twitter
    For Quick Alerts
    ALLOW NOTIFICATIONS  
    For Daily Alerts

    ಸೆಂಚುರಿ ಸ್ಟಾರ್ ಶಿವರಾಜ್ ಕುಮಾರ್ ಕೊಲ್ಲುವುದಾಗಿ ಬೆದರಿಕೆ ಪತ್ರ

    |

    ಕನ್ನಡದ ಖ್ಯಾತ ನಟ ಶಿವರಾಜ್ ಕುಮಾರ್ ಅವರನ್ನು ಕೊಲ್ಲುವುದಾಗಿ ಬೆದರಿಕೆ ಪತ್ರವೊಂದು ಬಂದಿದೆ. ಈ ವಿಷಯವನ್ನು ಸಾಹಿತಿ, ಮಾಜಿ ಸಚಿವೆ ಬಿ.ಟಿ.ಲಲಿತಾ ನಾಯಕ್ ಕಾರ್ಯಕ್ರಮವೊಂದರಲ್ಲಿ ಬಹಿರಂಗಗೊಳಿಸಿದ್ದಾರೆ.

    ಮಾಜಿ ಸಚಿವ ಎಚ್‌.ಎಂ. ರೇವಣ್ಣ ಅವರಿಗೆ ನಲವತ್ತು ವರ್ಷ ತುಂಬಿದ ಹಿನ್ನೆಲೆಯಲ್ಲಿ ಆಯೋಜಿಸಿದ್ದ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದ ಸಾಹಿತಿ ಲಲಿತಾ ನಾಯಕ್ ಶಿವರಾಜ್ ಕುಮಾರ್ ಅವರನ್ನು ಕೊಲ್ಲುವುದಾಗಿ ಬೆದರಿಕೆ ಪತ್ರ ಬಂದಿರುವುದಾಗಿ ಹೇಳಿದ್ದಾರೆ.

    ಡಿಕೆ ಶಿವಕುಮಾರ್ ಭೇಟಿ ಮಾಡಿದ ಶಿವಣ್ಣ: ಕಾಂಗ್ರೆಸ್ ಪಕ್ಷಕ್ಕೆ ಗೀತಾ ಸೇರ್ಪಡೆ?ಡಿಕೆ ಶಿವಕುಮಾರ್ ಭೇಟಿ ಮಾಡಿದ ಶಿವಣ್ಣ: ಕಾಂಗ್ರೆಸ್ ಪಕ್ಷಕ್ಕೆ ಗೀತಾ ಸೇರ್ಪಡೆ?

    ''ಮೇ. 1 ರಂದು ನನ್ನನ್ನು ಕೊಲೆ ಮಾಡುತ್ತಾರಂತೆ. ಈ ಕುರಿತ ಪತ್ರ ನನಗೆ ಬಂದಿದೆ. ಬಿಜೆಪಿ ಶಾಸಕ ಸಿ.ಟಿ. ರವಿ, ಸಂಪಾದಕ ರಂಗನಾಥ್(ಪಬ್ಲಿಕ್ ಟಿವಿ), ನಟ ಶಿವರಾಜ್ ಕುಮಾರ್ ಅವರನ್ನು ಕೊಲೆ ಮಾಡುತ್ತಾರಂತೆ. ಈ ಕುರಿತು ಪೊಲೀಸರಿಗೆ ಮಾಹಿತಿ ನೀಡಿದ್ದೇನೆ, ಪೊಲೀಸರು ಈ ಬಗ್ಗೆ ಪರಿಶೀಲನೆ ಮಾಡುತ್ತಿದ್ದಾರೆ'' ಎಂದು ಹೇಳಿದ್ದಾರೆ ಲಲಿತಾ ನಾಯಕ್.

     Life Threatening Letter To Actor Shiva Rajkumar

    ನಟ ಶಿವರಾಜ್ ಕುಮಾರ್ ಹಾಗೂ ರಾಜ್ಯದ ಇನ್ನಿತರೆ ಗಣ್ಯರನ್ನು ಕೊಲೆ ಮಾಡುವ ಯೋಚನೆ ಹೊಂದಿರುವುದರ ಉದ್ದೇಶ ಏನು? ಪತ್ರ ಬರೆದವರು ಯಾರು? ಎಂಬುದು ಸ್ಪಷ್ಟವಾಗಿಲ್ಲ.

