Don't Miss!
- Sports
ಬಾರ್ಡರ್-ಗವಾಸ್ಕರ್ ಟ್ರೋಫಿ: ರೋಹಿತ್ ಬಳಗದ ಅಭ್ಯಾಸಕ್ಕೆ ಭಾನುವಾರ ರಜೆ ನೀಡಿದ ಕೋಚ್ ದ್ರಾವಿಡ್
- Lifestyle
Horoscope Today 6 Feb 2023: ಸೋಮವಾರ : ದ್ವಾದಶ ರಾಶಿಗಳ ರಾಶಿಫಲ ಹೇಗಿದೆ?
- News
ರಾಜ್ಯ ರಾಜಕೀಯದ ಮುಂದಿನ ರಹಸ್ಯವೊಂದನ್ನು ಬೇಧಿಸಿದ ಎಚ್ಡಿಕೆ
- Finance
ಆಧಾರ್ ಕಾರ್ಡ್ ಸಂಖ್ಯೆಯಿಂದ ನಿಮ್ಮ ಬ್ಯಾಂಕ್ ಬ್ಯಾಲೆನ್ಸ್ ಪರಿಶೀಲಿಸಿ, ಹೇಗೆ ಇಲ್ಲಿ ತಿಳಿಯಿರಿ
- Automobiles
ಹೆಚ್ಚಿನ ಮೈಲೇಜ್ ನೀಡುವ ಬಹುನಿರೀಕ್ಷಿತ ಟಾಟಾ ಆಲ್ಟ್ರೊಜ್ iCNG ಕಾರಿನ ವಿಶೇಷತೆಗಳು...
- Technology
ಇನ್ಮುಂದೆ ಟ್ವಿಟ್ಟರ್ನಲ್ಲೂ ಹಣ ಗಳಿಸಬಹುದು; ಮಸ್ಕ್ರ ಹೊಸ ನಿರ್ಧಾರ ಏನು!?
- Education
KVS Recruitment 2022 : ಕೇಂದ್ರೀಯ ವಿದ್ಯಾಲಯ ಸಂಗತನ್ ದಲ್ಲಿ 13404 ಹುದ್ದೆಗಳ ನೇಮಕಾತಿ
- Travel
ಯಾವುದೇ ಚಿಂತೆ ಇಲ್ಲದೆ ಸುಖಕರ ಪ್ರಯಾಣ ಅನುಭವಿಸಲು ಇಲ್ಲಿದೆ ಸಲಹೆಗಳು
'ಆರಾಮ್ ಅರವಿಂದ್ ಸ್ವಾಮಿ'ಗೆ 'ಲವ್ ಮಾಕ್ಟೇಲ್' ಮಿಲನಾ!
'ಲವ್ ಮಾಕ್ಟೇಲ್' ಬ್ಲಾಕ್ ಬಸ್ಟರ್ ಲಿಸ್ಟ್ ಸೇರಿದ್ದೇ ಸೇರಿದ್ದು ಮಿಲನಾ ನಾಗರಾಜ್ ಬ್ಯಾಕ್ ಟು ಬ್ಯಾಕ್ ಸಿನಿಮಾಗಳಲ್ಲಿ ಬ್ಯುಸಿಯಾಗಿಬಿಟ್ಟಿದ್ದಾರೆ. ಸದ್ಯ ಮಿಲನಾ ನಾಗರಾಜ್ ಹೊಸ ಸಿನಿಮಾವನ್ನು ಒಪ್ಪಿಕೊಂಡಿದ್ದಾರೆ. ಅದುವೇ 'ಆರಾಮ್ ಅರವಿಂದ್ ಸ್ವಾಮಿ'.
