Darshan: ಸ್ಯಾಂಡಲ್‌ವುಡ್ ನಟ ದರ್ಶನ್ ವಿರುದ್ಧ ದೂರು ದಾಖಲಿಸಿದ ಮಹಿಳೆ

ಚಾಲೆಂಜಿಂಗ್ ಸ್ಟಾರ್ ದರ್ಶನ್‌ಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಇತ್ತೀಚೆಗೆ ಹುಲಿ ಉಗುರು ಪೆಂಡೆಂಟ್ ಹೊಂದಿದ್ದ ವಿಚಾರವಾಗಿ ಅರಣ್ಯ ಇಲಾಖೆ ಅಧಿಕಾರಿಗಳು ದರ್ಶನ್ ಮನೆಯಲ್ಲಿ ಪರಿಶೀಲನೆ ನಡೆಸಿದ್ದರು. ಇದೀಗ ದರ್ಶನ್ ಮನೆ ನಾಯಿ ನನ್ನ ಮೇಲೆ ದಾಳಿ ಮಾಡಿ ನನ್ನನ್ನು ಕಚ್ಚಿದೆ ಎಂದು ಮಹಿಳೆಯೊಬ್ಬರು ಆರ್‌. ಆರ್ ನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.

ಅಮಿತಾ ಜಿಂದಾಲ್ ಎಂಬ ಮಹಿಳೆ ನಾಯಿ ನೋಡಿಕೊಳ್ಳುತ್ತಿದ್ದ ವ್ಯಕ್ತಿ ಹಾಗೂ ನಟ ದರ್ಶನ್ ವಿರುದ್ಧ ಮಹಿಳೆ ದೂರು ನೀಡಿದ್ದಾರೆ. ಶನಿವಾರ (ಅಕ್ಟೋಬರ್ 28) ದೂರುದಾರ ಮಹಿಳೆ ದರ್ಶನ್ ಅವರ ಆರ್‌. ಆರ್‌ ನಗರದ ನಿವಾಸದ ಪಕ್ಕದಲ್ಲೇ ಇರುವ ಸ್ಪರ್ಶ ಆಸ್ಪತ್ರೆ ಬಳಿ ಹೋಗಿದ್ದರು. ಈ ವೇಳೆ ತಮ್ಮ ಕಾರನ್ನು ದರ್ಶನ್‌ರವರ ಮನೆಯ ಪಕ್ಕದ ಖಾಲಿ ಜಾಗದ ಎದುರು ರಸ್ತೆಯಲ್ಲಿ ನಿಲ್ಲಿಸಿದ್ದರು. ವಾಪಸ್ ಹೊರಟಾಗ ಅವರು ಕಾರು ನಿಲ್ಲಿಸಿದ ರಸ್ತೆಯ ಪಕ್ಕದಲ್ಲಿದ್ದ ಖಾಲಿ ಜಾಗದಲ್ಲಿ 3 ನಾಯಿಗಳಿತ್ತು. ಎರಡು ನಾಯಿಗಳನ್ನು ಕಟ್ಟಿ ಹಾಕಿದ್ದರೆ ಒಂದು ನಾಯಿಯನ್ನು ಕಟ್ಟಿ ಹಾಕಿರಲಿಲ್ಲ.

lady injured in Actor Darshan pet Dogs attack, she files a complaint against him

ಈ ವೇಳೆ ನಟ ದರ್ಶನ್ ಮನೆ ಸಿಬ್ಬಂದಿಗೆ ನಾಯಿಗಳನ್ನು ಪಕ್ಕಕ್ಕೆ ಕರೆದುಕೊಳ್ಳುವಂತೆ ಅಮಿತಾ ಕೇಳಿದ್ದಾರೆ. ಆಗ ಈ ಜಾಗದಲ್ಲಿ ನೀವು ಕಾರು ಪಾರ್ಕ್ ಮಾಡುವಂತಿಲ್ಲ ಎಂದು ಸಿಬ್ಬಂದಿ ಆಕೆಯ ಜೊತೆ ವಾಗ್ದ ನಡೆಸಿದ್ದಾರೆ. ಬಳಿಕ ನಾಯಿಗಳು ಮಹಿಳೆಯ ಮೇಲೆ ದಾಳಿ ನಡೆಸಿ ಹೊಟ್ಟೆ ಹಾಗೂ ಕೈಗೆ ಕಚ್ಚಿ ಗಾಯಗೊಳಿಸಿವೆ. ಬಳಿಕ ಅಮಿತಾ ಆರ್‌. ಆರ್‌ ನಗರ ಪೊಲೀಸ್ ಠಾಣೆಗೆ ತೆರಳಿ ಘಟನೆ ಸಂಬಂಧ ಪ್ರಕರಣ ದಾಖಲಿಸಿದ್ದಾರೆ. ಇನ್ನು ಪ್ರಕರಣದಲ್ಲಿ ನಟ ದರ್ಶನ್ ಅವರನ್ನು ಎರಡನೇ ಆರೋಪಿಯನ್ನಾಗಿಸಿ ದೂರು ನೀಡಿದ್ದಾರೆ.

