For Quick Alerts
  ALLOW NOTIFICATIONS  
  For Daily Alerts

  ದೊಡ್ಮನೆ ಕುಟುಂಬವ ಭೇಟಿ ಮಾಡಿದ ತೋಟಗಾರಿಕೆ ಇಲಾಖೆ ಅಧಿಕಾರಿಗಳು

  |

  ಈ ಬಾರಿ ಲಾಲ್‌ಬಾಗ್‌ ಪುಷ್ಪೋತ್ಸವವನ್ನು ನಟ ಪುನೀತ್ ರಾಜ್‌ಕುಮಾರ್ ಹೆಸರಲ್ಲಿ ಆಯೋಜಿಸಲಾಗುತ್ತಿದೆ. ಈ ಬಗ್ಗೆ ಈಗಾಗಲೇ ತೋಟಗಾರಿಕಾ ಸಚಿವ ಮುನಿರತ್ನ ಘೋಷಿಸಿದ್ದಾರೆ. ಪುನೀತ್ ಹೆಸರಲ್ಲಿ ಫಲಪುಷ್ಪ ಪ್ರದರ್ಶನ ನಡೆಸಲು ಅಧಿಕಾರಿಗಳು ಸಜ್ಜಾಗುತ್ತಿದ್ದು ಇದೇ ಕಾರಣಕ್ಕೆ ದೊಡ್ಮನೆ ಕುಟುಂಬಸ್ಥರನ್ನು ಭೇಟಿಯಾಗಿದ್ದಾರೆ.

  ಡಾ ರಾಜಕುಮಾರ್ ಹಾಗೂ ಪುನೀತ್ ರಾಜಕುಮಾರ್ ಅವರ ವಿಷಯಾಧಾರಿತ ವಿಶೇಷ ಫಲಪುಷ್ಪ ಪ್ರದರ್ಶನ ಆಯೋಜಿಸಲು ರಾಜ್‌ಕುಮಾರ್ ಕುಟುಂಬದವರಿಂದ ವಿಶೇಷ ಸಲಹೆಗಳನ್ನು ಪಡೆಯಲೆಂದು ಅಧಿಕಾರಿಗಳು ದೊಡ್ಮನೆ ಕುಟುಂಬದವರನ್ನು ಭೇಟಿಯಾಗಿದ್ದರು.

  ಅಶ್ವಿನಿ ಪುನೀತ್ ರಾಜ್‌ಕುಮಾರ್, ರಾಘವೇಂದ್ರ ರಾಜ್‌ಕುಮಾರ್, ಶಿವರಾಜ್ ಕುಮಾರ್ ಅವರುಗಳ ನಿವಾಸಕ್ಕೆ ತೆರಳಿ ಅವರಿಗೆ ಹೂಗುಚ್ಛ ನೀಡಿ, ಕಾರ್ಯಕ್ರಮದ ವಿವರಣೆ ನೀಡಿ, ಯೋಜನೆಗಳನ್ನು ತಿಳಿಸಿ ಅವರಿಂದಲೂ ಸಲಹೆಗಳನ್ನು ಸ್ವೀಕರಿಸಿತು ಅಧಿಕಾರಿ ವರ್ಗ.

  ಆಗಸ್ಟ್ 5ರಂದು ಫಲಪುಷ್ಪ ಪ್ರದರ್ಶನವು ಉದ್ಘಾಟನೆಗೊಳ್ಳಲಿದ್ದು ಖ್ಯಾತ ಚಿತ್ರನಟರಾದ, ಡಾ.ಶಿವರಾಜಕುಮಾರ್ ರಾಘವೇಂದ್ರ ರಾಜಕುಮಾರ್ ಹಾಗೂ ಪುನೀತ್ ರಾಜಕುಮಾರ್ ರವರ ಧರ್ಮಪತ್ನಿ ಶ್ರೀಮತಿ ಅಶ್ವಿನಿ ಪುನೀತ್ ರಾಜ್ ಕುಮಾರ್ ರವರನ್ನು ಇಂದು ಫಲಪುಷ್ಪ ಪ್ರದರ್ಶನಕ್ಕೆ ಸೂಕ್ತ ಸಲಹೆ ಹಾಗೂ ಮಾರ್ಗದರ್ಶನ ನೀಡಲು ಕರ್ನಾಟಕ ತೋಟಗಾರಿಕೆ ಇಲಾಖೆ ಮತ್ತು ಮೈಸೂರು ಉದ್ಯಾನ ಕಲಾ ಸಂಘದ ವತಿಯಿಂದ ಆತ್ಮೀಯವಾಗಿ ವಿನಂತಿಸಲಾಯಿತು.

