Don't Miss!
- Sports
Asia Cup 2023: ಎಸಿಸಿ ಸಭೆಯಲ್ಲಿ ತೀರ್ಮಾನ: ಏಷ್ಯಾಕಪ್ ಟೂರ್ನಿ ಪಾಕಿಸ್ತಾನದಿಂದ ಸ್ಥಳಾಂತರ!
- Lifestyle
Horoscope Today 6 Feb 2023: ಸೋಮವಾರ : ದ್ವಾದಶ ರಾಶಿಗಳ ರಾಶಿಫಲ ಹೇಗಿದೆ?
- News
ರಾಜ್ಯ ರಾಜಕೀಯದ ಮುಂದಿನ ರಹಸ್ಯವೊಂದನ್ನು ಬೇಧಿಸಿದ ಎಚ್ಡಿಕೆ
- Finance
ಆಧಾರ್ ಕಾರ್ಡ್ ಸಂಖ್ಯೆಯಿಂದ ನಿಮ್ಮ ಬ್ಯಾಂಕ್ ಬ್ಯಾಲೆನ್ಸ್ ಪರಿಶೀಲಿಸಿ, ಹೇಗೆ ಇಲ್ಲಿ ತಿಳಿಯಿರಿ
- Automobiles
ಹೆಚ್ಚಿನ ಮೈಲೇಜ್ ನೀಡುವ ಬಹುನಿರೀಕ್ಷಿತ ಟಾಟಾ ಆಲ್ಟ್ರೊಜ್ iCNG ಕಾರಿನ ವಿಶೇಷತೆಗಳು...
- Technology
ಇನ್ಮುಂದೆ ಟ್ವಿಟ್ಟರ್ನಲ್ಲೂ ಹಣ ಗಳಿಸಬಹುದು; ಮಸ್ಕ್ರ ಹೊಸ ನಿರ್ಧಾರ ಏನು!?
- Education
KVS Recruitment 2022 : ಕೇಂದ್ರೀಯ ವಿದ್ಯಾಲಯ ಸಂಗತನ್ ದಲ್ಲಿ 13404 ಹುದ್ದೆಗಳ ನೇಮಕಾತಿ
- Travel
ಯಾವುದೇ ಚಿಂತೆ ಇಲ್ಲದೆ ಸುಖಕರ ಪ್ರಯಾಣ ಅನುಭವಿಸಲು ಇಲ್ಲಿದೆ ಸಲಹೆಗಳು
'ಕುಬುಸ' ಧರಿಸಿ ಅಭ್ಯಾಸವಿರದ ತಾಯಿ ನಗರಕ್ಕೆ ಬಂದಾಗ ಏನಾಯ್ತು?
ಕನ್ನಡ ಚಿತ್ರರಂಗದಲ್ಲಿ ಸಾಕಷ್ಟು ವಿಭಿನ್ನ ಸಿನಿಮಾಗಳು ಬರುತ್ತಿವೆ. ಕೆಲವು ಸಿನಿಮಾಗಳು ಟೈಟಲ್‌ನಿಂದ ಗಮನ ಸೆಳೆಯೋಕೆ ಶುರು ಮಾಡಿವೆ. ಸಿನಿಮಾ ಕಂಟೆಂಟ್ ಕೂಡ ಗಮನ ಸೆಳೆಯುತ್ತವೆ. ಇಂತಹ ಸಿನಿಮಾಗಳಲ್ಲಿ 'ಕುಬುಸ' ಕೂಡ ಒಂದು.
