Don't Miss!
- Automobiles
ಭಾರತದಲ್ಲಿ ಹೆಚ್ಚು ಪವರ್ಫುಲ್ ಆಗಿರುವ ಕಮ್ಮಿ ಬೆಲೆಯ ಕಾರುಗಳು: ಟಾಟಾದಿಂದ ಮಹೀಂದ್ರಾವರೆಗೆ...
- News
7th Pay Commission; ಮುಂಬಡ್ತಿ, ಬಡ್ತಿ, ಭತ್ಯೆಯ ನಿಗದಿ ಮಾನದಂಡಗಳು
- Technology
ಆಪಲ್ ಗ್ರಾಹಕರಿಗೆ ಬಿಗ್ ಶಾಕ್; ಆದ್ರೂ, ಗ್ರಾಹಕರಿಗೆ ಕೊನೆಯ ಅವಕಾಶ ನೀಡಿದೆ!
- Sports
WIPL 2023: ಮಹಿಳಾ ಐಪಿಎಲ್ಗಾಗಿ ತನ್ನ ಕೋಚಿಂಗ್ ಬಳಗ ಪ್ರಕಟಿಸಿದ ಮುಂಬೈ ಇಂಡಿಯನ್ಸ್
- Lifestyle
Horoscope Today 6 Feb 2023: ಸೋಮವಾರ : ದ್ವಾದಶ ರಾಶಿಗಳ ರಾಶಿಫಲ ಹೇಗಿದೆ?
- Finance
ಆಧಾರ್ ಕಾರ್ಡ್ ಸಂಖ್ಯೆಯಿಂದ ನಿಮ್ಮ ಬ್ಯಾಂಕ್ ಬ್ಯಾಲೆನ್ಸ್ ಪರಿಶೀಲಿಸಿ, ಹೇಗೆ ಇಲ್ಲಿ ತಿಳಿಯಿರಿ
- Education
KVS Recruitment 2022 : ಕೇಂದ್ರೀಯ ವಿದ್ಯಾಲಯ ಸಂಗತನ್ ದಲ್ಲಿ 13404 ಹುದ್ದೆಗಳ ನೇಮಕಾತಿ
- Travel
ಯಾವುದೇ ಚಿಂತೆ ಇಲ್ಲದೆ ಸುಖಕರ ಪ್ರಯಾಣ ಅನುಭವಿಸಲು ಇಲ್ಲಿದೆ ಸಲಹೆಗಳು
ಕಟೀಲು ದೇವಾಲಯದಲ್ಲಿ ಅಭಿಮಾನದ ಅಲೆಯಲ್ಲಿ ಮಿಂದೆದ್ದ ಕಿಚ್ಚ ಸುದೀಪ
ಸ್ಯಾಂಡಲ್‌ವುಡ್ ಬಿಗ್ ಬಾಸ್ ಕಿಚ್ಚ ಸುದೀಪ್ ಟೆಂಪಲ್ ರನ್ ಶುರು ಮಾಡಿದ್ದಾರೆ. 'ವಿಕ್ರಾಂತ್ ರೋಣ' ಯಶಸ್ಸಿನ ಅಲೆಯಲ್ಲಿ ತೇಲುತ್ತಿರುವ ಸುದೀಪ್ ಹೊಸ ಸಿನಿಮಾವನ್ನು ಇನ್ನೂ ಘೋಷಣೆ ಮಾಡಿಲ್ಲ. ರಿಯಾಲಿಟಿ ಶೋ ಬಿಗ್ ಬಾಸ್ ನಿರೂಪಣೆಯಲ್ಲಿ ಬ್ಯುಸಿಯಾಗಿದೆ. ಈ ಮಧ್ಯೆ ದೇವಸ್ಥಾನಗಳಿಗೂ ಭೇಟಿ ನೀಡುತ್ತಿದ್ದಾರೆ.
