Don't Miss!
- News
Assembly election 2023: ಇನ್ನೊಂದು ವಾರದಲ್ಲಿ ಜೆಡಿಎಸ್ ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆ: ಎಚ್.ಡಿ.ಕೆ
- Automobiles
ಹೋಂಡಾ ಆಕ್ಟೀವಾ 6Gಗೆ ಸೆಡ್ಡು ಹೊಡೆಯಲು ಮಾರುಕಟ್ಟೆಗಿಳಿದ ಹೀರೋ Xoom... ಏನಿದರ ವಿಶೇಷತೆ!
- Finance
Economic Survey 2022-23: ಆರ್ಥಿಕ ಸಮೀಕ್ಷೆಯ ಪ್ರಮುಖಾಂಶ ಇಲ್ಲಿದೆ
- Technology
ಜಿಯೋ ಟ್ರೂ 5G ಸೇವೆ ಈಗ ಚಿತ್ರದುರ್ಗದಲ್ಲಿಯೂ ಲಭ್ಯ!..5G ರೀಚಾರ್ಜ್ ಬೆಲೆ ಎಷ್ಟು?
- Sports
WIPL 2023: ಮಹಿಳಾ ಐಪಿಎಲ್ನಲ್ಲಿ ಗುಜರಾತ್ ಜೈಂಟ್ಸ್ ತಂಡದ ಮೆಂಟರ್ ಆಗಿ ಮಿಥಾಲಿ ರಾಜ್ ನೇಮಕ
- Lifestyle
ಥೈರಾಯ್ಡ್ ನಿಯಂತ್ರಣಕ್ಕೆ ಕೊತ್ತಂಬರಿ ಹೇಗೆ ಸಹಕಾರಿ ನೋಡಿ
- Education
KVS Recruitment 2022 : ಕೇಂದ್ರೀಯ ವಿದ್ಯಾಲಯ ಸಂಗತನ್ ದಲ್ಲಿ 13404 ಹುದ್ದೆಗಳ ನೇಮಕಾತಿ
- Travel
ಯಾವುದೇ ಚಿಂತೆ ಇಲ್ಲದೆ ಸುಖಕರ ಪ್ರಯಾಣ ಅನುಭವಿಸಲು ಇಲ್ಲಿದೆ ಸಲಹೆಗಳು
2022ರಲ್ಲಿ ಚಿನ್ನದ ಬೆಳೆ ಬೆಳೆದ ಸ್ಯಾಂಡಲ್ ವುಡ್: ಅತಿಹೆಚ್ಚು ಕಲೆಕ್ಷನ್ ಮಾಡಿದ ಟಾಪ್ 5 ಚಿತ್ರಗಳಾವುವು?
2022ರಲ್ಲಿ ಕನ್ನಡ ಚಿತ್ರರಂಗ ಮಾತ್ರವಲ್ಲದೇ ಭಾರತದ ಬಹುತೇಕ ಎಲ್ಲಾ ಚಿತ್ರರಂಗಗಳೂ ಸಹ ಚಿನ್ನದ ಬೆಳೆ ಬೆಳೆದಿವೆ ಎಂದೇ ಹೇಳಬಹುದು. ಕಳೆದ ಎರಡು ವರ್ಷಗಳಲ್ಲಿ ಕೊರೊನಾ ವೈರಸ್ ಕಾಟದಿಂದಾಗಿ ಲಾಕ್ ಡೌನ್ ಸಮಸ್ಯೆ ಎದುರಿಸಿದ್ದ ಚಿತ್ರರಂಗಗಳು ನಷ್ಟ ಅನುಭವಿಸಿದ್ದರು. ಚಿತ್ರಗಳು ಬಿಡುಗಡೆಯಾಗದ ಕಾರಣ ಹಾಗೂ ಜನರು ಹೆದರಿ ಚಿತ್ರಮಂದಿರಗಳಿಗೆ ಬಾರದ ಕಾರಣ ಹಲವಾರು ಚಿತ್ರಮಂದಿರಗಳಿಗೆ ಬೀಗ ಬಿದ್ದಿತ್ತು.
ಹೀಗೆ ಎರಡು ವರ್ಷಗಳಲ್ಲಿ ಸಾಕಷ್ಟು ನೋವುಂಡಿದ್ದ ಸಿನಿಮಾ ಕ್ಷೇತ್ರ ಈ ವರ್ಷ ಫೀನಿಕ್ಸ್ ರೀತಿ ಎದ್ದು ನಿಂತಿದೆ. ಭಾರತದ ಬಹುತೇಕ ಎಲ್ಲಾ ಪ್ರಮುಖ ಚಿತ್ರರಂಗಗಳೂ ಸಹ ನೂರು ಕೋಟಿ ಕಲೆಕ್ಷನ್ ಮಾಡಿದ ಚಿತ್ರಗಳನ್ನು ನೀಡುವಲ್ಲಿ ಯಶಸ್ವಿಯಾಗಿವೆ. ಇನ್ನು ಎಲ್ಲಾ ಚಿತ್ರರಂಗಗಳ ಚಿತ್ರಗಳೂ ಸೇರಿದಂತೆ ಒಟ್ಟು 30 ಸಿನಿಮಾಗಳು ನೂರು ಕೋಟಿ ಕ್ಲಬ್ ಸೇರುವಲ್ಲಿ ಯಶಸ್ವಿಯಾಗಿವೆ.
ಕನ್ನಡದ ಕೆಜಿಎಫ್ ಚಾಪ್ಟರ್ 2 ಹಾಗೂ ಕಾಂತಾತ, ತೆಲುಗಿನ ಆರ್ ಆರ್ ಆರ್, ತಮಿಳಿನ ವಿಕ್ರಮ್ ಹಾಗೂ ಪೊನ್ನಿಯಿನ್ ಸೆಲ್ವನ್ 1, ಮಲಯಾಳಂನ ಭೀಷ್ಮ ಪರ್ವಮ್ ಮತ್ತು ಹಿಂದಿಯ ಬ್ರಹ್ಮಾಸ್ತ್ರ ಹಾಗೂ ದೃಶ್ಯಂ 2 ಚಿತ್ರಗಳು ಭರ್ಜರಿ ಗಳಿಕೆ ಮಾಡಿದವು. ಹೀಗೆ ಗೋಲ್ಡನ್ ಇಯರ್ ಎನಿಸಿಕೊಂಡಿರುವ 2022ರಲ್ಲಿ ಅತಿಹೆಚ್ಚು ಗಳಿಸಿದ ಕನ್ನಡದ ಟಾಪ್ 5 ಚಿತ್ರಗಳು ಯಾವುವು ಎಂಬ ಮಾಹಿತಿ ಕೆಳಕಂಡಂತಿದೆ.

