'ಮೂರನೇ ಕೃಷ್ಣಪ್ಪ'ನಿಗೆ ಧ್ವನಿ ಕೊಟ್ಟ ಲೂಸ್ ಮಾದ ಯೋಗಿ: ವಿಶಿಷ್ಟ ಸಿನಿಮಾಗೆ 'ಸಿಂದ್ಲಿಂಗು' ಸಾಥ್

By ಫಿಲ್ಮಿಬೀಟ್ ಡೆಸ್ಕ್

ಸ್ಯಾಂಡಲ್‌ವುಡ್‌ ಸಂಕಷ್ಟದಲ್ಲಿ ಇದ್ದರೂ, ಸ್ಮಾಲ್ ಬಜೆಟ್ ಸಿನಿಮಾಗಳು ಮರಳಿ ಯತ್ನವನ್ನು ಮಾಡುತ್ತಲೇ ಇವೆ. ಸೂಪರ್‌ಸ್ಟಾರ್‌ಗಳು ಪ್ಯಾನ್ ಇಂಡಿಯಾ ಗುಂಗಿನಲ್ಲಿ ಇರುವುದರಿಂದ ಕನ್ನಡದ ಸಿನಿಪ್ರಿಯರಿಗೆ ಕಳೆದ ಒಂದೂವರೆ ವರ್ಷದಿಂದ ನಿರಾಸೆಗಳ ಮೇಲೆ ನಿರಾಸೆ ಮೂಡುತ್ತಲೇ ಇತ್ತು. ಅದೇ ಇನ್ನೊಂದು ಕಡೆ ಸ್ಮಾಲ್ ಬಜೆಟ್ ಸಿನಿಮಾ ಮೇಕರ್ಸ್ ಥಿಯೇಟರ್‌ಗೆ ಜನರನ್ನು ಕರೆ ತರುವುದಕ್ಕೆ ಮರಳಿ ಯತ್ನವನ್ನು ಮಾಡುತ್ತಲೇ ಇದ್ದಾರೆ.

ಇಂತಹ ಸಿನಿಮಾ ಸ್ಮಾಲ್ ಬಜೆಟ್ ಸಿನಿಮಾಗಳಲ್ಲಿ 'ಮೂರನೇ ಕೃಷ್ಣಪ್ಪ' ಕೂಡ ಒಂದು. ಈಗಾಗಲೇ ವಿಭಿನ್ನ ಪಾತ್ರಗಳ ಮೂಲಕ ಗಮನ ಸೆಳೆದಿರೋ ಸಂಪತ್ ಮೈತ್ರೇಯಾ 'ಮೂರನೇ ಕೃಷ್ಣಪ್ಪ' ಸಿನಿಮಾ ಮೂಲಕ ನಾಯಕನಾಗಿ ನಟಿಸುತ್ತಿದ್ದಾರೆ. ಈ ಹಿಂದೆ ಹಲವು ಸಿನಿಮಾಗಳಲ್ಲಿ ಪೋಷಕ ಪಾತ್ರ ಹಾಗೂ ಖಳನಾಯಕನಾಗಿ ನಟಿಸಿ ಜನಮೆಚ್ಚಿಗೆ ಗಳಿಸಿದ್ದರು.

Loose Mada Yogi gave voice for New Kannada movie Moorane Krishnappa Trailer

ಈಗ 'ಮೂರನೇ ಕೃಷ್ಣಪ್ಪ' ಬಳಿಕ ಖಳನಾಯಕನಾಗಿ ಅದೃಷ್ಟ ಪರೀಕ್ಷೆಗೆ ಇಳಿದಿದ್ದಾರೆ. ಈಗಾಗಲೇ ಈ ಸಿನಿಮಾದ ಹಾಡುಗಳು ಬಿಡುಗಡೆಯಾಗಿ ನಿರೀಕ್ಷೆ ಮೂಡಿಸಿವೆ. ಈ ಬೆನ್ನಲ್ಲೇ ಟ್ರೈಲರ್ ರಿಲೀಸ್ ಮಾಡುವುದಕ್ಕೆ ಚಿತ್ರತಂಡ ಮುಂದಾಗಿದೆ. ಈ ಟ್ರೈಲರ್‌ಗೆ ಸ್ಯಾಂಡಲ್‌ವುಡ್‌ನ ಲೂಸ್ ಮಾದ ಯೋಗಿ ಧ್ವನಿ ನೀಡಿದ್ದಾರೆ.

