For Quick Alerts
  ALLOW NOTIFICATIONS  
  For Daily Alerts

  'ಬೆಳ್ಳಿ ಹೆಜ್ಜೆ' ಕಾರ್ಯಕ್ರಮದಲ್ಲಿ ಲಹರಿ ಸಂಸ್ಥೆಯ ಮನೋಹರನ್ ನಾಯ್ಡು ಅತಿಥಿ

  By Bharath Kumar
  |

  ಕರ್ನಾಟಕ ಚಲನಚಿತ್ರ ಅಕಾಡೆಮಿ ಆಯೋಜನೆಯ ವಿಶೇಷ ಸಂವಾದ ಕಾರ್ಯಕ್ರಮ 'ಬೆಳ್ಳಿ ಹೆಜ್ಜೆ'ಗೆ ಈ ಬಾರಿ ಲಹರಿ ಸಂಸ್ಥೆಯ ಮಾಲೀಕ ಮನೋಹರನ್ ನಾಯ್ಡು ಅವರು ಆಗಮಿಸಲಿದ್ದಾರೆ.

  ಕರ್ನಾಟಕ ಚಲನಚಿತ್ರ ಅಕಾಡೆಮಿ ಜುಲೈ 10 ರಂದು ಸಂಜೆ 5 ಗಂಟೆಗೆ ಮನೋಹರನ್ ನಾಯ್ಡು ಅವರೊಂದಿಗೆ ವಿಶೇಷ ಸಂವಾದ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಬೆಂಗಳೂರಿನ ಕುಮಾರ ಪಾರ್ಕ್ ರಸ್ತೆಯಲ್ಲಿನ ಗಾಂಧಿ ಭವನದ ಮಹದೇವ ದೇಸಾಯಿ ಸಭಾಂಗಣದಲ್ಲಿ ಜರುಗಲಿದೆ ಎಂದು ಕರ್ನಾಟಕ ಚಲನಚಿತ್ರ ಅಕಾಡೆಮಿ ರಿಜಿಸ್ಟ್ರಾರ್ ಹೆಚ್.ಬಿ. ದಿನೇಶ್ ಅವರು ತಿಳಿಸಿದ್ದಾರೆ.

  ಕಾರ್ಯಕ್ರಮದಲ್ಲಿ ಲಹರಿ ಸಂಸ್ಥೆಯ ಜಿ. ಮನೋಹರನ್ ನಾಯ್ಡು ಅವರು ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದು, ಸುಧಾ ವಾರಪತ್ರಿಕೆಯ ಸಹಾಯಕ ಸಂಪಾದಕ ಬಿ.ಎಂ. ಹನೀಫ್ ಅವರು ಸಂವಾದ ನಡೆಸಿಕೊಡಲಿದ್ದಾರೆ.

  ನಿವೃತ್ತ ಪ್ರಧಾನ ಕಾರ್ಯದರ್ಶಿ ಐ.ಎಂ. ವಿಠ್ಠಲಮೂರ್ತಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ನಿರ್ದೇಶಕ ಡಾ. ಪಿ.ಎಸ್. ಹರ್ಷ, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಸಾ.ರಾ. ಗೋವಿಂದು, ಖ್ಯಾತ ಚಲನಚಿತ್ರ ನಟ ಹಾಗೂ ನಿರ್ದೇಶಕ ವಿ. ರವಿಚಂದ್ರನ್ ಹಾಗೂ ಖ್ಯಾತ ಚಲನಚಿತ್ರ ಸಂಗೀತ ನಿರ್ದೇಶಕ ಹಂಸಲೇಖ ಅವರು ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ.

  ಕರ್ನಾಟಕ ಚಲನಚಿತ್ರ ಅಕಾಡೆಮಿ ಅಧ್ಯಕ್ಚ ಎಸ್. ವಿ. ರಾಜೇಂದ್ರಸಿಂಗ್ ಬಾಬು ಅವರು ಈ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಇದೇ ಸಂದರ್ಭದಲ್ಲಿ ಮನೋಹರನ್ ನಾಯ್ಡು ಅವರ ಕುರಿತ ಸಾಕ್ಷ್ಯಚಿತ್ರ ಹಾಗೂ ಛಾಯಾಚಿತ್ರ ಪ್ರದರ್ಶನವನ್ನು ಸಹ ಹಮ್ಮಿಕೊಂಡಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

  English summary
  'Belli - Hejje' program organized by Karnataka Chalana Chitra Academy on October 10th at 5 pm in Gandhi Bhavan Mahadev Desai Hall, Kumara Park Road Bengaluru. Lahari audio company proprietor manohar naidu will be guest.

  Kannada Photos

  Go to : More Photos
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X
  X