ಸುದೀಪ್ ಬೇಗ ಗುಣಮುಖರಾಗಲಿ ಎಂದು ದೇವರಲ್ಲಿ ಪ್ರಾರ್ಥಿಸಿದ ಅಭಿಮಾನಿಗಳು
ಕಿಚ್ಚ ಸುದೀಪ್ ಅವರು ಅನಾರೋಗ್ಯದಿಂದ ಬಳಲುತ್ತಿದ್ದಾರೆ. ಸುದೀಪ್ ಅವರಲ್ಲಿ ಜ್ವರ ಕಾಣಿಸಿಕೊಂಡಿದ್ದು, ಮನೆಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ. ತಮ್ಮ ಆರೋಗ್ಯದ ಬಗ್ಗೆ ಟ್ವೀಟ್ ಮಾಡಿ ಸುದೀಪ್ ಮಾಹಿತಿ ನೀಡಿದ್ದರು.
Recommended Video
ಸುದೀಪ್ ಅವರು ಬೇಗ ಗುಣಮುಖರಾಗಲಿ ಎಂದು ಅಭಿಮಾನಿಗಳು ಪ್ರಾರ್ಥಿಸಿದ್ದಾರೆ. ಅಭಿನಯ ಚಕ್ರವರ್ತಿ ಶೀಘ್ರವಾಗಿ ಚೇತರಿಸಿಕೊಂಡು ಮತ್ತೆ ಕೆಲಸದಲ್ಲಿ ತೊಡಗಿಕೊಳ್ಳಲಿ ಎಂದು ಕಿಚ್ಚನ ಅಭಿಮಾನಿಗಳು ದೇವರಲ್ಲಿ ಮನವಿ ಮಾಡಿದ್ದಾರೆ.
ಈ ವಿಡಿಯೋಗಳು ಮತ್ತು ಫೋಟೋಗಳನ್ನು ಸುದೀಪ್ ತಮ್ಮ ಟ್ವಿಟ್ಟರ್‌ನಲ್ಲಿ ಹಂಚಿಕೊಂಡು ಹೃದಯಪೂರ್ವಕ ಧನ್ಯವಾದ ತಿಳಿಸಿದ್ದಾರೆ.

ಚೆನ್ನಗಿರಿಯ (ತಾ) ಅಖಿಲ ಕರ್ನಾಟಕ ವಾಲ್ಮೀಕಿ ರತ್ನ ಬಾದ್ ಷಾ ಕಿಚ್ಚ ಸುದೀಪ್ ಸೇನೆ ಸದಸ್ಯರು ಆಂಜನೇಯ ದೇವಸ್ಥಾನದಲ್ಲಿ ಸುದೀಪ್ ಅವರು ಚೇತರಿಸಿಕೊಳ್ಳಲಿ ಎಂದು ವಿಶೇಷ ಪೂಜೆ ಸಲ್ಲಿಸಿದ್ದಾರೆ.
ವಿಕಲಚೇತನ ಅಭಿಮಾನಿಯೊಬ್ಬ ಸುದೀಪ್ ಅವರ ಆರೋಗ್ಯ ಬೇಗ ಸುಧಾರಿಸಲಿ ಎಂದು ದೇವರ ಸನ್ನಧಿಯಲ್ಲಿ ಬೇಡಿಕೊಳ್ಳುತ್ತಿರುವ ವಿಡಿಯೋವನ್ನು ಸಹ ಸುದೀಪ್ ಟ್ವಿಟ್ಟರ್‌ನಲ್ಲಿ ಶೇರ್ ಮಾಡಿದ್ದಾರೆ.
ಸುದೀಪ್ ಆರೋಗ್ಯ ಸರಿ ಇಲ್ಲದ ಕಾರಣ ವಾರಾಂತ್ಯದಲ್ಲಿ ನಡೆಸಿಕೊಡಬೇಕಾಗಿದ್ದ ರಿಯಾಲಿಟಿ ಶೋನಲ್ಲಿ ಭಾಗಿಯಾಗಿಲ್ಲ. ಈ ವಾರ ಸುದೀಪ್ ಇಲ್ಲದೇ ಶೋ ಪ್ರಸಾರವಾಗಿದೆ. ಇನ್ನು ಸುದೀಪ್ ನಟಿಸಿರುವ ಕೋಟಿಗೊಬ್ಬ 3 ಹಾಗೂ ಫ್ಯಾಂಟಮ್ ಚಿತ್ರಗಳು ಶೂಟಿಂಗ್ ಮುಗಿಸಿ ಬಿಡುಗಡೆಗೆ ಸಜ್ಜಾಗಿದೆ.


Click it and Unblock the Notifications