ಜನಪ್ರಿಯ ಲೇಖಕ ಕುಂ.ವೀರಭದ್ರಪ್ಪ ಅವರ ಕಥೆ ಆಧಾರಿಸಿದ ಸಿನಿಮಾ 'ಕುಬುಸ' ಬಿಡುಗಡೆಗೆ ರೆಡಿಯಾಗಿದೆ. ರಘು ರಾಮಚರಣ್ ಹೂವಿನ ಹಡಗಲಿ ಈ 'ಕುಬುಸ' ಸಿನಿಮಾವನ್ನು ನಿರ್ದೇಶಿಸಿದ್ದಾರೆ. ಫಸ್ಟ್ ಲುಕ್ ಮೂಲಕ ಗಮನ ಸೆಳೆದಿರುವ ಈ ಸಿನಿಮಾ ಜನವರಿ ಕೊನೆಯ ತಿಂಗಳಲ್ಲಿ ರಿಲೀಸ್‌ಗೆ ರೆಡಿಯಾಗಿದೆ.
ತಾಯಿ ಮಗನ ಸೆಂಟಿಮೆಂಟ್ ಇರುವ ಈ ಸಿನಿಮಾಗೆ ಇತ್ತೀಚೆಗೆ ಸೆನ್ಸಾರ್ ಆಗಿದೆ. ಸೆನ್ಸಾರ್ ಬೋರ್ಡ್ ಈ ಸಿನಿಮಾಗೆ 'ಯು' ಸರ್ಟಿಫಿಕೇಟ್ ನೀಡಿದ್ದು, ಸಿನಿಮಾ ಪ್ರಚಾರ ಆರಂಭ ಆಗಿದೆ. ಚಿತ್ರತಂಡ ಶೀಘ್ರದಲ್ಲಿಯೇ ಟೀಸರ್ ರಿಲೀಸ್ ಮಾಡಲಿದೆ.
ಆರ್. ಚಂದ್ರು ಅವರ ಗರಡಿಯಲ್ಲಿ ಪಳಗಿರೋ ರಘು ರಾಮಚರಣ್ ಹೂವಿನ ಹಡಗಲಿ ನಿರ್ದೇಶನದ ಮೊದಲ ಸಿನಿಮಾವಿದು. ನಿರ್ದೇಶಕರಾದ ಟಿ.ಎಸ್. ನಾಗಾಭರಣ, ಪ್ರೇಮ್, ಸತ್ಯ ಪ್ರಕಾಶ್ ನಿರ್ದೇಶನದ ಸಿನಿಮಾಗಳಲ್ಲಿ ಸಹಾಯಕ ನಿರ್ದೇಶಕನಾಗಿ, ಕಲಾವಿದನಾಗಿ ಕೆಲಸ ಮಾಡಿದ್ದು, 'ಕುಬುಸ' ಅವರೇ ನಿರ್ದೇಶಿಸಿದ ಮೊದಲ ಸಿನಿಮಾ.
ಗ್ರಾಮೀಣ ಭಾಗದಲ್ಲಿ ಕಲ್ಲು ಒಡೆದು ಜೀವನ ಸಾಗಿಸುವ ತಾಯಿ ತನ್ನ ಮಗನನ್ನು ದೂರದ ಊರಿನಲ್ಲಿ ಓದಿಸುತ್ತಾಳೆ. ನಗರಕ್ಕೆ ಕಾಲೇ ಇಡದ ತಾಯಿ ಇದೂವರೆಗೂ ಬಸ್ಸು ಕೂಡ ಹತ್ತಿರಲಿಲ್ಲ. ಮಗನಿಗೆ ಕೆಲಸ ಸಿಕ್ಕ ಬಳಿಕ ಅಮ್ಮನನ್ನು ನಗರಕ್ಕೆ ಕರೆದುಕೊಂಡು ಬರುತ್ತಾನೆ. ಮೊದಲಿನಿಂದಲೂ 'ಕುಬುಸ' ಧರಿಸಿ ಅಭ್ಯಾಸವಿರದ ಆಕೆ ನಗರಕ್ಕೆ ಬಂದಾಗ ಹೇಗೆಲ್ಲ ಜನರಿಂದ ಮುಜುಗರಕ್ಕೆ ಒಳಗಾಗುತ್ತಾಳೆ? ಮುಂದೆ ಏನಾಗುತ್ತೆ? ಅನ್ನೋದೇ ಸಿನಿಮಾದ ಕಥೆ.
