twitter
    For Quick Alerts
    ALLOW NOTIFICATIONS  
    For Daily Alerts

    ತಾತನಾದೆ ಎಂದು ಹೇಳಲು ಅತೀವ ಸಂತಸವಾಗುತ್ತಿದೆ; ಖುಷಿ ಹಂಚಿಕೊಂಡ ಕುಮಾರಸ್ವಾಮಿ

    |

    ನಟ ಹಾಗೂ ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಪತ್ನಿ ರೇವತಿ ಶುಕ್ರವಾರ (ಸೆಪ್ಟೆಂಬರ್ 24) ಮಧ್ಯಾಹ್ನ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಖಾಸಗಿ ಆಸ್ಪತ್ರೆಯಲ್ಲಿ ರೇವತಿ ನಿಖಿಲ್ ಕುಮಾರ್ ಗಂಡು ಮಗುವಿಗೆ ಜನ್ಮ ನೀಡಿದ್ದು, ತಾಯಿ ಮತ್ತು ಮಗು ಇಬ್ಬರು ಆರೋಗ್ಯವಾಗಿದ್ದಾರೆ ಎಂದು ಕುಟುಂಬಸ್ಥರಿಂದ ಮಾಹಿತಿ ಲಭ್ಯವಾಗಿದೆ. ಮನೆಗೆ ಮೊಮ್ಮಗ ಬಂದ ಖುಷಿಯಲ್ಲಿದ್ದಾರೆ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ. ಎಚ್‌ ಡಿ ಕೆ ಆಸ್ಪತ್ರೆಗೆ ಭೇಟಿ ನೀಡಿ ತಾಯಿ, ಮಗುವಿನ ಆರೋಗ್ಯ ವಿಚಾರಿಸಲಿದ್ದಾರೆ.

    ತಾತನಾದ ಸಂತಸವನ್ನು ಎಚ್‌ ಡಿ ಕುಮಾರಸ್ವಾಮಿ ಟ್ವಿಟ್ಟರ್ ಮೂಲಕ ಸಂತಸ ಹಂಚಿಕೊಂಡಿದ್ದಾರೆ. ''ನನ್ನ ಜೀವನದಲ್ಲಿ ಇನ್ನೊಂದು ಶುಭ ಘಳಿಗೆ ಬಂದಿದೆ. ನಮ್ಮ ಪರಿವಾರಕ್ಕೆ ಹೊಸ ಸದಸ್ಯನ ಆಗಮನವಾಗಿದೆ. ತಾತನಾದೆ ಎಂದು ಹೇಳಲು ಅತೀವ ಸಂತಸವಾಗುತ್ತಿದೆ. ಕಂದನಿಗೆ ನಿಮ್ಮೆಲ್ಲರ ಹಾರೈಕೆ ಮತ್ತು ಆಶೀರ್ವಾದ ಇರಲಿ ಎಂದು ಪ್ರಾರ್ಥನೆ ಮಾಡುತ್ತೇನೆ'' ಎಂದು ಪೋಸ್ಟ್ ಹಾಕಿದ್ದಾರೆ.

    ಇನ್ನು ತಂದೆಯಾದ ಸಂತಸವನ್ನು ನಿಖಿಲ್ ಕುಮಾರಸ್ವಾಮಿ ಕೂಡ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಪುತ್ರನನ್ನು ಎತ್ತಿಕೊಂಡಿರುವ ಫೋಟೋ ಶೇರ್ ಮಾಡಿರುವ ನಿಖಿಲ್, "ನಮ್ಮ ಜೀವನದ ಈ ವಿಶೇಷ ಕ್ಷಣವನ್ನು ನಿಮ್ಮೊಂದಿಗೆ ಹಂಚಿಕೊಳ್ಳಲು ಸಂತೋಷವಾಗುತ್ತಿದೆ" ಎಂದು ಹೇಳಿದ್ದಾರೆ.

    Kumaraswamy shares happiness after Revathi gives birth to baby boy

    ಎರಡು ವಾರಗಳ ಹಿಂದೆಯಷ್ಟೇ ರೇವತಿ ನಿಖಿಲ್ ಕುಮಾರ್ ಅವರ ಸೀಮಂತ ಕಾರ್ಯಕ್ರಮ ನಡೆದಿತ್ತು. ಬೆಂಗಳೂರಿನ ಎಚ್‌ ಎಸ್‌ ಆರ್ ಲೇಔಟ್‌ ನಲ್ಲಿರುವ ಮಾನ್ವಿ ಕನ್ವೆಂಷನ್ ಸೆಂಟರ್‌ನಲ್ಲಿ ಎಚ್‌ಡಿ ಕುಮಾರಸ್ವಾಮಿ ಸೊಸೆಯ ಸೀಮಂತ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು. ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡ ಕುಟುಂಬ ಸಂಬಂಧಿಕರು, ಆಪ್ತರು ಮತ್ತು ಗೆಳಯರಷ್ಟೇ ಭಾಗಿಯಾಗಿದ್ದರು.

    2020ರ ಏಪ್ರಿಲ್​ನಲ್ಲಿ ರೇವತಿ ಜೊತೆ ನಿಖಿಲ್​ ಕುಮಾರಸ್ವಾಮಿ ಸಪ್ತಪದಿ ತುಳಿದಿದ್ದರು. ಲಾಕ್ ​ಡೌನ್​ ನಿಯಮಗಳ ಪ್ರಕಾರ ವಿವಾಹ ಸಮಾರಂಭ ನೆರವೇರಿತ್ತು. ಬಿಡದಿ ಬಳಿ ಇರುವ ಫಾರ್ಮ್​ ಹೌಸ್ ​ನಲ್ಲಿ ರೇವತಿ ಮತ್ತು ನಿಖಿಲ್ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಇದೀಗ ಒಂದು ವರ್ಷದ ಬಳಿಕ ಮೊದಲ ಮಗುವನ್ನು ಸ್ವಾಗತಿಸಿದ ಸಂತಸದಲ್ಲಿದ್ದಾರೆ.

    English summary
    HD Kumaraswamy shares happiness after Revathi gives birth to baby boy.
    Friday, September 24, 2021, 16:37
    IIFA

    Kannada Photos

    Go to : More Photos
    ತಾಜಾ ಸುದ್ದಿ ತಕ್ಷಣ ಪಡೆಯಿರಿ
    Enable
    x
    Notification Settings X
    Time Settings
    Done
    Clear Notification X
    Do you want to clear all the notifications from your inbox?
    Settings X
    X