    ಮುಂದುವರೆದು ಕಾರ್ಯಕ್ರಮದಲ್ಲಿ ಮಾತನಾಡಿದ ಬಿಟಿ.ಲಲಿತಾ ನಾಯಕ್, 'ಈ ಬೆದರಿಕೆಗಳಿಗೆ ನಾನು ಹೆದರುವಳು ಅಲ್ಲ. ಸಿ.ಟಿ. ರವಿಯನ್ನು ಕೊಲೆ ಮಾಡಿದರೆ ನಾನು ಉಳಿಯುತ್ತೇನೆ. ನನ್ನ ಕೊಲೆ ಮಾಡಿದರೆ ಸಿಟಿ ರವಿ ಉಳಿಯುತ್ತಾರೆ. ಇಂತಹ ಸಂದಿಗ್ಧ ಪರಿಸ್ಥಿತಿ ಎದುರಾಗಿದೆ. ಕೊಲೆ ಮಾಡುವರು ಎಲ್ಲಿದ್ದರೂ ಕೊಲೆ ಮಾಡುತ್ತಾರೆ. ಹಾಗಾಗಿ ನಾನು ಹೆದರಿಕೆಯಿಲ್ಲದೇ ಅಭಿನಂದನಾ ಸಮಾರಂಭದಲ್ಲಿ ಪಾಲ್ಗೊಂಡಿದ್ದೇನೆ'' ಎಂದು ಲಲಿತಾ ನಾಯಕ್ ತಿಳಿಸಿದ್ದಾರೆ.

    ಶಿವರಾಜ್ ಕುಮಾರ್‌ಗೆ ನಂದಕಿಶೋರ್ ನಿರ್ದೇಶನ; ಎರಡು ಭಾಷೆಯಲ್ಲಿ ತಯಾರಾಗುತ್ತಿದೆ ಸಿನಿಮಾಶಿವರಾಜ್ ಕುಮಾರ್‌ಗೆ ನಂದಕಿಶೋರ್ ನಿರ್ದೇಶನ; ಎರಡು ಭಾಷೆಯಲ್ಲಿ ತಯಾರಾಗುತ್ತಿದೆ ಸಿನಿಮಾ

    Recommended Video

    ಯುವರತ್ನ ಟ್ರೈಲರ್ ನೋಡಿ ಫಿದಾ ಆದ್ರು ಅಧೀರ ಸಂಜಯ್ ದತ್ | Filmibeat Kannada

    ಬಿಟಿ.ಲಲಿತಾ ನಾಯಕ್ ಅವರಿಗೆ ಬಂದಿರುವ ಪತ್ರದಲ್ಲಿ ಮಾತ್ರವೇ ಶಿವರಾಜ್ ಕುಮಾರ್ ಹಾಗೂ ಇನ್ನಿತರ ಗಣ್ಯರನ್ನು ಕೊಲ್ಲುವ ಬೆದರಿಕೆ ಹಾಕಲಾಗಿದೆಯೇ ಅಥವಾ ಬಿಟಿ ಲಲಿತಾ ನಾಯಕ್ ಅಂತೆಯೇ ಇತರೆ ಗಣ್ಯರಿಗೂ ಈ ರೀತಿಯ ಪತ್ರಗಳು ಬಂದಿದೆಯೇ ತಿಳಿಯಬೇಕಿದೆ.

    English summary
    BT Lalitha Naik received life threat letter from unknown Persons. In that letter anonymous man also mentioned that he will kill actor Shiva Rajkumar.
    Sunday, March 21, 2021, 20:29
    IIFA

    Kannada Photos

    Go to : More Photos
    ತಾಜಾ ಸುದ್ದಿ ತಕ್ಷಣ ಪಡೆಯಿರಿ
    Enable
    x
    Notification Settings X
    Time Settings
    Done
    Clear Notification X
    Do you want to clear all the notifications from your inbox?
    Settings X
    X