'ಆರಾಮ್ ಅರವಿಂದ್ ಸ್ವಾಮಿ' ಸಿನಿಮಾಕ್ಕೆ ಮಿಲನಾ ನಾಗರಾಜ್ ನಾಯಕಿಯಾಗಿ ಆಯ್ಕೆಯಾಗಿದ್ದಾರೆ. ಇದೇ ಮೊದಲ ಬಾರಿಗೆ ಹೀರೊ ಅನೀಶ್ ಜೊತೆ ಮಿಲನಾ ನಾಗರಾಜ್ ಶೇರ್ ಮಾಡಿಕೊಳ್ಳುತ್ತಿದ್ದಾರೆ. ಈ ಸಿನಿಮಾ ಮಿಲನಾ ತುಂಬಾನೇ ವಿಭಿನ್ನವಾದ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.
ಮಿಲನಾ ನಾಗರಾಜ್ ಈ ಸಿನಿಮಾದಲ್ಲಿ ಎರಡು ಶೇಡ್ ನಲ್ಲಿ ಕಾಣಿಸಿಕೊಳ್ಳುತ್ತಿದ್ದಾರಂತೆ. ಒಂದು ಮಲಯಾಳಿ ಹುಡುಗಿಯಾಗಿ ಕಾಣಿಸಿಕೊಂಡರೆ, ಇನ್ನೊಂದು ಪಾತ್ರದಲ್ಲಿ ಟೀಚರ್ ಆಗಿ ಕಾಣಿಸಿಕೊಳ್ಳಲಿದ್ದಾರೆ. ಈಗಾಗಲೇ ಮಿಲನಾ ನಾಗರಾಜ್ ಸಿನಿಮಾದ ಚಿತ್ರೀಕರಣದಲ್ಲಿ ಪಾಲ್ಗೊಂಡಿದ್ದು, ಸದ್ಯದಲ್ಲೇ ಸಿನಿಮಾದ ಪೋಸ್ಟರ್ ರಿಲೀಸ್ ಮಾಡೋದಾಗಿ ನಿರ್ದೇಶಕ ಅಭಿಷೇಕ್ ಶೆಟ್ಟಿ ಮಾಹಿತಿ ನೀಡಿದ್ದಾರೆ.
'ನಮ್ ಗಣಿ ಬಿಕಾಂ ಪಾಸ್', 'ಗಜಾನನ ಅಂಡ್ ಗ್ಯಾಂಗ್' ಸಿನಿಮಾಗಳನ್ನು ನಿರ್ದೇಶಿಸಿರುವ ಅಭಿಷೇಕ್ ಶೆಟ್ಟಿ ಈಗ ನಾಯಕ ನಟ ಅನೀಶ್‌ಗೆ ಆಕ್ಷನ್ ಕಟ್ ಹೇಳುತ್ತಿದ್ದಾರೆ. ಅಂದ್ಹಾಗೆ 'ಆರಾಮ್ ಅರವಿಂದ್ ಸ್ವಾಮಿ' ರೊಮ್ಯಾಂಟಿಕ್ ಕಮ್ ಕಾಮಿಡಿ ಸಿನಿಮಾ.

'ಆರಾಮ್ ಅರವಿಂದ್ ಸ್ವಾಮಿ' ಸಿನಿಮಾಗೆ ಅಭಿಷೇಕ್ ಶೆಟ್ಟಿ ಕಥೆ, ಚಿತ್ರಕಥೆ, ಡೈಲಾಗ್ ಬರೆದು ನಿರ್ದೇಶನ ಕೂಡ ಮಾಡುತ್ತಿದ್ದಾರೆ. 'ಅಕಿರ' ಸಿನಿಮಾದ ಶ್ರೀಕಾಂತ್ ಪ್ರಸನ್ನ ಹಾಗೂ 'ಗುಳ್ಟು' ಸಿನಿಮಾ ಖ್ಯಾತಿಯ ಪ್ರಶಾಂತ್ ರೆಡ್ಡಿನಿರ್ಮಾಣ ಮಾಡುತ್ತಿದ್ದಾರೆ. ರೊಮ್ಯಾಂಟಿಕ್ ಕಾಮಿಡಿ ಸಬ್ಜೆಕ್ಟ್‌ನಲ್ಲಿ ಅನೀಶ್ ಇದೂವರೆಗೂ ಮಾಡದ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ.