Don't Miss!
- Sports
ಬಾರ್ಡರ್-ಗವಾಸ್ಕರ್ ಟ್ರೋಫಿ: ರೋಹಿತ್ ಬಳಗದ ಅಭ್ಯಾಸಕ್ಕೆ ಭಾನುವಾರ ರಜೆ ನೀಡಿದ ಕೋಚ್ ದ್ರಾವಿಡ್
- Lifestyle
Horoscope Today 6 Feb 2023: ಸೋಮವಾರ : ದ್ವಾದಶ ರಾಶಿಗಳ ರಾಶಿಫಲ ಹೇಗಿದೆ?
- News
ರಾಜ್ಯ ರಾಜಕೀಯದ ಮುಂದಿನ ರಹಸ್ಯವೊಂದನ್ನು ಬೇಧಿಸಿದ ಎಚ್ಡಿಕೆ
- Finance
ಆಧಾರ್ ಕಾರ್ಡ್ ಸಂಖ್ಯೆಯಿಂದ ನಿಮ್ಮ ಬ್ಯಾಂಕ್ ಬ್ಯಾಲೆನ್ಸ್ ಪರಿಶೀಲಿಸಿ, ಹೇಗೆ ಇಲ್ಲಿ ತಿಳಿಯಿರಿ
- Automobiles
ಹೆಚ್ಚಿನ ಮೈಲೇಜ್ ನೀಡುವ ಬಹುನಿರೀಕ್ಷಿತ ಟಾಟಾ ಆಲ್ಟ್ರೊಜ್ iCNG ಕಾರಿನ ವಿಶೇಷತೆಗಳು...
- Technology
ಇನ್ಮುಂದೆ ಟ್ವಿಟ್ಟರ್ನಲ್ಲೂ ಹಣ ಗಳಿಸಬಹುದು; ಮಸ್ಕ್ರ ಹೊಸ ನಿರ್ಧಾರ ಏನು!?
- Education
KVS Recruitment 2022 : ಕೇಂದ್ರೀಯ ವಿದ್ಯಾಲಯ ಸಂಗತನ್ ದಲ್ಲಿ 13404 ಹುದ್ದೆಗಳ ನೇಮಕಾತಿ
- Travel
ಯಾವುದೇ ಚಿಂತೆ ಇಲ್ಲದೆ ಸುಖಕರ ಪ್ರಯಾಣ ಅನುಭವಿಸಲು ಇಲ್ಲಿದೆ ಸಲಹೆಗಳು
'ಉಸಿರೇ ಉಸಿರೇ' ಸಿನಿಮಾಗೆ ಕಿಚ್ಚ ಸುದೀಪ್ ಎಂಟ್ರಿ!
ಕಿಚ್ಚ ಸುದೀಪ್ ಅಭಿನಯದ 'ವಿಕ್ರಾಂತ್ ರೋಣ' ಪ್ಯಾನ್ ಇಂಡಿಯಾ ಸಿನಿಮಾ ಬ್ಲಾಕ್ ಬಸ್ಟರ್ ಹಿಟ್ ಆಗಿತ್ತು. ಬ್ಲಾಕ್‌ಬಸ್ಟರ್ ಸಿನಿಮಾ ನೀಡಿದ ಬಳಿಕ ಕಿಚ್ಚ ಸುದೀಪ್ ಹೊಸ ಸಿನಿಮಾವನ್ನು ಅನೌನ್ಸ್ ಮಾಡಿಲ್ಲ. ಆದ್ರೀಗ ಮುಂದಿನ ಸಿನಿಮಾದಲ್ಲಿ ಅತಿಥಿ ಪಾತ್ರದಲ್ಲಿ ನಟಿಸಲು ಸಜ್ಜಾಗಿ ನಿಂತಿದ್ದಾರೆ.
ಬಿಗ್ ಬಾಸ್ ಹಾಗೂ ಸಿಸಿಎಲ್‌ನಲ್ಲಿ ಮಿಂಚಿರೋ ಪ್ರದೀಪ್ 'ಉಸಿರೇ ಉಸಿರೇ' ಸಿನಿಮಾದಲ್ಲಿ ನಾಯಕನಾಗಿ ನಟಿಸುತ್ತಿದ್ದಾರೆ. ಇದೇ ಸಿನಿಮಾಗೆ ಕಿಚ್ಚ ಸುದೀಪ್ ವಿಶೇಷ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಗೆಳೆಯನಿಗಾಗಿ ಸುದೀಪ್ ಪ್ಯಾನ್ ಇಂಡಿಯಾ ಸ್ಟಾರ್ ಆಗಿದ್ದರೂ ಅತಿಥಿ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.
