MAX Release Date: ಬಹುನಿರೀಕ್ಷಿತ 'ಮ್ಯಾಕ್ಸ್' ರಿಲೀಸ್ ಡೇಟ್ ಘೋಷಣೆ; ಫ್ಯಾನ್ಸ್ ಖುಷ್

ಪದೇ ಪದೆ 'ಮ್ಯಾಕ್ಸ್' ಸಿನಿಮಾ ರಿಲೀಸ್ ಡೇಟ್ ತಡವಾಗಿ ಅಭಿಮಾನಿಗಳು ಬೇಸರಗೊಂಡಿದ್ದರು. ಕೊನೆಗೂ ರಿಲೀಸ್ ಡೇಟ್ ಅನೌನ್ಸ್ ಆಗಿದೆ. ಸಣ್ಣ ಟೀಸರ್ ಸಮೇತ ಅಭಿಮಾನಿಗಳಿಗೆ ಚಿತ್ರತಂಡ ಸರ್‌ಪ್ರೈಸ್ ನೀಡಿದೆ. ಈ ವರ್ಷವೇ ಸಿನಿಮಾ ತೆರೆಗೆ ಬರುವುದು ಖಚಿತವಾಗಿದೆ.

ಪೋಸ್ಟ್ ಪ್ರೊಡಕ್ಷನ್ಸ್ ತಡವಾಗಿದ್ದರಿಂತೆ 'ಮ್ಯಾಕ್ಸ್' ಸಿನಿಮಾ ರಿಲೀಸ್ ಡೇಟ್ ಬಗ್ಗೆ ಗೊಂದಲ ಇತ್ತು. ಸ್ವತಃ ಕಿಚ್ಚನಿಗೂ ಸಿನಿಮಾ ಯಾವಾರ ತೆರೆಗೆ ಬರಬಹುದು? ಎನ್ನುವ ಅಂದಾಜು ಇರಲಿಲ್ಲ. ಇತ್ತೀಚೆಗೆ ಬಿಗ್‌ಬಾಸ್ ವೇದಿಕೆಯಲ್ಲಿ ಮಾತನಾಡುತ್ತಾ "ಅದ್ಯಾವಾಗ ಪುಣ್ಯಾತ್ಮರು ಸಿನಿಮಾ ಬಿಡುಗಡೆಗೆ ದೊಡ್ಡ ಮನಸ್ಸು ಮಾಡ್ತಾರೋ ಗೊತ್ತಿಲ್ಲ" ಎಂದಿದ್ದರು.

kichcha Sudeep Starrer Max Makers announce release date with teaser

ಡಿಸೆಂಬರ್ 25ಕ್ಕೆ ಕ್ರಿಸ್‌ಮಸ್ ಸಂಭ್ರಮದಲ್ಲಿ 'ಮ್ಯಾಕ್ಸ್' ಸಿನಿಮಾ ಬಿಡುಗಡೆ ಆಗಲಿದೆ. ಅಧಿಕೃತವಾಗಿ ಈ ವಿಚಾರವನ್ನು ಚಿತ್ರತಂಡ ಟೀಸರ್ ಸಮೇತ ಘೋಷಣೆ ಮಾಡಿದೆ. ಈ ಸುದ್ದಿ ಕೇಳಿದ ಅಭಿಮಾನಿಗಳು ಸಂಭ್ರಮಿಸುತ್ತಿದ್ದಾರೆ. ಹಬ್ಬದ ಸಂಭ್ರಮದಲ್ಲಿ ಚಿತ್ರಕ್ಕೆ ಒಳ್ಳೆ ಓಪನಿಂಗ್ ಸಿಗುವ ನಿರೀಕ್ಷೆಯಿದೆ. ಉಪೇಂದ್ರ ನಿರ್ದೇಶಿಸಿ ನಟಿಸಿರುವ 'ಯುಐ' ಸಿನಿಮಾ ಡಿಸೆಂಬರ್ 20ಕ್ಕೆ ತೆರೆಗೆ ಬರಲಿದೆ.

