Don't Miss!
- News
ಮಾನ್ವಿ: ಮಂಜೂರಾದ ಬಡವರ ಭೂಮಿಗೆ ಕಣ್ಣು ಹಾಕಿದ ಪ್ರಭಾವಿಗಳು, ಜನಾಕ್ರೋಶ
- Sports
LLC 2023: ಲೆಜೆಂಡ್ಸ್ ಲೀಗ್ನಲ್ಲಿ ಕೈಫ್, ಗೇಲ್, ಗಂಭೀರ್ ಸೇರಿದಂತೆ ಹಲವು ಸ್ಟಾರ್ಗಳು
- Lifestyle
ಆರೋಗ್ಯವಾಗಿರಬೇಕೆ? ಹಾಗಾದರೆ ನೀವು 3 ವಿಷಯಗಳಲ್ಲಿ ನಂಬಿಕೆ ಇಡಲೇಬೇಕು
- Finance
Jio 5G services: ಇಂದಿನಿಂದ ಮತ್ತೆ 34 ನಗರಗಳಲ್ಲಿ ಪ್ರಾರಂಭ- ಮಧ್ಯ ಕರ್ನಾಟಕದ ಯಾವ ನಗರಕ್ಕೆ ಕೊಡುಗೆ? ಮಾಹಿತಿ ಪಡೆಯಿರಿ
- Automobiles
ಪೆಟ್ರೋಲ್ ಬೆಲೆ ಏರಿಕೆ ಚಿಂತೆ ಬಿಡಿ: ರೂ.1 ಲಕ್ಷ ಇದ್ರೆ ಆಕ್ಟಿವಾವನ್ನು ಎಲೆಕ್ಟ್ರಿಕ್ ಸ್ಕೂಟರ್ ಆಗಿ ಪರಿವರ್ತಿಸಬ
- Technology
ಆಂಡ್ರಾಯ್ಡ್ ಬಳಕೆದಾರರಿಗಾಗಿ 'ಕಿಡ್ಸ್ ಮಿಸ್ಟರಿ ಬಾಕ್ಸ್' ಫೀಚರ್ಸ್ ಪರಿಚಯಿಸಿದ ನೆಟ್ಫ್ಲಿಕ್ಸ್!
- Education
KVS Recruitment 2022 : ಕೇಂದ್ರೀಯ ವಿದ್ಯಾಲಯ ಸಂಗತನ್ ದಲ್ಲಿ 13404 ಹುದ್ದೆಗಳ ನೇಮಕಾತಿ
- Travel
ಯಾವುದೇ ಚಿಂತೆ ಇಲ್ಲದೆ ಸುಖಕರ ಪ್ರಯಾಣ ಅನುಭವಿಸಲು ಇಲ್ಲಿದೆ ಸಲಹೆಗಳು
The Kashmir Files: 'ದಿ ಕಾಶ್ಮೀರ್ ಫೈಲ್ಸ್' ಸಿನಿಮಾ ಬಗ್ಗೆ ಸಿದ್ಧರಾಮಯ್ಯ ಮಾತು
ದೇಶದಲ್ಲಿ ಸಂಚಲನ ಮೂಡಿಸಿದ್ದ 'ದಿ ಕಾಶ್ಮೀರ್ ಫೈಲ್ಸ್' ಚಲನಚಿತ್ರವನ್ನು ಕನ್ನಡಕ್ಕೆ ಡಬ್ ಮಾಡುವ ವಿಚಾರವಾಗಿ ಮಾಜಿ ಸಿಎಂ ಸಿದ್ದರಾಮಯ್ಯ ಮಂಗಳೂರಿನಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ. ದಕ್ಷಿಣ ಕನ್ನಡ ಮತ್ತು ಉಡುಪಿಯಲ್ಲಿ ವಿವಿಧ ಕಾರ್ಯಕ್ರಮಗಳಿಗೆ ಭೇಟಿ ನೀಡುವ ಹಿನ್ನಲೆಯಲ್ಲಿ ಮಂಗಳೂರಿಗೆ ಆಗಮಿಸಿದ ಸಿದ್ಧರಾಮಯ್ಯ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ.
