twitter
    For Quick Alerts
    ALLOW NOTIFICATIONS  
    For Daily Alerts

    ನಿಖಿಲ್-ರೇವತಿ ಮದುವೆ ಬಗ್ಗೆ ಟೀಕಿಸಿದವರಿಗೆ ಕುಮಾರಸ್ವಾಮಿ ಉತ್ತರ

    |

    ನಿಖಿಲ್ ಕುಮಾರಸ್ವಾಮಿ ಹಾಗೂ ರೇವತಿ ವಿವಾಹವು ಏಪ್ರಿಲ್ 17 ರ ಶುಕ್ರವಾರ ರಾಮನಗರ ಜಿಲ್ಲೆಯ ಕೇತಿಗಾನಹಳ್ಳಿಯಲ್ಲಿ ನಡೆಯಿತು. ಕೊರೊನಾ ಕಾರಣಕ್ಕೆ ಹೆಚ್ಚಿನ ಜನಗಳಿಲ್ಲದೆ ಕೆಲವೇ ಆಪ್ತರ ಸಮ್ಮುಖದಲ್ಲಿ ವಿವಾಹ ನಡೆದಿದೆ.

    ಆದರೆ ಮದುವೆ ಸಮಾರಂಭದ ಬಗ್ಗೆ ಕೆಲವರು ಅಸಮಾಧಾನ, ಆಕ್ಷೇಪಗಳನ್ನು ಎತ್ತಿದ್ದರು. ನಿಖಿಲ್ ಮದುವೆಯಲ್ಲಿ ಸಾಮಾಜಿಕ ಅಂತರ ಕಾಪಾಡಿರಲಿಲ್ಲ, ಹೆಚ್ಚು ಜನ ಸೇರಿದ್ದರು ಎಂಬಿತ್ಯಾದಿ ಆರೋಪಗಳನ್ನು ಹರಿಬಿಟ್ಟಿದ್ದರು.

    ಮಗನ ಮದುವೆ ಬಗ್ಗೆ ಎದ್ದಿದ್ದ ಆರೋಪಗಳಿಗೆ ಮಾಜಿ ಸಿಎಂ ಕುಮಾರಸ್ವಾಮಿ ಉತ್ತರ ನೀಡಿದ್ದಾರೆ. ಸರಣಿ ಟ್ವೀಟ್ ಮಾಡಿರುವ ಕುಮಾರಸ್ವಾಮಿ, ಆರೋಪಗಳಿಗೆ ಸ್ಪಷ್ಟೀಕರಣ ನೀಡುವ ಜೊತೆಗೆ, ಕೆಲವರಿಗೆ ಧನ್ಯವಾದಗಳನ್ನೂ ಹೇಳಿದ್ದಾರೆ.

    ಎಲ್ಲಾ ಆರೋಪಗಳನ್ನೂ ಯಡಿಯೂರಪ್ಪ ನಿರಾಕರಿಸಿದ್ದಾರೆ: ಎಚ್‌ಡಿಕೆ

    ಎಲ್ಲಾ ಆರೋಪಗಳನ್ನೂ ಯಡಿಯೂರಪ್ಪ ನಿರಾಕರಿಸಿದ್ದಾರೆ: ಎಚ್‌ಡಿಕೆ

    ''ನನ್ನ ಪುತ್ರ ನಿಖಿಲ್‌ ವಿವಾಹದಲ್ಲಿ ಸಾಮಾಜಿಕ ಅಂತರ ಕಾಯ್ದುಕೊಂಡರೂ, ನಿಯಮ ಪಾಲಿಸಿದರೂ ಇದ್ಯಾವುದೂ ಪಾಲನೆ ಆಗಿಲ್ಲ ಎಂಬ ಚರ್ಚೆಗಳು ನಡೆದವು. ರಾಜಕೀಯ ದ್ವೇಷಕ್ಕಾಗಿ ಶುಭ ಸಮಾರಂಭದ ವಿಷಯದಲ್ಲೂ ವಿಷ ಕಾರುವ ಮನಸ್ಥಿತಿಗಳು ರಾರಾಜಿಸಿದವು. ಆದರೆ, ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರು ಇವೆಲ್ಲವನ್ನೂ ನಿರಾಕರಿಸುವ ಮೂಲಕ ಸತ್ಯದ ಪರ ನಿಂತಿದ್ದಾರೆ'' ಎಂದು ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.

    ಯಡಿಯೂರಪ್ಪ ಅವರಿಗೆ ಧನ್ಯವಾದ ಅರ್ಪಿಸಿದ ಎಚ್‌ಡಿಕೆ

    ಯಡಿಯೂರಪ್ಪ ಅವರಿಗೆ ಧನ್ಯವಾದ ಅರ್ಪಿಸಿದ ಎಚ್‌ಡಿಕೆ

    ರಾಜ್ಯರಾಜಕಾರಣದ ದೊಡ್ಡ ಕುಟುಂಬ ಸರಳವಾಗಿ ವಿವಾಹ ಸಮಾರಂಭ ಮಾಡಿದೆ ಎಂದೂ ಯಡಿಯೂರಪ್ಪ ಅವರು ಸಹೃದಯದ ಮಾತುಗಳನ್ನಾಡಿರುವುದಕ್ಕೆ ಅವರಿಗೆ ಮನದಾಳದ ಧನ್ಯವಾದಗಳು ಎಂದು ರಾಜಕೀಯ ವಿರೋಧಿ ಯಡಿಯೂರಪ್ಪ ಅವರಿಗೆ ಧನ್ಯವಾದ ಸಲ್ಲಿಸಿದ್ದಾರೆ.

