿ ವಿಜಯ್ ಪುಸ್ತಕದ ಬಳಿಕ ಸಿನಿಮಾ ರಂಗದವರ ಕುರಿತಾಗಿ ಶರಣು ಹುಲ್ಲೂರು ಬರೆದ ಮತ್ತೊಂದು ಪುಸ್ತಕ ಇದಾಗಿದೆ.

  ಪುನೀತ್ ರಾಜ್ ಕುಮಾರ್ ಕುರಿತಾಗಿ ಬರುತ್ತಿರುವ ಮೊದಲ ಬಯೋಗ್ರಫಿ ಇದಾಗಿದೆ. ಹಾಗಂತ ಇದರಲ್ಲಿ ಬರೀ ಪುನೀತ್ ವೈಯಕ್ತಿಕ ಜೀವನ ಕುರಿತಾದ ವಿಷಯಗಳು ಮಾತ್ರವಿಲ್ಲ. ಅವರ ಬದುಕಿನ ಜೊತೆಗೆ ಸಿನಿಮಾ ಇತಿಹಾಸವಿದೆ. ಅವರ ವೃತ್ತಿ ಮತ್ತು ಖಾಸಗಿ ಜೀವನ ಕುರಿತಾದ ಅಪರೂಪದ ವಿಷಯಗಳನ್ನು ಮತ್ತು ಛಾಯಾಚಿತ್ರಗಳನ್ನು ಈ ಪುಸ್ತಕ ಒಳಗೊಂಡಿದೆ. ಬಾಲ್ಯ, ಬಾಲ್ಯದಲ್ಲಿ ನಟಿಸಿದ ಸಿನಿಮಾಗಳು ಮತ್ತು 'ಅರಸು' ಚಿತ್ರದಿಂದ 'ಜೇಮ್ಸ್' ಚಿತ್ರದವರೆಗಿನ ಸಮಗ್ರ ನೋಟ ಇಲ್ಲಿದೆ. ಅವರ ಖಾಸಗಿ ಬದುಕಿನ ಅನೇಕ ಸಂಗತಿಗಳನ್ನು ಈ ಪುಸ್ತಕ ತಿಳಿಸಲಿದೆ. ಒಟ್ಟು 264 ಪುಟಗಳ ಸಮಗ್ರ ಜೀವನ ಚರಿತ್ರೆಯ ಪುಸ್ತಕ ಇದಾಗಿದ್ದು, ಒಟ್ಟು 34 ಅಧ್ಯಾಯಗಳನ್ನು ಇದು ಒಳಗೊಂಡಿದೆ. ಅಪ್ಪು ಅಭಿಮಾನಿಗಳು ಕೂಡ ಈ ಪುಸ್ತಕವನ್ನು ಕೊಂಡುಕೊಳ್ಳಲು ಕಾತುರರಾಗಿದ್ದಾರೆ.

  English summary
  Actor Kichcha Sudeep released Puneeth Rajkumar kannada biography written by journalist Sharanu Hulluru.
  Wednesday, March 16, 2022, 9:53
  IIFA

  Kannada Photos

  Go to : More Photos
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X
  X