Recommended Video

'ದಿ ಕಾಶ್ಮೀರ್ ಫೈಲ್ಸ್' ಸಿನಿಮಾವನ್ನು ಕನ್ನಡಕ್ಕೆ ಡಬ್ಬಿಂಗ್ ಮಾಡಿ ತೋರಿಸ್ತಿವಿ ಅಂದ್ರೆ ಬೇಡ ಅನ್ನೋರು ಯಾರು? ಆದರೆ ಜನರಿಗೆ ಸತ್ಯ ಏನು ನಡೆದಿದೆ ಅನ್ನೋದನ್ನ ತೋರಿಸಬೇಕು. ಕಾಶ್ಮೀರದಲ್ಲಿ ಏನು ನಡೆದಿದೆ? ಯಾವುದು ಸತ್ಯ? ಅನ್ನೋದನ್ನ ತೋರಿಸಬೇಕು..ಕಾಶ್ಮೀರದಲ್ಲಿ ಭಯೋತ್ಪಾದಕರು ಏನ್ ಮಾಡಿದ್ರು? ಕಾಶ್ಮೀರಿ ಪಂಡಿತರು ಸೇರಿದಂತೆ ಬೇರೆ ಸಮುದಾಯದವರೊಂದಿಗೆ ಏನೆಲ್ಲಾ ಆಗಿದೆ ಅನ್ನೋದನ್ನು ತೋರಿಸ್ಬೇಕು ಅಂತಾ ಸಿದ್ದರಾಮಯ್ಯ ಹೇಳಿದ್ದಾರೆ.
ಹಾಗೇನೇ ಗುಜರಾತ್ ನಲ್ಲಿ ನಡೆದದ್ದು, ಲಖಿಂಪುರದಲ್ಲಿ ನಡೆದದ್ದು ತೋರಿಸಬೇಕು. 'ದಿ ಕಾಶ್ಮೀರ್ ಫೈಲ್' ಸಿನೆಮಾ ವನ್ನಯ ನಾನು ಇನ್ನೂ ನೋಡಿಲ್ಲ. ನಾನು ಸಿನಿಮಾ ನೋಡೋದೇ ಕಡಿಮೆ. ಸಿನೆಮಾ ನೋಡಲೇಬೇಕು ಅಂತ ಏನಿದೆ? ಬಹಳ ಸಿನಿಮಾಗಳನ್ನ ನಾನು ನೋಡಿಲ್ಲ. ಅದೇ ಪ್ರಕಾರ ಇದನ್ನೂ ನೋಡಲ್ಲ ಅಂತಾ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಇನ್ನು ಶಾಲೆಯಲ್ಲಿ ಭಗವದ್ಗೀತೆ ಭೋದನೆಯ ಕುರಿತಾಗಿ ಪ್ರತಿಕ್ರಿಯೆ ನೀಡಿದ ಸಿದ್ದರಾಮಯ್ಯ, ನಾನು ಭಗವದ್ಗೀತೆ ಗೆ ವಿರೋಧಿಯಲ್ಲ. ಮಕ್ಕಳಿಗೆ ನೈತಿಕ ವಿದ್ಯೆ ಕಲಿಸಲು ನಮ್ಮದೇನೂ ತಕರಾರಿಲ್ಲ. ನಾವು ಸಂವಿಧಾನ ಮತ್ತು ಸೆಕ್ಯುಲರಿಸಂ ನಲ್ಲಿ ನಂಬಿಕೆ ಇಟ್ಟವರು. ಮಕ್ಕಳಿಗೆ ಭಗವದ್ಗೀತೆ ಆದ್ರೂ ಹೇಳಿಕೊಡಲಿ, ಕುರಾನ್ ಆದ್ರು ಹೇಳಿಕೊಡಲಿ, ಬೈಬಲ್ ಆದ್ರು ಹೇಳಿ ಕೊಡಲಿ. ಆದ್ರೆ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಸಿಗಬೇಕು ಅಷ್ಟೆ.ಮಕ್ಕಳಿಗೆ ಮಾರ್ಕೆಟ್ ಗೆ ಅನುಗುಣವಾಗಿ ಕ್ವಾಲಿಟಿ ಎಜುಕೇಶನ್ ನೀಡಬೇಕು. ಭಗವದ್ಗೀತೆಯನ್ನು ಮನೆಗಳಲ್ಲಿ ಮಕ್ಕಳಿಗೆ ಹೇಳಿ ಕೊಡಲ್ವಾನಾನು ಕೂಡ ಹಿಂದೂ. ನನಗೂ ನನ್ನ ಮನೆಯಲ್ಲಿ ಭಗವದ್ಗೀತೆ ರಾಮಾಯಣ ಮಹಾಭಾರತ ಹೇಳಿಕೊಟ್ಟಿದ್ದಾರೆ ನೈತಿಕ ಶಿಕ್ಷಣ ಬೇಕು ಹಾಗಂತ ಸಂವಿಧಾನಕ್ಕೆ ವಿರುದ್ಧವಾಗಿ ನಡೆದುಕೊಳ್ಳಬಾರದು. ನಾನು ಭಗವದ್ಗೀತೆ, ಬೈಬಲ್, ಕುರಾನ್ ವಿರೋಧಿ ಅಲ್ಲ. ನಮ್ಮಲ್ಲಿ ಸಹಿಷ್ಣುತೆ ಮತ್ತು ಸಹಬಾಳ್ವೆ ಇರಬೇಕು ಅಂತಾ ಸಿದ್ದರಾಮಯ್ಯ ಹೇಳಿದ್ದಾರೆ.
