ಸುದೀಪ್ ಅಭಿಮಾನಿಗಳಿಗೆ ಭರ್ಜರಿ ಸುದ್ದಿ; ಬಹಿರಂಗವಾಯ್ತು 'ವಿಕ್ರಾಂತ್ ರೋಣ' ಬಿಡುಗಡೆ ದಿನಾಂಕ

ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅಭಿನಯದ ಬಹುನಿರೀಕ್ಷಯ ವಿಕ್ರಾಂತ್ ರೋಣ ಸಿನಿಮಾ ಯಾವಾಗ ಬರುತ್ತೆ ಎಂದು ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದರು. ದೊಡ್ಡ ದೊಡ್ಡ ಸಿನಿಮಾಗಳ ರಿಲೀಸ್ ಡೇಟ್ ಬಹಿರಂಗ ವಾಗುತ್ತಿದ್ದಂತೆ ವಿಕ್ರಾಂತ್ ರೋಣನ ಮೇಲಿನ ಕುತೂಹಲ ಮತ್ತಷ್ಟು ಹೆಚ್ಚಾಗಿತ್ತು.

Recommended Video

Vikrant Rona Movie to Release Worldwide on August 19thರಿವೀಲ್ ಆಯ್ತು ವಿಕ್ರಾಂತ್ ರೋಣ ರಿಲೀಸ್ ದಿನಾಂಕ

ಕೊನೆಗೂ ವಿಕ್ರಾಂತ್ ರೋಣನ ದರ್ಶನಕ್ಕೆ ದಿನಾಂಕ ನಿಗದಿಯಾಗಿದೆ. ಅಭಿಮಾನಿಗಳು ಕುತೂಹಲ, ನಿರೀಕ್ಷೆಯೊಂದಿಗೆ ಕಾಯುತ್ತಿರುವ ವಿಕ್ರಾಂತ್ ರೋಣ ಆಗಸ್ಟ್ 19ಕ್ಕೆ ಎಂಟ್ರಿ ಕೊಡುತ್ತಿದೆ. ಕೊರೊನಾ ಹಾವಳಿಯ ನಡುವೆಯೂ ಧೈರ್ಯವಾಗಿ ಬಿಡುಗಡೆ ದಿನಾಂಕ ಘೋಷಣೆ ಮಾಡಿ ಅಚ್ಚರಿ ಮೂಡಿಸಿದೆ ಸಿನಿಮಾತಂಡ.

ಕೊರೊನಾ ಎರಡನೇ ಅಲೆ ಹೆಚ್ಚಾಗುತ್ತಿದ್ದಂತೆ ಬಹುತೇಕ ಸಿನಿಮಾಗಳ ಬಿಡುಗಡೆ ದಿನಾಂಕವನ್ನು ಮುಂದಕ್ಕೆ ಹಾಕಲಾಗಿದೆ. ಚಿತ್ರಮಂದಿರಗಳಲ್ಲಿ ಮತ್ತೆ ಶೇ.50 ರಷ್ಟು ಆಸನ ಭರ್ತಿಗೆ ಅವಕಾಶ ನೀಡಲಾಗಿದೆ. ಪರಿಸ್ಥಿತಿ ಹೀಗಿರುವಾಗಲೂ ಧೈರ್ಯ ಮಾಡಿ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ ಮಾಡಿದೆ ಸಿನಿಮಾತಂಡ.

Kichcha Sudeep Starrer Vikrant Rona Movie to Release Worldwide on August 19th


ಈ ಬಗ್ಗೆ ಕಿಚ್ಚ ಸುದೀಪ್ ಸಾಮಾಜಿಕ ಜಾಲತಾಣದಲ್ಲಿ ಬಹಿರಂಗ ಪಡಿಸಿ, 'ವಿಕ್ರಾಂತ್ ರೋಣ ಸಿನಿಮಾದ ಚಿತ್ರೀಕರಣ ಸಿದ್ಧತೆ ಮತ್ತು ಪ್ರಕ್ರಿಯೆಯ ಆನಂದವನ್ನು ಅನುಭವಿಸಿದ ನಂತರ ಈಗ ರೋಮಾಂಚನಕಾರಿ ಸುದ್ದಿಯೊಂದನ್ನು ನಿಮ್ಮೊಂದಿಗೆ ಹಂಚಿಕೊಳ್ಳುವ ಸಮಯ. ವಿಕ್ರಾಂತ್ ರೋಣ ಸಿನಿಮಾ ಆಗಸ್ಟ್ 19 ರಂದು ಭಾರತದಾದ್ಯಂತ ಬಿಡುಗಡೆಗೊಳ್ಳುತ್ತಿದೆ ಎಂದು ತಿಳಿಸಲು ನಮ್ಮ ವಿಕ್ರಾಂತ್ ರೋಣ ತಂಡವು ಹರ್ಷಿಸುತ್ತದೆ' ಎಂದು ಬರೆದುಕೊಂಡಿದ್ದಾರೆ.

ವಿಕ್ರಾಂತ್ ರೋಣ ತಮಿಳು, ತೆಲುಗು, ಮಲಯಾಳಂ ಮತ್ತು ಹಿಂದಿ ಸೇರಿದಂತೆ ಅನೇಕ ಭಾಷೆಯಲ್ಲಿ ತೆರೆಗೆ ಬರುತ್ತಿದೆ. ಹೊಸ ಪೋಸ್ಟರ್ ಮೂಲಕ ಬಿಡುಗಡೆ ದಿನಾಂಕ ಘೋಷಣೆ ಮಾಡಿದ ಚಿತ್ರತಂಡಕ್ಕೆ ಅಭಿಮಾನಿಗಳಿಂದ ಮೆಚ್ಚುಗೆಯ ಮಹಾಪೂರವೇ ಹರಿದು ಬರುತ್ತಿದೆ.

ವಿಕ್ರಾಂತ್ ರೋಣ ಚಿತ್ರದ ಟೀಸರ್ ಮತ್ತು ಕಟೌಟ್ ವಿಶ್ವ ವಿಖ್ಯಾತ ಬುರ್ಜ್ ಖಲೀಫಾ ಮೇಲೆ ರಾರಾಜಿಸಿತ್ತು. ಈ ಮೂಲಕ ವಿಶ್ವದ ಗಮನ ಸೆಳೆದಿತ್ತು. ಅನೂಪ್ ಭಂಡಾರಿ ನಿರ್ದೇಶನದಲ್ಲಿ ಮೂಡಿಬಂದಿರುವ ಈ ಸಿನಿಮಾಗೆ ಜ್ಯಾಕ್ ಮಂಜು ನಿರ್ಮಾಣ ಮಾಡಿದ್ದಾರೆ. ಸುದೀಪ್ ಜೊತೆ ನಿರೂಪ್ ಭಂಡಾರಿ ಮತ್ತು ನಾಯಕಿಯಾಗಿ ನೀತಾ ಅಶೋಕ್ ನಟಿಸಿದ್ದಾರೆ.

More from Filmibeat

English summary
Kichcha Sudeep Starrer Vikrant Rona Movie to Release Worldwide on August 19th.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X