ಕೆಜಿಎಫ್-2 ಚಿತ್ರೀಕರಣಕ್ಕೆ ಕೋಲಾರ ನ್ಯಾಯಾಲಯದಿಂದ ತಡೆಯಾಜ್ಞೆ
Recommended Video
ರಾಕಿಂಗ್ ಸ್ಟಾರ್ ಯಶ್ ಅಭಿನಯಿಸುತ್ತಿರುವ ಕೆಜಿಎಫ್ ಚಾಪ್ಟರ್ 2 ಚಿತ್ರದ ಚಿತ್ರೀಕರಣಕ್ಕೆ ಕೋಲಾರ ಸಿಟಿ ಸಿವಿಲ್ ನ್ಯಾಯಾಲಯ ತಡೆಯಾಜ್ಞೆ ನೀಡಿದೆ. ಚಿತ್ರೀಕರಣದಿಂದ ಸ್ಥಳೀಯ ಆಸ್ತಿಪಾಸ್ತಿ ಹಾನಿಯಾಗುತ್ತಿದೆ ಎಂಬ ಆರೋಪ ಮಾಡಿ ಶ್ರೀನಿವಾಸ್ ಎಂಬುವರು ಕೋರ್ಟ್ ಮೊರೆಹೋಗಿದ್ದಾರೆ.
ಕೆಜಿಎಫ್ ನ ಸೈನೈಡ್ ಗುಡ್ಡದ ಮೇಲೆ ಕೆಜಿಎಫ್ ಚಾಪ್ಟರ್ 2 ಚಿತ್ರೀಕರಣ ಮಾಡಲಾಗುತ್ತಿದ್ದು, ಗುಡ್ದದ ಮೇಲೆ ಬೃಹತ್ ಪ್ರಮಾಣದ ಸೆಟ್ ಹಾಕಲಾಗಿದೆ. ಇದರಿಂದ ಗಿಡ-ಮರಗಳನ್ನು ನಾಶ ಮಾಡಲಾಗುತ್ತಿದೆ. ಜೊತೆಗೆ ಸಾರ್ವಜನಿಕರಿಗೂ ತೊಂದರೆಯಾಗುತ್ತಿದೆ ಎಂದು ಶ್ರೀನಿವಾಸ್ ಆರೋಪಿಸಿದ್ದಾರೆ.

ಶ್ರೀನಿವಾಸ್ ಅವರ ದೂರನ್ನ ಪರಿಗಣಿಸಿದ ಕೋಲಾರ ಸಿಟಿ ಸಿವಿಲ್ ಕೋರ್ಟ್, ಕೆಜಿಎಫ್ ನಿರ್ಮಾಪಕರಿಗೆ ತಾತ್ಕಾಲಿಕವಾಗಿ ಶೂಟಿಂಗ್ ನಿಲ್ಲಿಸುವಂತೆ ಸೂಚನೆ ನೀಡಿದೆ. ನ್ಯಾಯಾಲಯದ ಮುಂದಿನ ಆದೇಶದವರೆಗೂ ಚಿತ್ರೀಕರಣ ಆರಂಭಿಸದಂತೆ ಆದೇಶಿಸಿದೆ.
ಯಶ್ ಅಭಿನಯಿಸುತ್ತಿರುವ ಕೆಜಿಎಫ್-2 ಚಿತ್ರವನ್ನ ಪ್ರಶಾಂತ್ ನೀಲ್ ನಿರ್ದೇಶನ ಮಾಡುತ್ತಿದ್ದು, ವಿಜಯ್ ಕಿರಗಂದೂರ್ ನಿರ್ಮಿಸುತ್ತಿದ್ದಾರೆ. ಕೆಜಿಎಫ್ ಚಾಪ್ಟರ್ 1 ಕಳೆದ ವರ್ಷ ಡಿಸೆಂಬರ್ ನಲ್ಲಿ ರಿಲೀಸ್ ಆಗಿ ದೊಡ್ಡ ಹಿಟ್ ಆಗಿತ್ತು.

ಐದು ಭಾಷೆಯಲ್ಲಿ ತೆರೆಕಂಡಿದ್ದ ಈ ಸಿನಿಮಾ ನೂರು ಕೋಟಿ ಗಳಿಸಿದ ಕನ್ನಡ ಮೊದಲ ಸಿನಿಮಾ ಎಂಬ ಹೆಗ್ಗಳಿಕೆಗೆ ಪಾತ್ರವಾಗಿತ್ತು. ಇದೀಗ, ಚಾಪ್ಟರ್ 2 ಚಿತ್ರದಲ್ಲಿ ಯಶ್ ಜೊತೆ ಬಾಲಿವುಡ್ ನಟ ಸಂಜಯ್ ದತ್ ಹಾಗೂ ರವೀನಾ ಟಂಡನ್ ಕೂಡ ನಟಿಸುತ್ತಿದ್ದಾರೆ.


Click it and Unblock the Notifications