ಬೇಜವಾಬ್ದಾರಿಯಿಂದ ನಾಯಿಗಳನ್ನು ನನ್ನ ಮೇಲೆ ದಾಳಿ ಮಾಡಲು ಬಿಟ್ಟು ಗಾಯ ಪಡಿಸಿದ ಅಪರಿಚಿತ ವ್ಯಕ್ತಿಗಳು ಮತ್ತು ಮನೆಯ ಮಾಲೀಕರು(ದರ್ಶನ್) ಹಾಗೂ ನಾಯಿಗಳ ಮಾಲೀಕರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕೆಂದು ಅಮಿತಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಈ ದೂರಿನ ಅನ್ವಯ ನಟ ದರ್ಶನ್ ಹಾಗೂ ಇಬ್ಬರ ವಿರುದ್ಧ ಪೊಲೀಸರು ಎಫ್ಐಆರ್‌ ದಾಖಲಿಸಿ ವಿಚಾರಣೆ ಮುಂದುವರೆಸಿದ್ದಾರೆ.

ಇತ್ತೀಚೆಗೆ ಬಿಗ್‌ಬಾಸ್ ಖ್ಯಾತಿಯ ವರ್ತೂರು ಸಂತೋಷ್ ಹುಲಿ ಉಗುರು ಹೊಂದಿದ್ದ ಆರೋಪದಲ್ಲಿ ಜೈಲು ಸೇರಿದ್ದರು. ಆಗ ಹುಲಿ ಉಗುರಿನ ಪೆಂಡೆಂಟ್ ಧರಿಸಿದ ಸಿನಿಮಾ ತಾರೆಯರ ಫೋಟೊಗಳು ವೈರಲ್ ಆಗಿತ್ತು. ನಟ ದರ್ಶನ್, ನಿಖಿಲ್ ಕುಮಾರಸ್ವಾಮಿ, ರಾಕ್‌ಲೈನ್ ವೆಂಕಟೇಶ್, ಜಗ್ಗೇಶ್ ಸೇರಿದಂತೆ ಹಲವರ ಬಳಿ ಹುಲಿ ಉಗುರು ಇದೆ ಎನ್ನುವ ಮಾತುಗಳು ಕೇಳಿಬಂದಿತ್ತು. ಇದೇ ವಿಚಾರವಾಗಿ ಅರಣ್ಯಾಧಿಕಾರಿಗಳ ತಂಡ ಕಾರ್ಯಾಚರಣೆ ಕೈಗೊಂಡಿದ್ದರು. ದರ್ಶನ್, ಜಗ್ಗೇಶ್, ನಿಖಿಲ್ ಕುಮಾರಸ್ವಾಮಿ ಮನೆಯಲ್ಲಿ ಪರಿಶೀಲನೆ ನಡೆಸಿದ್ದರು.

ದರ್ಶನ್ ಮನೆಯಲ್ಲಿ ಪರಿಶೀಲನೆ ವೇಲೆ 8 ಹುಲಿ ಉಗುರಿನ ಪೆಂಡೆಂಟ್ ಸಿಕ್ಕಿದ್ದು ಅದನ್ನು ಅರಣ್ಯ ಇಲಾಖೆ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ. ಆದರೆ ಅದು ಅಸಲಿ ಹುಲಿ ಉಗುರು ಅಲ್ಲ ಎನ್ನಲಾಗಿತ್ತು.

More from Filmibeat

English summary
Actor Darshan pet Dogs attacks lady, she files FIR
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X