For Quick Alerts
  ALLOW NOTIFICATIONS  
  For Daily Alerts

  ಕೊರೊನಾದಿಂದ ಖ್ಯಾತ ನಿರ್ದೇಶಕ ಪುಟ್ಟಣ್ಣ ಕಣಗಾಲ್ ಮಗ ಸಾವು

  |

  ಕನ್ನಡ ಚಿತ್ರರಂಗದ ಖ್ಯಾತ ನಿರ್ದೇಶಕ ಪುಟ್ಟಣ್ಣ ಕಣಗಾಲ್ ಪುತ್ರ ರಾಮು ಕಣಗಾಲ್ ಕೋವಿಡ್ ಕಾರಣದಿಂದ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.

  ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ರಾಮು ಕಣಗಾಲ್ ಅವರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿತ್ತು. ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು.

  ಹುಟ್ಟೂರಿನಲ್ಲಿ ನಿರ್ಮಾಪಕ ರಾಮು ಅಂತ್ಯಕ್ರಿಯೆ; ಕುಟುಂಬದವರಿಗೆ ಮಾತ್ರ ಅವಕಾಶಹುಟ್ಟೂರಿನಲ್ಲಿ ನಿರ್ಮಾಪಕ ರಾಮು ಅಂತ್ಯಕ್ರಿಯೆ; ಕುಟುಂಬದವರಿಗೆ ಮಾತ್ರ ಅವಕಾಶ

  ಆದರೆ, ಚಿಕಿತ್ಸೆ ಫಲಕಾರಿಯಾಗದೇ ಬುಧವಾರ ರಾಮು ಕಣಗಾಲ್ ನಿಧನರಾಗಿದ್ದಾರೆ ಎಂದು ಸುದ್ದಿ ಹೊರಬಿದ್ದಿದೆ.

  ರಾಮು ಕಣಗಾಲ್ ಅವರ ನಿಧನಕ್ಕೆ ಚಿತ್ರರಂಗದಿಂದ ಹಲವರು ಸಂತಾಪ ಸೂಚಿಸಿದ್ದಾರೆ.

  ಚೆನ್ನೈನಲ್ಲಿ ವಿದ್ಯಾಭ್ಯಾಸ ಪಡೆದುಕೊಂಡಿದ್ದ ರಾಮು ಕಣಗಾಲ್ ಬೆಂಗಳೂರಿನಲ್ಲಿ ನೆಲೆಸಿದ್ದರು. ಕಣಗಾಲ್ ನೃತ್ಯಾಲಯ ಎಂಬ ಹೆಸರಿನಲ್ಲಿ ನಾಟ್ಯಶಾಲೆ ನಡೆಸುತ್ತಿದ್ದರು. ತಂದೆ ಮಾರ್ಗದರ್ಶನ ಹಾಗು ಅವರ ನಡೆದು ಹೋದ ಹಾದಿಯಲ್ಲಿ ಜೀವಿಸುತ್ತಿದ್ದೇವೆ ಎಂದು ಸಂದರ್ಶನಗಳಲ್ಲಿ ಹೇಳಿದ್ದರು.

  English summary
  Late Sandalwood Director Puttanna Kanagal's son Ramu Kanagal dies of COVID-19.

  Kannada Photos

  Go to : More Photos
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X
  X