For Quick Alerts
  ALLOW NOTIFICATIONS  
  For Daily Alerts

  ನೂತನ ಸಿಎಂ ಬಸವರಾಜ ಬೊಮ್ಮಾಯಿಗೆ ಸುದೀಪ್ ಶುಭಾಶಯ

  |

  ಕರ್ನಾಟಕ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ರಾಜಭವನದ ಗಾಜಿನ ಮನೆಯಲ್ಲಿ ನಡೆದ ಸರಳ ಸಮಾರಂಭದಲ್ಲಿ ರಾಜ್ಯಪಾಲ ಥಾವರ್ ಚಂದ್ರ ಗೆಹ್ಲೋಟ್ ಅಧಿಕಾರ ಮತ್ತು ಗೌಪ್ಯತೆಯ ಪ್ರತಿಜ್ಞಾವಿಧಿ ಬೋಧಿಸಿದರು.

  ನೂತನ ಸಿಎಂ ಬೊಮ್ಮಾಯಿಗೆ ಅಭಿನಂದನೆಗಳ ಮಹಾಪೂರವೇ ಹರಿದು ಬರುತ್ತಿದೆ. ರಾಜಕೀಯ ಗಣ್ಯರು ಮಾತ್ರವಲ್ಲದೇ ಸಿನಿಮಾರಂಗದ ಗಣ್ಯರು ವಿಶ್ ಮಾಡುತ್ತಿದ್ದಾರೆ. ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಸಹ ನೂತನ ಸಿಎಂ ಬೊಮ್ಮಾಯಿಗೆ ಅಭಿನಂದನೆ ತಿಳಿಸಿದ್ದಾರೆ.

  ತನ್ನ ವೃತ್ತಿ ಜೀವನದ ಆರಂಭದ ದಿನಗಳಲ್ಲಿ ವೈಯಕ್ತಿಕವಾಗಿ ತುಂಬಾ ದೊಡ್ಡ ಬೆಂಬಲ ನೀಡಿದ್ದರು ಎಂದು ಕಿಚ್ಚ ಸುದೀಪ್ ಹೇಳಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಕಿಚ್ಚ ಸುದೀಪ್, "ಸರಳತೆಯನ್ನು ನೋಡಿ ಬೆಳೆದವನು ನಾನು. ನನ್ನ ವೃತ್ತಿಜೀವನದ ಆರಂಭಿಕ ದಿನಗಳಲ್ಲಿ ಅವರು ನನಗೆ ವೈಯಕ್ತಿಕವಾಗಿ ನನಗೆ ದೊಡ್ಡ ಬೆಂಬಲ ನೀಡಿದ್ದಾರೆ. ನಿಮಗೆ ಒಳ್ಳೆಯದಾಗಲಿ ಮಮಾ" ಎಂದು ಹೇಳಿದ್ದಾರೆ.

  ಕಿಚ್ಚನ ಪೋಸ್ಟ್ ಗೆ ಅಭಿಮಾನಿಗಳು ಅಭಿನಂದನೆ ಸಲ್ಲಿಸಿ ಕಾಮೆಂಟ್ ಮಾಡುತ್ತಿದ್ದಾರೆ. ಸುದೀಪ್ ಸದ್ಯ ಕೋಟಿಗೊಬ್ಬ-3 ಮತ್ತು ವಿಕ್ರಾಂತ್ ರೋಣ ಸಿನಿಮಾ ಬಿಡುಗಡೆಯಲ್ಲಿ ಬ್ಯುಸಿಯಾಗಿದ್ದಾರೆ. ಈಗಾಗಲೇ ಕೋಟಿಗೊಬ್ಬ-3 ಮುಗಿಸಿರುವ ಕಿಚ್ಚ ಸುದೀಪ್ ಬಿಡುಗಡೆ ದಿನಾಂಕ ಸದ್ಯದಲ್ಲೇ ಬಹಿರಂಗವಾಗಲಿದೆ ಎಂದಿದ್ದಾರೆ.

  ಇನ್ನು ವಿಕ್ರಾಂತ್ ರೋಣ ಸಿನಿಮಾದ ಪೋಸ್ಟ್ ಪ್ರೊಡಕ್ಷನ್ ಕೆಲಸ ನಡೆಯುತ್ತಿದ್ದು, ಇತ್ತೀಚಿಗಷ್ಟೆ ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡಿಸ್ ವಿಕ್ರಾಂತ್ ರೋಣ ಸಿನಿಮಾದ ಐಟಂ ಹಾಡಿಗೆ ಹೆಜ್ಜೆ ಹಾಕಿದ್ದರು. ಈಗಾಗಲೇ ಭಾರಿ ನಿರೀಕ್ಷೆ ಮೂಡಿಸಿರುವ ವಿಕ್ರಾಂತ್ ರೋಣ, ಜಾಕ್ವೆಲಿನ್ ಎಂಟ್ರಿಯಿಂದ ಮತ್ತಷ್ಟು ಕುತೂಹಲ ಹೆಚ್ಚಿಸಿದೆ.

  English summary
  Actor Kichcha Sudeep Wishes Basavaraj Bommai on taking over as Karnataka CM.

  Kannada Photos

  Go to : More Photos
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X
  X