ಕಿರೀಟಿ ಚೊಚ್ಚಲ ಚಿತ್ರಕ್ಕೆ ಸಿಕ್ತು ಬೊಂಬಾಟ್ ಟೈಟಲ್: ಅಧಿಕೃತ ಘೋಷಣೆಗೆ ಮುಹೂರ್ತ ಫಿಕ್ಸ್!

ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಪುತ್ರ ಕಿರೀಟಿ ಹೀರೊ ಆಗಿ ಚಿತ್ರರಂಗಕ್ಕೆ ಎಂಟ್ರಿ ಕೊಡ್ತಿದ್ದಾರೆ. ಕೆಲ ದಿನಗಳ ಹಿಂದೆ ಬಹಳ ಅದ್ಧೂರಿಯಾಗಿ ಸಿನಿಮಾ ಮುಹೂರ್ತ ನೆರವೇರಿಸಲಾಗಿತ್ತು. ಇಂಟ್ರೊಡಕ್ಷನ್ ಟೀಸರ್‌ನಲ್ಲೇ ಕಮಾಲ್ ಮಾಡಿದ್ದ ಕಿರೀಟಿ ಭರವಸೆ ಮೂಡಿಸಿದ್ದರು. ಕನ್ನಡ ಮತ್ತು ತೆಲುಗಿನಲ್ಲಿ ಏಕಕಾಲಕ್ಕೆ ಈ ಸಿನಿಮಾ ನಿರ್ಮಾಣವಾಗ್ತಿದ್ದು ಸಿನಿಮಾ ಟೈಟಲ್ ಮಾತ್ರ ಇನ್ನು ಫಿಕ್ಸ್ ಆಗಿಲ್ಲ. ಕಿರೀಟಿ ಹುಟ್ಟುಹಬ್ಬದ ದಿನವೇ ಟೈಟಲ್ ಲಾಂಚ್ ಪ್ಲ್ಯಾನ್ ನಡೀತಿದೆ.

ಪ್ರೊಡಕ್ಷನ್ ನಂ 15 ಹೆಸರಿನಲ್ಲಿ ಶುರುವಾಗಿದ್ದ ಕಿರೀಟಿ ಚೊಚ್ಚಲ ಸಿನಿಮಾ ಶೂಟಿಂಗ್ ಭರದಿಂದ ಸಾಗುತ್ತಿದೆ. ರಾಧಾಕೃಷ್ಣ ರೆಡ್ಡಿ ನಿರ್ದೇಶನ ಸಾರಥ್ಯದಲ್ಲಿ ಮೂಡಿ ಬರ್ತಿರುವ ಈ ಚಿತ್ರಕ್ಕೆ ತೆಲುಗಿನ ಖ್ಯಾತ ನಿರ್ಮಾಣ ಸಂಸ್ಥೆ ವಾರಾಹಿ ಫಿಲ್ಮಂ ಪ್ರೊಡಕ್ಷನ್ ಬಂಡವಾಳ ಹೂಡಿ ನಿರ್ಮಾಣ ಮಾಡುತ್ತಿದೆ. ಸದ್ಯ ಚಿತ್ರಕ್ಕೆ ಕ್ಯಾಚಿ ಟೈಟಲ್ ಸಿಕ್ಕಿದ್ದು, ಅದನ್ನು ಅನೌನ್ಸ್ ಮಾಡಲು ಮುಹೂರ್ತ ಫಿಕ್ಸ್ ಆಗಿದೆ. ಸೆಪ್ಟೆಂಬರ್ 29ಕ್ಕೆ ಸಂಜೆ 6.39ಕ್ಕೆ ವಾರಾಹಿ ಚಲನಚಿತ್ರ ಯೂಟ್ಯೂಬ್ ಚಾನೆಲ್‌ನಲ್ಲಿ ಕಿರೀಟಿ ಮೊದಲ ಚಿತ್ರದ ಟೈಟಲ್ ಲಾಂಚ್ ವೀಡಿಯೋ ರಿಲೀಸ್ ಆಗಲಿದೆ.