ತಾಯಿ ಮಗನ ಸೆಂಟಿಮೆಂಟ್ ಸಿನಿಮಾವೇ 'ಕುಬುಸ'. ಈ ಸಿನಿಮಾದಲ್ಲಿ 'ರಾಮ ರಾಮ ರೇ' ಖ್ಯಾತಿಯ ನಟರಾಜ್. ಎಸ್. ಭಟ್, ರಂಗಭೂಮಿ ಕಲಾವಿದೆ ಹನುಮಕ್ಕ ಮರಿಯಮ್ಮನಹಳ್ಳಿ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ನಟರಾಜ್. ಎಸ್. ಭಟ್ ಚಿತ್ರದಲ್ಲಿ ಎರಡು ಶೇಡ್‌ನಲ್ಲಿ ನಟಿಸಿದ್ದು, ಆರ್ಯ ಮೈಸೂರು, ಅನಿಕ ರಮ್ಯ, ಮಹಾಲಕ್ಷ್ಮೀ ಕೂಡ ಚಿತ್ರದ ಲೀಡ್ ರೋಲ್‌ನಲ್ಲಿ ಬಣ್ಣ ಹಚ್ಚಿದ್ದಾರೆ.

ಪದ್ಮಶ್ರೀ ಪುರಸ್ಕೃತ ಜೋಗತಿ ಮಂಜಮ್ಮ 'ಕುಬುಸ' ಸಿನಿಮಾದ ಪ್ರಮುಖ ಆಕರ್ಷಣೆ. ಈ ಸಿನಿಮಾದಲ್ಲಿ ದೊಡ್ಡ ಪಾತ್ರವೊಂದರಲ್ಲಿ ಅವರು ನಟಿಸಿದ್ದಾರೆ. ಕರ್ನಾಟಕ ರಾಜ್ಯ ಯುವ ಪ್ರಶಸ್ತಿ ಹಾಗೂ ಮಕ್ಕಳ ಕಲ್ಯಾಣ ರಾಜ್ಯ ಪ್ರಶಸ್ತಿ ಪುರಸ್ಕೃತರಾದ ಗುಂಡಿ ರಮೇಶ್ ಹಾಗೂ ಪತ್ನಿ ಗುಂಡಿ ಭಾರತಿ ವಿಶೇಷ ಪಾತ್ರದಲ್ಲಿ ಅಭಿನಯಿಸಿದ್ದಾರೆ. ಉಳಿದಂತೆ ಹೊನ್ನಾವರ ಸ್ವಾಮಿ, ಹುಲಿಗಪ್ಪ ಕಟ್ಟೋಮನಿ, ಕನ್ನಡ ಕಲಾ ಸಂಘ ಹೊಸಪೇಟೆ ಕಲಾವಿದರು ನಟಿಸಿದ್ದಾರೆ
'ಕುಬುಸ' ಸಿನಿಮಾದ ಮೂಲ ಕಥೆಯಲ್ಲಿರುವಂತೆ ಬಳ್ಳಾರಿ ಭಾಷೆಯ ಸೊಗಡನ್ನು ಕಾಣಬಹುದು. ಇದು ಮ್ಯೂಸಿಕಲ್ ಸಿನಿಮಾ ಕೂಡ ಆಗಿದ್ದು, ಸನ್ನಿವೇಶಕ್ಕೆ ತಕ್ಕ ಹಾಗೆ ನಾಲ್ಕು ಹಾಡುಗಳಿವೆ. ಹಾಗೇ ನಾಲ್ಕು ಬಿಟ್‌ಗಳಿವೆ. ಜೋಗಿ ಪ್ರೇಮ್, ವಾಸುಕಿ ವೈಭವ್, ಶ್ರುತಿ.ವಿ.ಎಸ್, ಶಿಲ್ಪ ಮುಡ್ಬಿ, ಪ್ರದೀಪ್ ಚಂದ್ರ ಚಿತ್ರದ ಹಾಡುಗಳಿಗೆ ದನಿ ನೀಡಿದ್ದಾರೆ.