ಅಂದ್ಹಾಗೆ ಸಿ ಎಂ ವಿಜಯ್ 'ಉಸಿರೇ ಉಸಿರೇ' ಸಿನಿಮಾವನ್ನು ನಿರ್ದೇಶನ ಮಾಡುತ್ತಿದ್ದಾರೆ. ಇದೇ ಸಿನಿಮಾಗೆ ಪ್ಯಾನ್ ಇಂಡಿಯಾ ಸ್ಟಾರ್ ಕಿಚ್ಚ ಸುದೀಪ್ ಎಂಟ್ರಿ ಕೊಟ್ಟಿದ್ದಾರೆ. ಈಗಾಗಲೇ 'ಉಸಿರೇ ಉಸಿರೇ' ಸಿನಿಮಾ ಕೊನೆಯ ಹಂತದ ಶೂಟಿಂಗ್ ಮಾಡುತ್ತಿದೆ.
'ಉಸಿರೇ ಉಸಿರೇ' ಸಿನಿಮಾದ ಪ್ರಮುಖ ಪಾತ್ರವೊಂದರಲ್ಲಿ ಕಿಚ್ಚ ಸುದೀಪ್ ಕಾಣಿಸಿಕೊಳ್ಳಲಿದ್ದಾರೆ. ಈಗಾಗಲೇ ಈ ಚಿತ್ರತಂಡ ಅಭಿನಯ ಚಕ್ರವರ್ತಿಯನ್ನು ಭೇಟಿಯಾಗಿದೆ. ಸಿನಿಮಾ ಕಥೆ ಕೇಳಿ ಕಿಚ್ಚ ಸುದೀಪ್ ಕೂಡ ಗ್ರೀನ್ ಸಿಗ್ನಲ್ ಕೊಟ್ಟಿದ್ದು, ಶೀಘ್ರದಲ್ಲಿ ಸಿನಿಮಾದಲ್ಲಿ ಭಾಗವಹಿಸಲಿದ್ದಾರೆ.
'ಉಸಿರೇ ಉಸಿರೇ' ಸಿನಿಮಾದಲ್ಲಿ 'ಬಿಗ್ ಬಾಸ್' ಖ್ಯಾತಿಯ ರಾಜೀವ್ ಈ ಚಿತ್ರದ ನಾಯಕನಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಇವರಿಗೆ ಶ್ರೀಜಿತ ನಾಯಕಿಯಾಗಿ ಕಾಣಿಸಿಕೊಂಡಿದ್ದಾರೆ. ಇವರೊಂದಿಗೆ ತಾರಾ, ಸುಚೇಂದ್ರ ಪ್ರಸಾದ್, ರಾಜೇಶ್ ನಟರಂಗ, ಆಲಿ, ಬ್ರಹ್ಮಾನಂದಮ್, ಸಾಧುಕೋಕಿಲ, ದೇವರಾಜ್, ಮಂಜು ಪಾವಗಡ, ಜಗಪ್ಪ, ಶಿವು, ಸುಶ್ಮಿತಾ ಮುಂತಾದವರು ತಾರಾಬಳಗದಲ್ಲಿದ್ದಾರೆ.

ಸಿ.ಎಂ.ವಿಜಯ್ ನಿರ್ದೇಶನದ ಈ ಚಿತ್ರಕ್ಕೆ ಮನು ಛಾಯಾಗ್ರಹಣ, ಕೆ ಎಂ ಪ್ರಕಾಶ್ ಸಂಕಲನ, ಟೈಗರ್ ಶಿವು ಸಾಹಸ ನಿರ್ದೇಶನ ಹಾಗೂ ಮೋಹನ್ ಮತ್ತು ಹೈಟ್ ಮಂಜು ಅವರ ನೃತ್ಯ ನಿರ್ದೇಶನವಿದೆ ವಿವೇಕ್ ಚಕ್ರವರ್ತಿಯ ಸಂಗೀತವಿದೆ.