ಕನ್ನಡದ ಮಹಾತ್ವಾಕಾಂಕ್ಷೆಯ ಸಿನಿಮಾ 'ಕುರುಕ್ಷೇತ್ರ'ಕ್ಕೆ ಇಂದು ಅದ್ದೂರಿ ಚಾಲನೆ
ಚಾಲೆಂಜಿಂಗ್ ಸ್ಟಾರ್ ದರ್ಶನ್ ರವರ 50ನೇ ಸಿನಿಮಾ 'ಕುರುಕ್ಷೇತ್ರ'ಕ್ಕೆ ಮುಹೂರ್ತ ನಿಗದಿ ಆಗಿದೆ. ಇಂದು (ಆಗಸ್ಟ್ 6) ಸಂಜೆ 6.30ಕ್ಕೆ 'ಕುರುಕ್ಷೇತ್ರ' ಚಿತ್ರದ ಮುಹೂರ್ತ ಕಾರ್ಯಕ್ರಮ ನಡೆಯಲಿದೆ.
ಬೆಂಗಳೂರಿನ ತುಮಕೂರು ರಸ್ತೆ ಬಳಿಯಿರುವ ಗೊರಗುಂಟೆಪಾಳ್ಯದ ಡಾ.ಪ್ರಭಾಕರ್ ಕೋರೆ ಕನ್ವೆಂಷನ್ ಸೆಂಟರ್ ನಲ್ಲಿ 'ಕುರುಕ್ಷೇತ್ರ' ಚಿತ್ರದ ಮುಹೂರ್ತ ಸಮಾರಂಭ ನಡೆಯಲಿದೆ. ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಹಾಗೂ ಎಚ್.ಡಿ.ಕುಮಾರಸ್ವಾಮಿ ರವರಿಗೆ ವಿಶೇಷ ಆಹ್ವಾನ ನೀಡಲಾಗಿದ್ದು, ಮುಹೂರ್ತದ ಶಾಟ್ ಗೆ ಸಿ.ಎಂ ಸಿದ್ಧರಾಮಯ್ಯ ಕ್ಲಾಪ್ ಮಾಡಲಿದ್ದಾರೆ. ರಾಜಕೀಯ ಗಣ್ಯರ ಜೊತೆಗೆ ಸಿನಿಮಾದ ತಾರೆಯರು ಸಹ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.

ಅಂದಹಾಗೆ, 'ಕುರುಕ್ಷೇತ್ರ' ಸಿನಿಮಾವನ್ನು ನಿರ್ಮಾಪಕ ಮುನಿರತ್ನ ನಿರ್ಮಾಣ ಮಾಡುತ್ತಿದ್ದು, ನಾಗಣ್ಣ ನಿರ್ದೇಶನ ಚಿತ್ರಕ್ಕಿದೆ. ಚಿತ್ರದಲ್ಲಿ ದರ್ಶನ್, ರವಿಚಂದ್ರನ್, ಸಾಯಿಕುಮಾರ್, ನಿಖಿಲ್ ಕುಮಾರ್, ಹರಿಪ್ರಿಯಾ, ಲಕ್ಷ್ಮಿ, ಸ್ನೇಹಾ, ರೆಜಿನಾ, ಮತ್ತು ಬಾಲಿವುಡ್ ನಟ ಡ್ಯಾನಿಶ್ ಅಖ್ತರ್ ಸೈಫಿ ಸೇರಿದಂತೆ ಹಲವರು ಕಾಣಿಸಿಕೊಳ್ಳುವುದು ಖಚಿತವಾಗಿದೆ. 'ಕುರುಕ್ಷೇತ್ರ' ಸಿನಿಮಾದ ಚಿತ್ರೀಕರಣ ಹೈದರಾಬಾದ್ ನ ರಾಮೋಜಿ ಫಿಲ್ಮ್ ಸಿಟಿಯಲ್ಲಿ ನಡೆಯಲಿದೆ.


Click it and Unblock the Notifications