1. ಕೆಜಿಎಫ್ ಚಾಪ್ಟರ್ 2
ಈ ವರ್ಷ ಏಪ್ರಿಲ್ 14ರಂದು ತೆರೆಕಂಡಿದ್ದ ಯಶ್ ಹಾಗೂ ಪ್ರಶಾಂತ್ ನೀಲ್ ಕಾಂಬಿನೇಷನ್ ಚಿತ್ರ ಕೆಜಿಎಫ್ ಚಾಪ್ಟರ್ 2 ಈ ವರ್ಷ ಅತಿಹೆಚ್ಚು ಗಳಿಸಿದ ಕನ್ನಡ ಚಿತ್ರ ಎನಿಸಿಕೊಂಡಿದೆ. ವಿಶ್ವದಾದ್ಯಂತ 1250 ಕೋಟಿ ಗಳಿಸಿದ ಕೆಜಿಎಫ್ ಚಾಪ್ಟರ್ 2 ಕೇವಲ ಕನ್ನಡದಲ್ಲಿ ಮಾತ್ರವಲ್ಲದೇ ಈ ವರ್ಷ ಭಾರತದಲ್ಲಿ ಅತಿಹೆಚ್ಚು ಗಳಿಸಿದ ಚಿತ್ರ ಎಂಬ ದಾಖಲೆಯನ್ನೂ ಸಹ ಬರೆದಿದೆ.

2. ಕಾಂತಾರ
ಕೆಜಿಎಫ್ ಚಾಪ್ಟರ್ 2 ಮೂಲಕ ಬಾಕ್ಸ್ ಆಫೀಸ್ ಕೊಳ್ಳ ಹೊಡೆದಿದ್ದ ಹೊಂಬಾಳೆ ಫಿಲ್ಮ್ಸ್ ನಿರ್ಮಾಣದ ಮತ್ತೊಂದು ಚಿತ್ರ ಈ ವರ್ಷ ಬೃಹತ್ ಗೆಲುವು ಕಂಡಿದೆ. ರಿಷಬ್ ಶೆಟ್ಟಿ ನಿರ್ದೇಶನದ ಕಾಂತಾರ ಚಿತ್ರ ಬಾಕ್ಸ್ ಆಫೀಸ್‌ನಲ್ಲಿ ಬರೋಬ್ಬರಿ 404 ಕೋಟಿ ಗಳಿಕೆ ಮಾಡಿದೆ. ಈ ಮೂಲಕ ಈ ವರ್ಷ ಅತಿಹೆಚ್ಚು ಗಳಿಸಿದ ಸ್ಯಾಂಡಲ್‌ವುಡ್ ಚಿತ್ರಗಳ ಪೈಕಿ ಎರಡನೇ ಸ್ಥಾನವನ್ನು ಅಲಂಕರಿಸಿದೆ.