ಅಂದ್ಹಾಗೆ 'ಮೂರನೇ ಕೃಷ್ಣಪ್ಪ' ಸಿನಿಮಾವನ್ನು ನವೀನ್ ರೆಡ್ಡಿ ನಿರ್ದೇಶನ ಮಾಡಿದ್ದಾರೆ. ಈಗಾಗಲೇ 'ಅಕಿರಾ', 'ರಿಲ್ಯಾಕ್ಸ್ ಸತ್ಯ' ಅಂತಹ ಸಿನಿಮಾಗಳನ್ನು ನಿರ್ದೇಶನ ಮಾಡಿದ್ದಾರೆ. ಈ ಎರಡು ಸಿನಿಮಾಗಳು ತಕ್ಕ ಮಟ್ಟಿಗೆ ಸಿನಿಪ್ರಿಯರ ಗಮನ ಸೆಳೆದಿದ್ದವು. ಇದೀಗ ವಿಭಿನ್ನ ಶೀರ್ಷಿಕೆಯೊಂದಿಗೆ ಪ್ರೇಕ್ಷಕರನ್ನು ರಂಜಿಸುವುದಕ್ಕೆ ಮುಂದಾಗಿದ್ದಾರೆ. ಹೀಗಾಗಿ 'ಮೂರನೇ ಕೃಷ್ಣಪ್ಪ' ಟ್ರೈಲರ್ ಸಿನಿಪ್ರಿಯರಿಗೆ ಕಿಕ್ ಕೊಡಬಹುದು.

Loose Mada Yogi gave voice for New Kannada movie Moorane Krishnappa Trailer

ರೆಡ್ ಡ್ರ್ಯಾಗನ್ ಫಿಲಂಸ್ ಈ ಸಿನಿಮಾವನ್ನು ನಿರ್ಮಾಣ ಮಾಡುತ್ತಿದೆ. 'ಮೂರನೇ ಕೃಷ್ಣಪ್ಪ' ಸಿನಿಮಾಗೆ ಮೋಹನ್ ರೆಡ್ಡಿ ಜಿ, ರವಿಶಂಕರ್ ಹಣ ಹೂಡಿದ್ದಾರೆ. ಆನೇಕಲ್ ಭಾಗದ ಭಾಷೆಯ ಸೊಬಗನ್ನು ಇಟ್ಟುಕೊಂಡು ಈ ಸಿನಿಮಾದ ಕಥೆಯನ್ನು ಹೆಣೆಯಲಾಗಿದೆ. ಸಂಪತ್ ಮೈತ್ರೀಯಾ ನಾಯಕನಾಗಿ ನಟಿಸುತ್ತಿದ್ದರೆ, ಪ್ರಮುಖ ಪಾತ್ರದಲ್ಲಿ ರಂಗಾಯಣ ರಘು ಕಾಣಿಸಿಕೊಂಡಿದ್ದಾರೆ. ಶ್ರೀಪ್ರಿಯಾ ನಾಯಕಿಯಾಗಿದ್ದಾರೆ.

ಇವರೊಂದಿಗೆ ತುಕಾಲಿ ಸಂತೋಷ್, ಉಗ್ರಂ ಮಂಜು ಸೇರಿದಂತೆ ಹಲವರು ನಟಿಸಿದ್ದಾರೆ. 'ಮೂರನೇ ಕೃಷ್ಣಪ್ಪ' ಸಿನಿಮಾಕ್ಕೆ ಆನಂದ್ ರಾಜವಿಕ್ರಮ್ ಸಂಗೀತ ನೀಡಿದ್ದು, ಶ್ರೀಕಾಂತ್ ಎಡಿಟಿಂಗ್ ಮಾಡಿದ್ದರೆ, ಯೋಗಿ ಕ್ಯಾಮರಾ ಹ್ಯಾಂಡಲ್ ಮಾಡಿದ್ದಾರೆ.

ಸದ್ಯ ಕನ್ನಡ ಸಿನಿಮಾಗಳಿಗೆ ಹೊಸ ಬಗೆಯ ಸಿನಿಮಾಗಳು ಸಿಗುತ್ತಿವೆ. ಪ್ಯಾನ್ ಇಂಡಿಯಾ ಸಿನಿಮಾಗಳಿಗೆ ಕಾದು ಕೂತರೆ, ಕನ್ನಡ ಚಿತ್ರರಂಗ ಪಾತಾಳಕ್ಕೆ ಹೋಗುವುದು ಗ್ಯಾರಂಟಿ. ಸ್ಟಾರ್ ನಟರ ಪ್ಯಾನ್ ಇಂಡಿಯಾ ಸಿನಿಮಾಗಳು ರಿಲೀಸ್ ಆಗುವವರೆಗೂ ಒಳ್ಳೆಯ ಕಂಟೆಂಟ್ ಇರುವ ಸ್ಮಾಲ್ ಬಜೆಟ್ ಸಿನಿಮಾಗಳನ್ನು ಥಿಯೇಟರ್‌ಗೆ ಬಂದು ನೋಡುವ ಅಗತ್ಯವಿದೆ.

More from Filmibeat

English summary
Loose Mada Yogi gave voice for New Kannada movie Moorane Krishnappa Trailer
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X