  ಸ್ವಾತಂತ್ರ್ಯೋತ್ಸವ ಫಲಪುಷ್ಪ ಪ್ರದರ್ಶನ ಲಾಲ್ ಬಾಗ್ ನಲ್ಲಿ ಆಗಸ್ಟ್ 5 ರಿಂದ 15 ರವರೆಗೂ ನಡೆಯಲಿದೆ. ಇದಕ್ಕಾಗಿ ಹಲವು ವಿಧವಾದ ಹೂವುಗಳನ್ನು ರಾಜ್ಯ, ದೇಶ ಹಾಗೂ ವಿದೇಶಗಳಿಂದಲೂ ಆಮದು ಮಾಡಿಕೊಳ್ಳಲಾಗುತ್ತಿದೆ.

  ಜೂನ್ 13 ರಂದು ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ್ದ ಸಚಿವ ಮುನಿರತ್ನ, ವಿಧಾನಸೌಧದಲ್ಲಿ ಸುದ್ದಿಗೋಷ್ಠಿನಡೆಸಿ ಮಾತನಾಡಿದ ಮುನಿರತ್ನ, ''ಆಗಸ್ಟ್ 05 ರಿಂದ ಆಗಸ್ಟ್ 15 ರ ವರೆಗೆ ಸ್ವಾತಂತ್ರ್ತೋತ್ಸವದ ಪ್ರಯುಕ್ತ ಲಾಲ್‌ಬಾಗ್‌ನಲ್ಲಿ ಪುಷ್ಪೋತ್ಸವ ಆಯೋಜಿಸಲಾಗುತ್ತಿದ್ದು, ಈ ಬಾರಿ ಪುನೀತ್ ರಾಜ್‌ಕುಮಾರ್ ಹೆಸರಲ್ಲಿ ಪುಷ್ಪೋತ್ಸವ ನಡೆಯಲಿದೆ'' ಎಂದಿದ್ದರು,

  ಆಗಸ್ಟ್ 05 ರಂದು ಸಿಎಂ ಬಸವರಾಜ ಬೊಮ್ಮಾಯಿ ಅವರು ಪುಷ್ಪೋತ್ಸವವನ್ನು ಉದ್ಘಾಟನೆ ಮಾಡುತ್ತಾರೆ. ಕೋವಿಡ್ ನಿಮಯಗಳ ಅನುಗುಣವಾಗಿಯೇ ಪುಷ್ಪೋತ್ಸವ ನಡೆಯಲಿದೆ. ಪೊಷ್ಪೋತ್ಸವದ ಒಟ್ಟು ಥೀಮ್ ಪುನೀತ್ ರಾಜ್‌ಕುಮಾರ್ ಅವರ ಸಿನಿಮಾ, ವ್ಯಕ್ತಿತ್ವವನ್ನು ಆಧರಿಸಿರುತ್ತದೆ ಅಲ್ಲದೆ ಅಪ್ಪು ಅವರ ಗಾಜನೂರಿನ ಮನೆಯನ್ನು ಸಹ ಹೂವಿನಿಂದ ಅಲಂಕರಿಸಲಾಗುತ್ತದೆ'' ಎಂದಿದ್ದರು ಸಚಿವರು.

  ಅದರ ಬೆನ್ನಲ್ಲೆ ಈಗ ಅಧಿಕಾರಿಗಳು ದೊಡ್ಮನೆಯಿಂದ ಸಲಹೆಗಳನ್ನು ಸ್ವೀಕರಿಸಿದ್ದಾರೆ. ದೊಡ್ಮನೆ ಭೇಟಿ ಸಂದರ್ಭದಲ್ಲಿ ಉದ್ಯಾನ ಕಲಾಸಂಘದ ಉಪಾಧ್ಯಕ್ಷರಾದ ಶ್ರೀ ವಾಸುದೇವ್. ತೋಟಗಾರಿಕೆ ಜಂಟಿ ನಿರ್ದೇಶಕರಾದ ಡಾ. ಎಂ ಜಗದೀಶ್ ಹಾಗೂ ಲಾಲ್ ಬಾಗ್ ತೋಟಗಾರಿಕೆ ಉಪನಿರ್ದೇಶಕರಾದ ಶ್ರೀಮತಿ ಜಿ ಕುಸುಮ ಹಾಗೂ ದಿನಿ ಸಿನಿ ಕ್ರಿಯೇಷನ್ಸ್ ನ ದಿನೇಶ್ ರವರು ಉಪಸ್ಥಿತರಿದ್ದರು.

  Recommended Video

  PuneethRajkumar ಅವರ ಹೆಸರಿನಲ್ಲಿ ಪ್ರಶಸ್ತಿ, ಪ್ರಶಸ್ತಿ ಪ್ರದಾನ ಮಾಡಿದ ಅಶ್ವಿನಿ ಪುನೀತ್ ರಾಜಕುಮಾರ್ *Sandalwood
  English summary
  Lalbhag organizing flower show in the name of Puneeth Rajkumar. So Lalbhag officers met Dr Rajkumar family and took their advice.
  Thursday, July 21, 2022, 13:51
  IIFA

  Kannada Photos

  Go to : More Photos
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X
  X