    ನೊವಿನಲ್ಲಿಯೇ ನಿಖಿಲ್ ಮದುವೆ ಮಾಡಿದ್ದೇನೆ: ಎಚ್‌ಡಿಕೆ

    ನೊವಿನಲ್ಲಿಯೇ ನಿಖಿಲ್ ಮದುವೆ ಮಾಡಿದ್ದೇನೆ: ಎಚ್‌ಡಿಕೆ

    ''ನನ್ನ ಒಡನಾಡಿಗಳು, ನನ್ನ ಹಿತೈಷಿಗಳು, ನನ್ನ ಜನ, ನನ್ನ ಕಾರ್ಯಕರ್ತರು ಇವರೆಲ್ಲರೊಂದಿಗೆ ಶುಭ ಸಮಾರಂಭವೊಂದರಲ್ಲಿ ಒಟ್ಟಿಗೆ ಸೇರಲು ವೈಯಕ್ತಿಕವಾಗಿ ನನಗೆ ಇದ್ದ ಒಂದೇ ಒಂದು ಸುವರ್ಣ ಅವಕಾಶವನ್ನು ಕೈಚೆಲ್ಲಿ ನಿಖಿಲ್‌ ವಿವಾಹವನ್ನು ಲಾಕ್‌ಡೌನ್‌ ನಿಯಮಗಳನ್ನು ಪಾಲಿಸಿ ಸರಳವಾಗಿ ಮಾಡಲಾಯಿತು'' ಎಂದು ಕುಮಾರಸ್ವಾಮಿ ಸ್ಪಷ್ಟನೆ ನೀಡಿದ್ದಾರೆ.

    ಹುಳುಕು ಮನಸ್ಸಿನ ಮಂದಿ ವಿಷಕಾರಿದ್ದಾರೆ: ಎಚ್‌ಡಿಕೆ

    ಹುಳುಕು ಮನಸ್ಸಿನ ಮಂದಿ ವಿಷಕಾರಿದ್ದಾರೆ: ಎಚ್‌ಡಿಕೆ

    ''ನಿಖಿಲ್‌ ವಿವಾಹದಲ್ಲೂ ರಾಜಕೀಯ ಹುಡುಕಿದ ‘ಸಾಮಾಜಿಕ ಮಾಧ್ಯಮ'ದ ಕೆಲವು ಹುಳುಕು ಮನಸ್ಸಿನ ಮಂದಿ ತಮ್ಮ ಮನದಲ್ಲಿರುವ ವಿಷ ಕಾರಿಕೊಂಡಿದ್ದಾರೆ. ಅವರೆಲ್ಲರೂ ಶರಣರ ಈ ಮಾತನ್ನು ನೆನಪಲ್ಲಿಟ್ಟುಕೊಳ್ಳಬೇಕು'' ಎಂದು ವಿರೋಧಿಗಳಿಗೆ ಹೇಳಿದ್ದಾರೆ ಕುಮಾರಸ್ವಾಮಿ.

    ವಚನವನ್ನು ಉಲ್ಲೇಖಿಸಿದ ಕುಮಾರಸ್ವಾಮಿ

    ವಚನವನ್ನು ಉಲ್ಲೇಖಿಸಿದ ಕುಮಾರಸ್ವಾಮಿ

    ಅಂತ್ಯದಲ್ಲಿ ಶರಣದ ಒಂದು ವಚನವನ್ನೂ ಉಲ್ಲೇಖಿಸಿರುವ ಅವರು, "ಮನದ ಕೋಪ ತನ್ನ ಅರಿವಿನ ಕೇಡು
    ಮನೆಯೊಳಗಣ ಕಿಚ್ಚು ಮನೆಯ ಸುಟ್ಟಲ್ಲದೆ
    ನೆರೆಮನೆಯ ಸುಡದು ಕೂಡಲಸಂಗಮದೇವಾ" ಎಂದು ಬರೆದಿದ್ದಾರೆ.

    English summary
    HD Kumaraswamy give answers to those who raised questions about Nikhil Kumaraswamy marriage ceremony.
    Sunday, April 19, 2020, 16:22
    IIFA

    Kannada Photos

    Go to : More Photos
    ತಾಜಾ ಸುದ್ದಿ ತಕ್ಷಣ ಪಡೆಯಿರಿ
    Enable
    x
    Notification Settings X
    Time Settings
    Done
    Clear Notification X
    Do you want to clear all the notifications from your inbox?
    Settings X
    X