'ಮ್ಯಾಕ್ಸ್' ಹಾಗೂ 'ಯುಐ' ಎರಡೂ ಕೂಡ ಪ್ಯಾನ್ ಇಂಡಿಯಾ ಸಿನಿಮಾಗಳು. ಹಾಗಾಗಿ ಬಾಕ್ಸಾಫೀಸ್ ಕ್ಲ್ಯಾಶ್ ನಡೆಯುತ್ತಾ ಎನ್ನುವ ಚರ್ಚೆ ಶುರುವಾಗಿದೆ. ಕರ್ನಾಟಕದಲ್ಲಿ ಅಂತೂ ಸುದೀಪ್ ಹಾಗೂ ಉಪೇಂದ್ರ ಇಬ್ಬರಿಗೂ ದೊಡ್ಡ ಅಭಿಮಾನಿ ಬಳಗ ಇದೆ. ಹಾಗಾಗಿ ಎರಡೂ ಚಿತ್ರಗಳಿಗೆ ಹೇಗೆ ಪ್ರತಿಕ್ರಿಯೆ ಸಿಗುತ್ತದೆ ಎನ್ನುವುದನ್ನು ಕಾದು ನೋಡಬೇಕಿದೆ.

ಡಿಸೆಂಬರ್ 20 ಶುಕ್ರವಾರ. ಅಂದು 'ಯುಐ' ಸಿನಿಮಾ ತೆರೆಗೆ ಬರಲಿದೆ. ಇನ್ನು ಡಿಸೆಂಬರ್ 25ಕ್ಕೆ ಬುಧವಾರ. ಅಂದು 'ಮ್ಯಾಕ್ಸ್' ಮಾಸ್ ಮನರಂಜನೆ ಮೆರವಣಿಗೆ ಶುರುವಾಗಲಿದೆ. 'ಯುಐ' ಚಿತ್ರದ ನಿರ್ಮಾಪಕ ಕೆ. ಪಿ ಶ್ರೀಕಾಂತ್ ಹಾಗೂ ಸುದೀಪ್ ನಡುವೆ ಆತ್ಮೀಯ ಒಡನಾಟ ಇದೆ. ಹಾಗಾಗಿ ಯಾವುದೇ ಬಾಕ್ಸಾಫೀಸ್ ಕ್ಲ್ಯಾಶ್ ಎನ್ನುವ ಚರ್ಚೆ ಇಲ್ಲಿ ಬರಲ್ಲ. ಎಲ್ಲಾ ರೀತಿಯಲ್ಲಿ ಲೆಕ್ಕಾಚಾರ ಹಾಕಿ 'ಮ್ಯಾಕ್ಸ್' ಸಿನಿಮಾ ರಿಲೀಸ್ ಡೇಟ್ ಘೋಷಣೆ ಮಾಡಲಾಗಿದೆ.

ಎರಡೂ ಕೂಡ ದೊಡ್ಡ ಚಿತ್ರಗಳಾಗಿರುವುದರಿಂದ ಸ್ಕ್ರೀನ್‌ಗಳ ಹಂಚಿಕೆಯಲ್ಲಿ ವ್ಯತ್ಯಾಸ ಆಗುತ್ತಾ? ಎನ್ನುವ ಕುತೂಹಲ ಮೂಡಿದೆ. ಆದರೆ ಈ ಕ್ಷಣಕ್ಕೂ ಡಿಸೆಂಬರ್ 20ಕ್ಕೆ 'ಯುಐ' ಸಿನಿಮಾ ಬಿಡುಗಡೆ ಆಗುವುದು ಕನ್ಫರ್ಮ್ ಆಗಿದೆ. ಇನ್ನು ಡಿಸೆಂಬರ್ 25ಕ್ಕೆ ಬಾಲಿವುಡ್‌ನ 'ಬೇಬಿ ಜಾನ್' ಸಿನಿಮಾ ಬಿಡುಗಡೆ ಆಗಲಿದೆ.

