Don't Miss!
- Sports RCB vs KKR: ಯಶ್ ಮೇಲೆ 'ದಯೆ' ತೋರುತ್ತಾರಾ ರಿಂಕು ಸಿಂಗ್?; ಜಿದ್ದು ತೀರಿಸಿಕೊಳ್ತಾರಾ ಆರ್ಸಿಬಿ ವೇಗಿ?
- Technology ಪ್ರಜಾಪ್ರಭುತ್ವ ರಾಷ್ಟ್ರದಲ್ಲಿ ಡೀಪ್ಫೇಕ್ ದೊಡ್ಡ ಕಳವಳಕಾರಿ ಎಂದ ಮೋದಿ
- News ಚಿತ್ರದುರ್ಗದಲ್ಲಿ ಬಿಜೆಪಿಗೆ ಬಂಡಾಯದ ಬಿಸಿ: ಅಭ್ಯರ್ಥಿ ಬದಲಿಸದಿದ್ದರೆ ಪಕ್ಷೇತರ ಸ್ಪರ್ಧೆ, ಏ.3ಕ್ಕೆ ನಾಮಪತ್ರ ಸಲ್ಲಿಕೆ?
- Automobiles 20 ವರ್ಷದ ಬಳಿಕ ಲ್ಯಾಂಬೋರ್ಗಿನಿ ಲೋಗೋಗೆ ಹೊಸ ಟಚ್: ಈ ಕಂಪನಿಯ ಕಾರುಗಳು ಯಾಕೆ ಫೇಮಸ್?
- Lifestyle ಯಾವ ದಿಕ್ಕಿಗೆ ತಲೆ ಇಟ್ಟು ಮಲಗಬಾರದು..? ಹಿರಿಯರು ಈ ರೀತಿ ಹೇಳೋದೇಕೆ.?
- Finance 25ನೇ ವಯಸ್ಸಿನಲ್ಲಿ 25,000 ರೂ.ನಿಂದ 7,000 ಕೋಟಿ ಗಳಿಸಿದ ವ್ಯಕ್ತಿ ಬಗ್ಗೆ ತಿಳಿಯಿರಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ತಾತನಾದೆ ಎಂದು ಹೇಳಲು ಅತೀವ ಸಂತಸವಾಗುತ್ತಿದೆ; ಖುಷಿ ಹಂಚಿಕೊಂಡ ಕುಮಾರಸ್ವಾಮಿ
ನಟ ಹಾಗೂ ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಪತ್ನಿ ರೇವತಿ ಶುಕ್ರವಾರ (ಸೆಪ್ಟೆಂಬರ್ 24) ಮಧ್ಯಾಹ್ನ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಖಾಸಗಿ ಆಸ್ಪತ್ರೆಯಲ್ಲಿ ರೇವತಿ ನಿಖಿಲ್ ಕುಮಾರ್ ಗಂಡು ಮಗುವಿಗೆ ಜನ್ಮ ನೀಡಿದ್ದು, ತಾಯಿ ಮತ್ತು ಮಗು ಇಬ್ಬರು ಆರೋಗ್ಯವಾಗಿದ್ದಾರೆ ಎಂದು ಕುಟುಂಬಸ್ಥರಿಂದ ಮಾಹಿತಿ ಲಭ್ಯವಾಗಿದೆ. ಮನೆಗೆ ಮೊಮ್ಮಗ ಬಂದ ಖುಷಿಯಲ್ಲಿದ್ದಾರೆ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ. ಎಚ್ ಡಿ ಕೆ ಆಸ್ಪತ್ರೆಗೆ ಭೇಟಿ ನೀಡಿ ತಾಯಿ, ಮಗುವಿನ ಆರೋಗ್ಯ ವಿಚಾರಿಸಲಿದ್ದಾರೆ.
