For Quick Alerts
  ALLOW NOTIFICATIONS  
  For Daily Alerts

  ಕಾಂಗ್ರೆಸ್ ರೋಡ್ ಶೋನಲ್ಲಿ ಯಡಿಯೂರಪ್ಪ ವಿರುದ್ಧ ಗುಡುಗಿದ ನಟ ಯೋಗೇಶ್

  By Bharath Kumar
  |

  Recommended Video

  ಯಡಿಯೂರಪ್ಪನ ಬಗ್ಗೆ ಹೀಗ್ಯಾಕೆ ಮಾತಾಡಿದ್ರು ಯೋಗಿ ? | Oneindia Kannada

  ಚುನಾವಣೆ ಕಣ ರಂಗೇರುತ್ತಿದ್ದಂತೆ ಸಿನಿತಾರೆಯರು ರಾಜಕೀಯ ಪಕ್ಷಗಳ ಪರವಾಗಿ ಪ್ರಚಾರ ಆರಂಭಿಸಿದ್ದಾರೆ. ಇತ್ತೀಚಿಗಷ್ಟೆ ನಟ ಲೂಸ್ ಮಾದ ಯೋಗೇಶ್ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ ಮಾಡಿದ್ದು, ಬಿಜೆಪಿ ವಿರುದ್ಧ ಗುಡುಗಿದ್ದಾರೆ.

  ಬೆಂಗಳೂರು ದಕ್ಷಿಣ ವಿಧಾನಸಭೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಆರ್.ಕೆ.ರಮೇಶ್ ಅವರ ಜೊತೆ ಪರಪ್ಪನ ಅಗ್ರಹಾರದ ರೋಡ್ ಶೋನಲ್ಲಿ ಭಾಗವಹಿಸಿದ್ದ ಲೂಸ್ ಮಾದ, ''ಕಾಂಗ್ರೆಸ್ ಗೆ ನಿಮ್ಮ ಮತ ನೀಡಿ, ಕಾಂಗ್ರೆಸ್ ಸರ್ಕಾರವನ್ನ ಮತ್ತೆ ಅಧಿಕಾರಕ್ಕೆ ತನ್ನಿ, ಕಾಂಗ್ರೆಸ್ ಅಭ್ಯರ್ಥಿ ಆರ್.ಕೆ.ರಮೇಶ್ ಅವರನ್ನ ಗೆಲ್ಲಿಸಿ'' ಎಂದು ಮತದಾರರಲ್ಲಿ ಮನವಿ ಮಾಡಿಕೊಂಡರು.

  ಇದೇ ಸಂದರ್ಭದಲ್ಲಿ ಬಿಜೆಪಿಯವರ ಬಗ್ಗೆ ಟೀಕೆ ಮಾಡಿದ ಯೋಗೇಶ್ ''ಬಿಜೆಪಿ ಸರ್ಕಾರದವರು ಯಾವತ್ತೂ ಅಚ್ಛೇ ದಿನ್ ಅಚ್ಛೇ ದಿನ್ ಅಂತ ಹೇಳ್ತಾನೆ ಇದ್ದಾರೆ. ಅಚ್ಛೇ ದಿನ್ ಯಾರಿಗೂ ಬಂದಿಲ್ಲ. ಅದು ಏನು ಅನ್ನೋದು ಅರ್ಥನೂ ಆಗಿಲ್ಲ ನಮಗೆ. ಎಲ್ಲರೂ ಕಾಂಗ್ರೆಸ್ ಗೆ ಸಪೋರ್ಟ್ ಮಾಡಿ. ನಾನು ಇರೋವರೆಗೂ ಕಾಂಗ್ರೆಸ್ ಗೇ ಸಪೋರ್ಟ್ ಮಾಡೋದು. ನೀವೂ ಕೂಡ ಕಾಂಗ್ರೆಸ್ ಗೆ ಬೆಂಬಲ ಕೊಡಿ'' ಎಂದು ಮನವಿ ಮಾಡಿದ್ದಾರೆ.

  ಲೂಸ್ ಮಾದ ಯೋಗಿ ಸ್ಟೈಲ್: ಈ ಸಲಾ ಕಪ್ ನಮ್ದೆಲೂಸ್ ಮಾದ ಯೋಗಿ ಸ್ಟೈಲ್: ಈ ಸಲಾ ಕಪ್ ನಮ್ದೆ

  ಇನ್ನು ಮಾಜಿ ಮುಖ್ಯಮಂತ್ರಿ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ ಅವರ ಬಗ್ಗೆ ಪರೋಕ್ಷವಾಗಿ ವಾಗ್ದಾಳಿ ನಡೆಸಿದ ಲೂಸ್ ಮಾದ ''ಜೈಲಿನಲ್ಲಿದ್ದವರನ್ನು ಇಂದು ಅಭ್ಯರ್ಥಿಯನ್ನಾಗಿ ಮಾಡಿದ್ದಾರೆ. ಅವರೊಬ್ಬರು ಮುಖ್ಯಮಂತ್ರಿ ಅಭ್ಯರ್ಥಿಯಂತೆ. ಕಳ್ಳರಿಗೆಲ್ಲ ನೀವು ಮತ ಹಾಕಬೇಡಿ'' ಎಂದು ಟೀಕಿಸಿದರು.

  ''ಬಿಜೆಪಿಯವರು ಯಾವ ಕೆಲಸನೂ ಮಾಡಿಕೊಟ್ಟಿಲ್ಲ. ನಿಮ್ಮಲ್ಲರನ್ನೂ ಮೆಚ್ಚಿಸಬೇಕು ಅಂತ ನಾನು ಇದನ್ನು ಹೇಳುತ್ತಿಲ್ಲ. ನನ್ನ ಸ್ವಂತ ಅನುಭವ ಇದು. ಹೀಗಾಗಿ ನಾನು ನೋಡಿರೋ ವಿಚಾರವನ್ನು ನಿಮಗೆ ಹೇಳಬೇಕು. ಅವರು ಯಾವ ಕೆಲಸನೂ ಮಾಡಲ್ಲ'' ಎಂದು ಕ್ಷೇತ್ರ ಜನರಲ್ಲಿ ಕೇಳಿಕೊಂಡರು. ಈ ವೇಳೆ ರೋಡ್ ಶೋನಲ್ಲಿ ಗೃಹ ಸಚಿವ ರಾಮಲಿಂಗಾರೆಡ್ಡಿ, ಅಭ್ಯರ್ಥಿ ಆರ್.ಕೆ.ರಮೇಶ್ ಇದ್ದರು.

  English summary
  Sandalwood Actor loose mada yogesh has campaign for bangalore south congress mla candidate rk ramesh on Parappana Agrahara.
  Tuesday, May 1, 2018, 17:49
  IIFA

  Kannada Photos

  Go to : More Photos
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X
  X