ಕಿಚ್ಚ ಸುದೀಪ್ ಇಂದು (ಡಿಸೆಂಬರ್ 4) ಮಂಗಳೂರಿನ ಸುಪ್ರಸಿದ್ಧ ಕಟೀಲು ದುರ್ಗಾಪರಮೇಶ್ವರಿ ದೇವಾಲಯಕ್ಕೆ ಭೇಟಿ ನೀಡಿದ್ದಾರೆ. ಬಿಗ್ ಬಾಸ್ ಶೋ ಮುಗಿಸಿದ ಕಾರ್ಯಕ್ರಮದ ನಿಮಿತ್ತ ಮಂಗಳೂರಿಗೆ ತೆರಳಿದ್ದ ಸುದೀಪ್ ಕಟೀಲು ದೇವಸ್ಥಾನಕ್ಕೆ ಭೇಟಿ ನೀಡಿ ದೇವಿಯ ಆಶೀರ್ವಾದವನ್ನು ಪಡೆದಿದ್ದಾರೆ.
BBK9:
ನಿಯಮ
ಮೀರಿದ
ಗೊಬ್ಬರಗಾಲ
ಹಾಗೂ
ಆರ್ಯವರ್ಧನ್‌ಗೆ
ಸುದೀಪ್
ಕ್ಲಾಸ್..!

ಕಟೀಲು ದೇವಸ್ಥಾನಕ್ಕೆ ಸುದೀಪ್ ಭೇಟಿ
ಸುದೀಪ್ ಹಾಗೂ ಪತ್ನಿ ಪ್ರಿಯಾ ಸುದೀಪ್ ಇಬ್ಬರೂ ಮಂಗಳೂರಿಗೆ ಆಗಮಿಸಿದ್ದಾರೆ. ಕಟೀಲು ದುರ್ಗಾಪರಮೇಶ್ವರಿ ದೇವಳ ಶಿಕ್ಷಣ ಸಂಸ್ಥೆಗಳ ಸಂಯೋಜನೆಯಲ್ಲಿ ಭ್ರಮರ- ಇಂಚರ ನುಡಿಹಬ್ಬ ಕಾರ್ಯಕ್ರಮ ನಡೆಯುತ್ತಿದೆ. ಈ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಕಿಚ್ಚ ಸುದೀಪ್ ಆಗಮಿಸಿದ್ದಾರೆ. ಈ ವೇಳೆ ಮಂಗಳೂರಿನ ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿ ದೇವಿಯ ಆಶೀರ್ವಾದವನ್ನು ಪಡೆದಿದ್ದಾರೆ.

ದೇವಸ್ಥಾನದಲ್ಲಿ ಅಭಿಮಾನದ ಅಲೆ
ಕಿಚ್ಚ ಸುದೀಪ್ ಹಾಗೂ ಪತ್ನಿ ಪ್ರಿಯಾ ಕಟೀಲು ದೇವಸ್ಥಾನಕ್ಕೆ ಭೇಟಿ ನೀಡುತ್ತಿರುವ ವಿಷಯ ಅಭಿಮಾನಿಗಳು ಮುಟ್ಟಿದೆ. ತಕ್ಷಣವೇ ಕಿಚ್ಚ ಸುದೀಪ್ ನೋಡಿ ಅಭಿಮಾನಿಗಳು ಮುಗಿಬಿದ್ದಿದ್ದರು. ದೇವಸ್ಥಾನದಲ್ಲಿ ದೇವಿಯ ದರ್ಶನ ಪಡೆದ ಬಳಿಕ ಅಭಿಮಾನಿಗಳ ಅಭಿಮಾನದ ಅಲೆಯಲ್ಲಿ ತೇಲಾಡಿದ್ರು. ಇದೇ ವೇಳೆದ ದೇವಸ್ಥಾನದ ಪ್ರಮುಖ ಅರ್ಚಕರು ಕಿಚ್ಚ ಸುದೀಪ್‌ರನ್ನು ಸನ್ಮಾನಿಸಿ, ಕಟೀಲು ದುರ್ಗಾಪರಮೇಶ್ವರಿಯ ಫೋಟೊ ನೀಡಿದರು.

ಸುದೀಪ್ ಮುಂದಿನ ಸಿನಿಮಾ ಯಾವುದು?