Kireeti Reddy Debut Movie Title Annoncement on his Birthday

ಇದು ವಾರಾಹಿ ಸಂಸ್ಥೆಯ 15ನೇ ಸಿನಿಮಾ ಕೂಡ ಆಗಿದ್ದು ಅಷ್ಟೇ ಅದ್ದೂರಿಯಾಗಿ ಸಿನಿಮಾವನ್ನು ನಿರ್ಮಾಣ ಮಾಡಲಾಗುತ್ತಿದೆ. ಕನ್ನಡ ಮತ್ತು ತೆಲುಗು ಎರಡೂ ಭಾಷೆಯಲ್ಲಿ ನಿರ್ಮಾಣವಾಗುತ್ತಿರೋ ಈ ಚಿತ್ರದ ಮೂಲಕ ಕಿರೀಟಿ ಕನ್ನಡ ಮತ್ತು ತೆಲುಗು ಎರಡೂ ಇಂಡಸ್ಟ್ರಿಗೆ ಏಕಕಾಲದಲ್ಲಿ ಕಿರೀಟಿ ಹೀರೋ ಆಗಿ ಲಾಂಚ್ ಆಗ್ತಿದ್ದಾರೆ . ಚಿತ್ರದಲ್ಲಿ ರವಿಚಂದ್ರನ್, ಜೆನಿಲಿಯಾ ರಿತೇಶ್ ದೇಶ್ ಮುಖ್, ಶ್ರೀಲೀಲಾ ಸೇರಿದಂತೆ ದೊಡ್ಡ ತಾರಾಬಳಗವೇ ಇದೆ. ನಾಯಕಿಯಾಗಿ ಶ್ರೀಲೀಲಾ ಮಿಂದಿದ್ದಾರೆ.

Kireeti Reddy Debut Movie Title Annoncement on his Birthday

ಹೀರೊ ಆಗೋಕೆ ಬೇಕಾದ ಎಲ್ಲಾ ಕಲೆಗಳನ್ನು ಕರಗತ ಮಾಡಿಕೊಂಡು ಕಿರೀಟಿ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟಿದ್ದಾರೆ. ಈಗಾಗಲೇ ರಿಲೀಸ್ ಆಗಿರುವ ಟೀಸರ್‌ನಲ್ಲಿ ಜನಾರ್ದನ ರೆಡ್ಡಿ ಪುತ್ರನ ಸ್ಟಂಟ್, ಡ್ಯಾನ್ಸ್ ಝಲಕ್ ತೋರಿಸಲಾಗಿದೆ. ಬೆಂಗಳೂರಿನಲ್ಲಿ ನಡೆದ ಚಿತ್ರದ ಮುಹೂರ್ತ ಸಮಾರಂಭಕ್ಕೆ ಎಸ್. ಎಸ್ ರಾಜಮೌಳಿ ಆಗಮಿಸಿ ಶುಭ ಹಾರೈಸಿದ್ದರು. ರಾಕ್‌ಸ್ಟಾರ್ ದೇವಿಶ್ರೀ ಪ್ರಸಾದ್ ಸಂಗೀತ, ಕೆ. ಸೆಂಥಿಲ್ ಕುಮಾರ್ ಛಾಯಾಗ್ರಹಣ, ರವೀಂದರ್ ಕಲಾ ನಿರ್ದೇಶನ, ಡೈರೆಕ್ಟರ್ ಪೀಟರ್ ಹೆನ್ ಆಕ್ಷನ್ ಚಿತ್ರಕ್ಕಿದೆ. ಮುಂದಿನ ವರ್ಷ ಸಿನಿಮಾ ತೆರೆಗಪ್ಪಳಿಸಲಿದೆ.

More from Filmibeat

English summary
Kireeti Reddy Debut Movie Title Annoncement on his Birthday. Know More.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X