The
Kashmir
Files:ವಿವಾದಾತ್ಮಕ
'ದಿ
ಕಾಶ್ಮೀರ್
ಫೈಲ್ಸ್'
ಸಿನಿಮಾದ
ನಿರ್ದೇಶಕ
ವಿವೇಶ್
ಅಗ್ನಿಹೋತ್ರಿ
ಹಿನ್ನೆಲೆಯೇನು?
ಇನ್ನು ಪಂಚರಾಜ್ಯ ಚುನಾವಣೆಯ ಬಳಿಕ ಕಾಂಗ್ರೆಸ್ ಸಾಫ್ಟ್ ಹಿಂದುತ್ವ ಪ್ರದರ್ಶಿಸುತ್ತಿದ್ಯಾ ಎಂಬ ಪತ್ರಕರ್ತ ರ ಪ್ರಶ್ನೆ ಗೆ ಉತ್ತರಿಸಿದ ಸಿದ್ದರಾಮಯ್ಯ. ನಮ್ಮಲ್ಲಿ ಸಾಫ್ಟ್ ಹಿಂದುತ್ವ ನೂ ಇಲ್ಲ. ಹಾರ್ಡ್ ಹಿಂದುತ್ವ ನೂ ಇಲ್ಲ.
ನಾವು ಹಿಂದೂ ಧರ್ಮದಲ್ಲಿ ನಂಬಿಕೆ ಇಟ್ಟವರು. ಎಲ್ಲಾ ಧರ್ಮಗಳಿಗೆ ಸಮಾನ ಗೌರವ ಸಂವಿಧಾನ ನೀಡಿದೆ. ಸಂವಿಧಾನದ ಪ್ರಕಾರ ನಾವು ನಡೆದುಕೊಳ್ಳುತ್ತೇವೆ ಅಂತಾ ಹೇಳಿದ್ದಾರೆ.
The
Kashmir
Files:
'ದಿ
ಕಾಶ್ಮೀರ್
ಫೈಲ್ಸ್'
ಸಿನಿಮಾ
ಪ್ರದರ್ಶನಕ್ಕೆ
ಅಡಚಣೆ,
ಚಿತ್ರಮಂದಿರದಲ್ಲಿ
ಗಲಾಟೆ
ಹೈ ಕೋರ್ಟ್ ಹಿಜಾಬ್ ತೀರ್ಪು ವಿರೋಧಿಸಿ ಮುಸ್ಲಿಂ ಸಮುದಾಯದವರು ಅಂಗಡಿ ಮುಂಗಟ್ಟು ಬಂದ್ ಮಾಡಿ ಪ್ರತಿಭಟನೆ ಮಾಡಿದ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಸಿದ್ಧರಾಮಯ್ಯ, ಅಸಮಾಧಾನ ಇರೋರು ಬಂದ್ ಮಾಡಿದ್ದಾರೆ, ಕೋರ್ಟ್ ನಿರ್ಧಾರ ವಿರೋಧಿಸಬಾರದು. ಹೈಕೋರ್ಟ್, ಸುಪ್ರೀಂಕೋರ್ಟ್ ಯಾವುದರ ನಿರ್ಧಾರವನ್ನೂ ವಿರೋಧ ಮಾಡಬಾರದು.ಯಾವ ಧರ್ಮದವರೂ ಕೋಮುವಾದ ಮಾಡಬಾರದು. ಹಿಂದೂ, ಮುಸ್ಲಿಂ ಯಾರೇ ಆದರೂ ಕೋಮುವಾದ ಮಾಡಬಾರದು. ಎಲ್ಲಾ ಧರ್ಮಗಳನ್ನ ಸಮಾನವಾಗಿ ಕಾಣುವ ಕೆಲಸ ಆಗಲಿ ಅಂತಾ ಹೇಳಿದ್ದಾರೆ.