3. ವಿಕ್ರಾಂತ್ ರೋಣ
ಅನುಪ್ ಭಂಡಾರಿ ಹಾಗೂ ಕಿಚ್ಚ ಸುದೀಪ್ ಕಾಂಬಿನೇಶನ್‌ನ ಬಹು ನಿರೀಕ್ಷೆಯನ್ನು ಹುಟ್ಟುಹಾಕಿದ್ದ ಚಿತ್ರ ವಿಕ್ರಾಂತ್ ರೋಣ ಈ ವರ್ಷ ಅತಿಹೆಚ್ಚು ಕಲೆಕ್ಷನ್ ಮಾಡಿದ ಕನ್ನಡದ ಮೂರನೇ ಚಿತ್ರ ಎನಿಸಿಕೊಂಡಿದೆ. ಈ ಚಿತ್ರ ಬಾಕ್ಸ್ ಆಫೀಸ್‌ನಲ್ಲಿ ಒಟ್ಟಾರೆ 184 ಕೋಟಿ ರೂಪಾಯಿ ಗ್ರಾಸ್ ಕಲೆಕ್ಷನ್ ಮಾಡಿದೆ.

4. ಜೇಮ್ಸ್
ನಟ ಪುನೀತ್ ರಾಜ್‌ಕುಮಾರ್ ನಿಧನದ ನಂತರ ಬಿಡುಗಡೆಗೊಂಡ ಅಪ್ಪು ನಟನೆಯ ಮೊದಲ ಚಿತ್ರ ಜೇಮ್ಸ್ ಬಾಕ್ಸ್ ಆಫೀಸ್ ಕೊಳ್ಳೆ ಹೊಡೆದಿತ್ತು. ಪುನೀತ್ ಹುಟ್ಟುಹಬ್ಬದ ಅಂಗವಾಗಿ ಬಿಡುಗಡೆಗೊಂಡಿದ್ದ ಈ ಚಿತ್ರ 150 ಕೋಟಿ ಗಳಿಸಿ ಈ ವರ್ಷ ಅತಿಹೆಚ್ಚು ಕಲೆಕ್ಷನ್ ಮಾಡಿದ ಕನ್ನಡದ ನಾಲ್ಕನೇ ಚಿತ್ರ ಎನಿಸಿಕೊಂಡಿದೆ.

5. 777 ಚಾರ್ಲಿ
777 ಚಾರ್ಲಿ ಈ ವರ್ಷ ಬಿಡುಗಡೆಗೊಂಡ ವಿಭಿನ್ನ ಕಥಾಹಂದರ ಹೊಂದಿದ್ದ ಚಿತ್ರ. ಶ್ವಾನ ಪ್ರೇಮಿಗಳ ಮನಗೆದ್ದಿದ್ದ ಈ ಚಿತ್ರ ಬಾಕ್ಸ್ ಆಫೀಸ್‌ನಲ್ಲಿ ಕೂಡ ಸಿಕ್ಕಾಪಟ್ಟೆ ಸದ್ದು ಮಾಡಿತ್ತು. ಗಲ್ಲಾಪೆಟ್ಟಿಗೆಯಲ್ಲಿ ವಿಶ್ವದಾದ್ಯಂತ 105 ಕೋಟಿ ರೂಪಾಯಿ ಗ್ರಾಸ್ ಕಲೆಕ್ಷನ್ ಮಾಡಿದ 777 ಚಾರ್ಲಿ ಈ ವರ್ಷ ಅತಿಹೆಚ್ಚು ಗಳಿಸಿದ ಕನ್ನಡ ಚಿತ್ರಗಳ ಪಟ್ಟಿಯಲ್ಲಿ ಐದನೇ ಸ್ಥಾನ ಪಡೆದುಕೊಂಡಿದೆ.