ತಾತನಾದ ಸಂತಸವನ್ನು ಎಚ್ ಡಿ ಕುಮಾರಸ್ವಾಮಿ ಟ್ವಿಟ್ಟರ್ ಮೂಲಕ ಸಂತಸ ಹಂಚಿಕೊಂಡಿದ್ದಾರೆ. ''ನನ್ನ ಜೀವನದಲ್ಲಿ ಇನ್ನೊಂದು ಶುಭ ಘಳಿಗೆ ಬಂದಿದೆ. ನಮ್ಮ ಪರಿವಾರಕ್ಕೆ ಹೊಸ ಸದಸ್ಯನ ಆಗಮನವಾಗಿದೆ. ತಾತನಾದೆ ಎಂದು ಹೇಳಲು ಅತೀವ ಸಂತಸವಾಗುತ್ತಿದೆ. ಕಂದನಿಗೆ ನಿಮ್ಮೆಲ್ಲರ ಹಾರೈಕೆ ಮತ್ತು ಆಶೀರ್ವಾದ ಇರಲಿ ಎಂದು ಪ್ರಾರ್ಥನೆ ಮಾಡುತ್ತೇನೆ'' ಎಂದು ಪೋಸ್ಟ್ ಹಾಕಿದ್ದಾರೆ.
ಇನ್ನು ತಂದೆಯಾದ ಸಂತಸವನ್ನು ನಿಖಿಲ್ ಕುಮಾರಸ್ವಾಮಿ ಕೂಡ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಪುತ್ರನನ್ನು ಎತ್ತಿಕೊಂಡಿರುವ ಫೋಟೋ ಶೇರ್ ಮಾಡಿರುವ ನಿಖಿಲ್, "ನಮ್ಮ ಜೀವನದ ಈ ವಿಶೇಷ ಕ್ಷಣವನ್ನು ನಿಮ್ಮೊಂದಿಗೆ ಹಂಚಿಕೊಳ್ಳಲು ಸಂತೋಷವಾಗುತ್ತಿದೆ" ಎಂದು ಹೇಳಿದ್ದಾರೆ.
ಎರಡು ವಾರಗಳ ಹಿಂದೆಯಷ್ಟೇ ರೇವತಿ ನಿಖಿಲ್ ಕುಮಾರ್ ಅವರ ಸೀಮಂತ ಕಾರ್ಯಕ್ರಮ ನಡೆದಿತ್ತು. ಬೆಂಗಳೂರಿನ ಎಚ್ ಎಸ್ ಆರ್ ಲೇಔಟ್ ನಲ್ಲಿರುವ ಮಾನ್ವಿ ಕನ್ವೆಂಷನ್ ಸೆಂಟರ್ನಲ್ಲಿ ಎಚ್ಡಿ ಕುಮಾರಸ್ವಾಮಿ ಸೊಸೆಯ ಸೀಮಂತ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು. ಮಾಜಿ ಪ್ರಧಾನಿ ಎಚ್ಡಿ ದೇವೇಗೌಡ ಕುಟುಂಬ ಸಂಬಂಧಿಕರು, ಆಪ್ತರು ಮತ್ತು ಗೆಳಯರಷ್ಟೇ ಭಾಗಿಯಾಗಿದ್ದರು.
2020ರ ಏಪ್ರಿಲ್ನಲ್ಲಿ ರೇವತಿ ಜೊತೆ ನಿಖಿಲ್ ಕುಮಾರಸ್ವಾಮಿ ಸಪ್ತಪದಿ ತುಳಿದಿದ್ದರು. ಲಾಕ್ ಡೌನ್ ನಿಯಮಗಳ ಪ್ರಕಾರ ವಿವಾಹ ಸಮಾರಂಭ ನೆರವೇರಿತ್ತು. ಬಿಡದಿ ಬಳಿ ಇರುವ ಫಾರ್ಮ್ ಹೌಸ್ ನಲ್ಲಿ ರೇವತಿ ಮತ್ತು ನಿಖಿಲ್ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಇದೀಗ ಒಂದು ವರ್ಷದ ಬಳಿಕ ಮೊದಲ ಮಗುವನ್ನು ಸ್ವಾಗತಿಸಿದ ಸಂತಸದಲ್ಲಿದ್ದಾರೆ.