ಕಿಚ್ಚ ಸುದೀಪ್ ಮುಂದಿನ ಸಿನಿಮಾ ಯಾವುದು ಅನ್ನೋದು ಕುತೂಹಲ ಎಲ್ಲರಲ್ಲೂ ಮನೆ ಮಾಡಿದೆ. 'ವಿಕ್ರಾಂತ್ ರೋಣ' ಗೆಲುವಿನ ಬಳಿಕ ಸುದೀಪ್ ಯಾರಿಗೆ ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ ಅನ್ನೋ ಸುಳಿವು ಇನ್ನೂ ಸಿಕ್ಕಿಲ್ಲ. ಆದರೆ ಮೂಲಗಳ ಪ್ರಕಾರ, ತಮಿಳು ಪ್ರತಿಷ್ಠಿತ ಸಂಸ್ಥೆ ಲೈಕಾ ಪ್ರೊಡಕ್ಷನ್‌ಗೆ ಕಿಚ್ಚ ಸುದೀಪ್ ಜೊತೆ ಸಿನಿಮಾವನ್ನು ನಿರ್ಮಾಣ ಮಾಡುತ್ತಿದೆ ಅನ್ನೋ ಸುದ್ದಿ ಹರಿದಾಡುತ್ತಿದೆ. ಎರಡು ಭಾಷೆಯಲ್ಲಿ ಏಕಕಾಲಕ್ಕೆ ನಿರ್ಮಾಣಗೊಳ್ಳಲಿದ್ದು, ಐದು ಭಾಷೆಯಲ್ಲಿ ಬಿಡುಗಡೆಯಾಗಲಿದೆ ಅನ್ನೋ ಗುಸು ಗುಸು ಶುರುವಾಗಿದೆ. ಆದರೆ, ಸುದೀಪ್ ಹಾಗೂ ಲೈಕಾ ಸಂಸ್ಥೆ ಈ ಬಗ್ಗೆ ಅಧಿಕೃತವಾಗಿ ಮಾಹಿತಿ ನೀಡಿಲ್ಲ.

ಬಿಗ್ ಬಾಸ್ ಮುಗಿದ ಬಳಿಕ ಹೊಸ ಸಿನಿಮಾ?
ಸ್ಯಾಂಡಲ್‌ವುಡ್‌ನಲ್ಲಿ ಹರಿದಾಡುತ್ತಿರುವ ಮಾಹಿತಿ ಪ್ರಕಾರ, ಬಿಗ್ ಬಾಸ್ ರಿಯಾಲಿಟಿ ಶೋ ಮುಗಿದ ಬಳಿಕ ಹೊಸ ಸಿನಿಮಾವನ್ನು ಘೋಷಣೆ ಮಾಡುವ ಸಾಧ್ಯತೆಯಿದೆ. ಸದ್ಯ ಸುದೀಪ್ ಬಿಗ್ ಬಾಸ್ ನಿರೂಪಣೆಯಲ್ಲಿ ಬ್ಯುಸಿಯಾಗಿದ್ದಾರೆ. ಜೊತೆ ಹೊಸ ಹೊಸ ಕಥೆಗಳನ್ನು ಕೇಳುತ್ತಿದ್ದಾರೆ ಅನ್ನೋ ಮಾತು ಕೇಳಿಬರುತ್ತಿದೆ. ಈ ಮಧ್ಯೆ ಹೊಸ ಹೊಸ ಪ್ರಾಜೆಕ್ಟ್ ಬಗ್ಗೆ ಗುಸು ಗುಸು ಸುದ್ದಿಗಳು ಹರಿದಾಡುತ್ತಿವೆ. ಇವುಗಳಲ್ಲಿ ಸುದೀಪ್ ಯಾವುದಕ್ಕೆ ಗ್ರೀನ್ ಸಿಗ್ನಲ್ ಕೊಡುತ್ತಾರೆ ಅನ್ನೋದು ಇನ್ನು ಕೆಲವು ದಿನಗಳಲ್ಲಿ ಹೊರಬೀಳುವ ಸಾಧ್ಯತೆಯಿದೆ.