kichcha Sudeep Starrer Max Makers announce release date with teaser

'ಮ್ಯಾಕ್ಸ್' ಸಿನಿಮಾ ರಿಲೀಸ್ ತಡವಾಗಿದ್ದಕ್ಕೆ ಸುದೀಪ್ ಅಭಿಮಾನಿಗಳು ಬೇಸರಗೊಂಡಿದ್ದರು. ಈ ವರ್ಷ ಸಿನಿಮಾ ತೆರೆಗೆ ಬರೋದೆ ಇಲ್ವಾ? ಎಂದು ತಲೆ ಕೆಡಿಸಿಕೊಂಡಿದ್ದರು. ಅಂತೂ ಇಂತೂ ಇದೇ ವರ್ಷ ಸಿನಿಮಾ ಬಿಡುಗಡೆ ಆಗುತ್ತಿದೆ ಎಂದು ತಿಳಿದು ನಿಟ್ಟುಸಿರು ಬಿಟ್ಟಿದ್ದಾರೆ. ಶೀಘ್ರದಲ್ಲೇ ಇನ್ನುಳಿದ ಸಾಂಗ್ಸ್ ಹಾಗೂ ಟ್ರೈಲರ್ ರಿಲೀಸ್ ಆಗಲಿದೆ. ಪ್ಯಾನ್ ಇಂಡಿಯಾ ಮಟ್ಟದಲ್ಲಿ ಸುದೀಪ್ ಪ್ರಮೋಷನ್ ಕೈಗೆತ್ತಿಕೊಳ್ಳಲಿದ್ದಾರೆ.

ತಮಿಳಿನ ವಿಜಯ್ ಕಾರ್ತಿಕೇಯನ್ 'ಮ್ಯಾಕ್ಸ್' ಚಿತ್ರಕ್ಕೆ ಆಕ್ಷನ್ ಕಟ್ ಹೇಳಿದ್ದಾರೆ. ಕನ್ನಡ ಹಾಗೂ ತಮಿಳು ತಂತ್ರಜ್ಞರು, ಕಲಾವಿದರು ತಂಡದಲ್ಲಿದ್ದಾರೆ. ಅಜನೀಶ್ ಸಂಗೀತ, ಶೇಖರ್ ಚಂದ್ರ ಛಾಯಾಗ್ರಹಣ ಚಿತ್ರಕ್ಕಿದೆ. ವರಲಕ್ಷ್ಮಿ ಶರತ್‌ಕುಮಾರ್, ಉಗ್ರಂ ಮಂಜು ಚಿತ್ರದ ತಾರಾಗಣದಲ್ಲಿದ್ದಾರೆ. ತಮಿಳಿನ ಕಲೈಪುಲಿ ಎಸ್. ತನು ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ.

'ಮ್ಯಾಕ್ಸ್' ಚಿತ್ರದಲ್ಲಿ ಅರ್ಜುನ್ ಮಹಾಕ್ಷಯ್ ಎಂಬ ಪೊಲೀಸ್ ಆಫೀಸರ್ ಪಾತ್ರದಲ್ಲಿ ಸುದೀಪ್ ಮಿಂಚಿದ್ದಾರೆ. ಈಗಾಗಲೇ ಒಂದು ಸಾಂಗ್ ಹಾಗೂ 2 ಟೀಸರ್ ಬಂದು ಸುದೀಪಿಯನ್ಸ್ ಮನಗೆದ್ದಿದೆ. ಇದೀಗ ಟ್ರೈಲರ್ ರಿಲೀಸ್ ಆಗಬೇಕಿದೆ.

More from Filmibeat

English summary
Kichcha Sudeep's Max release date announced. Check latest poster, plot, cast
Read more about: sudeep max sandalwood
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X