'ಕೋಟಿಗೊಬ್ಬ 3' ಸಿನಿಮಾದ ಬಗ್ಗೆ ಸುದೀಪ್ ಟ್ವೀಟ್
Recommended Video
ನಟ ಸುದೀಪ್ 'ಕೋಟಿಗೊಬ್ಬ 3' ಸಿನಿಮಾದ ಚಿತ್ರೀಕರಣವನ್ನು ಮುಗಿಸಿದ್ದಾರೆ. ಈ ಸಂಗತಿಯನ್ನು ಟ್ವಿಟ್ಟರ್ ಖಾತೆಯಲ್ಲಿ ಕಿಚ್ಚ ಹಂಚಿಕೊಂಡಿದ್ದಾರೆ.
''ಕೋಟಿಗೊಬ್ಬ 3' ಚಿತ್ರದ ಕೊನೆಯ ದಿನದ ಚಿತ್ರೀಕರಣ. ತಿಂಗಳುಗಳ ನಂತರ ಶೂಟಿಂಗ್ ಮುಗಿದಿದೆ. ಉತ್ತಮವಾಗಿ ಕೆಲಸ ಮಾಡಿದ ಎಲ್ಲರಿಗೂ ಧನ್ಯವಾದ. ನಿಮ್ಮ ಜೊತೆಗೆ ಕೆಲಸ ಮಾಡಿದ್ದು ತುಂಬ ಖುಷಿ ಆಯ್ತು.'' ಎಂದು ಸುದೀಪ್ ಟ್ವೀಟ್ ಮಾಡಿದ್ದಾರೆ.

ಸುದೀಪ್ ಟ್ವೀಟ್ ಗೆ ಅನೇಕ ಅಭಿಮಾನಿಗಳು ಪ್ರತಿಕ್ರಿಯೆ ನೀಡಿದ್ದು, ಸಿನಿಮಾಗಾಗಿ ಕಾಯುತ್ತಿರುವುದಾಗಿ ಹೇಳಿದ್ದಾರೆ. ಈ ವರ್ಷದ ಬಹು ನಿರೀಕ್ಷಿತ ಸಿನಿಮಾ ಇದಾಗಿದ್ದು, ಎಲ್ಲರಿಗೂ ಚಿತ್ರದ ಮೇಲೆ ಕುತೂಹಲವಿದೆ.
'ಕೋಟಿಗೊಬ್ಬ 2' ಸಕ್ಸಸ್ ನಂತರ ಸುದೀಪ್ ಮತ್ತೆ ಅದೇ ಹೆಸರಿನಲ್ಲಿ ಸಿನಿಮಾ ಮಾಡುತ್ತಿದ್ದಾರೆ. ಶಿವ ಕಾರ್ತಿಕ್ ನಿರ್ದೇಶನ ಮಾಡಿದ್ದಾರೆ. ಅದ್ದೂರಿ ವೆಚ್ಚದ ಈ ಸಿನಿಮಾವನ್ನು ಸೂರಪ್ಪ ಬಾಬು ನಿರ್ಮಾಣ ಮಾಡಿದ್ದಾರೆ.
ಈ ಸಿನಿಮಾದ ಮೂಲಕ ನಟಿ ಮಡೋನಾ ಸೆಬಾಸ್ಟಿಯನ್ ಕನ್ನಡಕ್ಕೆ ಬಂದಿದ್ದಾರೆ. ಶ್ರದ್ಧಾ ದಾಸ್ ಕೂಡ ಚಿತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಇಂಟರ್ ಪೋಲ್ ಅಧಿಕಾರಿ ಪಾತ್ರದಲ್ಲಿ ಶ್ರದ್ಧಾ ನಟಿಸಿದ್ದಾರೆ.
ಇತ್ತೀಚಿಗಷ್ಟೆ 'ಕೋಟಿಗೊಬ್ಬ 3' ಚಿತ್ರದ ಮೋಷನ್ ಪೋಸ್ಟರ್ ಬಿಡುಗಡೆಯಾಗಿದ್ದು, ಒಳ್ಳೆಯ ಪ್ರತಿಕ್ರಿಯೆ ಪಡೆದುಕೊಂಡಿದೆ. ಅರ್ಜುನ್ ಜನ್ಯ ಚಿತ್ರಕ್ಕೆ ಸಂಗೀತ ನೀಡಿದ್ದಾರೆ.


Click it and Unblock the Notifications











