28 ದಿನದ ಬಳಿಕ ಆಸ್ಪತ್ರೆಯಿಂದ ಮನೆಗೆ ಮರಳಿದ ಲತಾ ಮಂಗೇಶ್ಕರ್

ಖ್ಯಾತ ಗಾಯಕಿ ಲತಾ ಮಂಗೇಶ್ಕರ್ ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಯಿಂದ ಭಾನುವಾರ ಡಿಸ್ಚಾರ್ಜ್ ಆಗಿದ್ದಾರೆ. 28 ದಿನಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗಾಯಕಿ ಗುಣಮುಖರಾಗಿದ್ದು, ಮನೆಗೆ ವಾಪಸ್ ತೆರಳಿದ್ದಾರೆ.

ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ಬಳಿಕ ಟ್ವೀಟ್ ಮಾಡಿರುವ ಲತಾ ಮಂಗೇಶ್ಕರ್ ''ನಮಸ್ಕಾರ, 28 ದಿನಗಳಿಂದ ನಾನು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದೆ. ಉಸಿರಾಟದ ತೊಂದರೆ ಇದ್ದ ಕಾರಣ ವೈದ್ಯರು ಕೂಡ ಆಸ್ಪೆತ್ರೆಯಲ್ಲೇ ಇರುವಂತೆ ಸೂಚಿಸಿದ್ದರು. ಈಗ ಸಂಪೂರ್ಣವಾಗಿ ಚೇತರಿಸಿಕೊಂಡಿದ್ದು, ಮನೆಗೆ ಮರಳಿದ್ದೇನೆ'' ಎಂದು ತಿಳಿಸಿದ್ದಾರೆ.

''ನನ್ನ ಆರೋಗ್ಯ ಕುರಿತು ಪ್ರಾರ್ಥಿಸಿದ ಎಲ್ಲರಿಗೂ ಧನ್ಯವಾದಗಳು. ವಿಶೇಷವಾಗಿ ನನ್ನ ವೈದ್ಯರಿಗೆ ನಾನು ಥ್ಯಾಂಕ್ಸ್ ಹೇಳುತ್ತೇನೆ'' ಎಂದು ಸಂತಸ ಹಂಚಿಕೊಂಡಿದ್ದಾರೆ.

Lata Mangeshkar Discharge From Hospital After 28 Days

ಅಂದ್ಹಾಗೆ, ಲತಾ ಮಂಗೇಶ್ಕರ್ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ತಿಳಿದ ಅಭಿಮಾನಿಗಳು, ಅವರ ಆರೋಗ್ಯ ಸರಿಯಾಗಲಿ, ಬೇಗ ಗುಣಮುಖರಾಗಲಿ ಎಂದು ಪ್ರಾರ್ಥಿಸಿದ್ದರು.

ಸೆಪ್ಟೆಂಬರ್ ತಿಂಗಳಲ್ಲಿ ಲತಾ ಮಂಗೇಶ್ಕರ್ ಅವರು 90ನೇ ವಸಂತಕ್ಕೆ ಕಾಲಿಟ್ಟರು. 2001ರಲ್ಲಿ ಭಾರತದ ಅತ್ಯುನ್ನತ ಭಾರತ ರತ್ನ ಪ್ರಶಸ್ತಿಗೆ ಪಾತ್ರರಾಗಿದ್ದರು. ಭಾರತದ ಸುಮಾರು 36 ಭಾಷೆಯಲ್ಲಿ ಹಾಡುಗಳನ್ನು ಹಾಡಿರುವ ಸಾಧನೆ ಇವರದ್ದು.

ಭಾರತ ರತ್ನ, ದಾದಾ ಸಾಹೇಬ್ ಫಾಲ್ಕೆ, ಮೂರು ರಾಷ್ಟ್ರ ಪ್ರಶಸ್ತಿ ಸೇರಿದಂತೆ ನೂರಾರೂ ಪ್ರತಿಷ್ಟಿತ ಪ್ರಶಸ್ತಿಗಳು ಲತಾ ಮಂಗೇಶ್ಕರ್ ರಿಗೆ ಸಿಕ್ಕಿವೆ. ಅತಿ ಹೆಚ್ಚು ಹಾಡುಗಳನ್ನು ಹಾಡಿದ್ದರಿಂದ 1974 ರಲ್ಲಿ ಗಿನ್ನಿಸ್ ದಾಖಲೆಗೆ ಇವರ ಹೆಸರು ಸೇರಿಕೊಂಡಿತು.

More from Filmibeat

English summary
Legendary Singer Lata mangeshkar has discharge from Breach Candy hospital after 28 days.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X