ಖಳನಟ ಅನಿಲ್ ಮತ್ತು ಉದಯ್ ಕುಟುಂಬಕ್ಕೆ ಸರ್ಕಾರದಿಂದ 5 ಲಕ್ಷ ಪರಿಹಾರ

By Harshitha

'ಮಾಸ್ತಿ ಗುಡಿ' ಚಿತ್ರದ ಕ್ಲೈಮ್ಯಾಕ್ಸ್ ದೃಶ್ಯದಲ್ಲಿ ಪಾಲ್ಗೊಂಡು, ತಿಪ್ಪಗೊಂಡನಹಳ್ಳಿ ಕೆರೆಗೆ ಧುಮುಕಿ ದುರಂತ ಸಾವಿಗೀಡಾದ ಖಳನಟರಾದ ಅನಿಲ್ ಕುಮಾರ್ ಮತ್ತು ರಾಘವ ಉದಯ್ ಕುಟುಂಬಕ್ಕೆ ಕರ್ನಾಟಕ ಸರ್ಕಾರ ತಲಾ 5 ಲಕ್ಷ ರೂಪಾಯಿ ಪರಿಹಾರ ಘೋಷಿಸಿದೆ.

ಬೆಂಗಳೂರಿನ ಜಿಕೆವಿಕೆ ಆವರಣದಲ್ಲಿ ನಿನ್ನೆ (ನವೆಂಬರ್ 13) ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಆಯೋಜಿಸಿದ್ದ ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ವಿಜೇತರಿಗೆ ಪ್ರಶಸ್ತಿ ಪ್ರದಾನ ಮಾಡಿದ ಬಳಿಕ ಅನಿಲ್ ಮತ್ತು ಉದಯ್ ಅವರನ್ನು ಸ್ಮರಿಸಿಕೊಂಡ ಮುಖ್ಯಮಂತ್ರಿ ಸಿದ್ಧರಾಮಯ್ಯ, ಇಬ್ಬರು ಕುಟುಂಬದವರಿಗೆ ಸರ್ಕಾರದಿಂದ ತಲಾ 5 ಲಕ್ಷ ನೀಡುವುದಾಗಿ ತಿಳಿಸಿದರು. ['ಮಾಸ್ತಿ ಗುಡಿ' ತನಿಖೆ: ದುನಿಯಾ ವಿಜಯ್ ವಿರುದ್ಧ ಸ್ಫೋಟಕ ಮಾಹಿತಿ ಬಯಲು.!]

maasti-gudi-tragedy-cm-siddaramaiah-announces-5-lakhs-compensation

''ಈ ಕಲಾವಿದರ ಸಾವಿಗೆ ನಿರ್ದೇಶಕ ಹಾಗೂ ಸಾಹಸ ನಿರ್ದೇಶಕರ ನಿರ್ಲಕ್ಷ್ಯವೇ ಕಾರಣ. ಹೆಲಿಕಾಫ್ಟರ್ ನಿಂದ ಜಿಗಿದ ಕಲಾವಿದರು ರಕ್ಷಿಸಲು ಮುನ್ನೆಚ್ಚರಿಕೆ ವಹಿಸದಿರುವುದರಿಂದ ದುರಂತ ಸಂಭವಿಸಿದೆ'' ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅಭಿಪ್ರಾಯಪಟ್ಟರು. ['ಮಾಸ್ತಿ ಗುಡಿ' ದುರಂತ ಸಂಭವಿಸಲು ಪ್ರಮುಖ ಕಾರಣ ಇದೇ.!]

ನವೆಂಬರ್ 7 ರಂದು ಮಧ್ಯಾಹ್ನ ತಿಪ್ಪಗೊಂಡನಹಳ್ಳಿ ಕೆರೆಯಲ್ಲಿ ದುನಿಯಾ ವಿಜಯ್ ಮುಖ್ಯಭೂಮಿಕೆಯಲ್ಲಿ ಅಭಿನಯಿಸಿರುವ 'ಮಾಸ್ತಿ ಗುಡಿ' ಚಿತ್ರದ ಕ್ಲೈಮ್ಯಾಕ್ಸ್ ಚಿತ್ರೀಕರಣ ನಡೆಯಿತು. ನಾಯಕನಿಂದ ತಪ್ಪಿಸಿಕೊಂಡು ಹೆಲಿಕಾಫ್ಟರ್ ನಿಂದ ಕೆರೆಗೆ ಹಾರುವ ದೃಶ್ಯದಲ್ಲಿ ಅನಿಲ್ ಮತ್ತು ಉದಯ್ ನೀರುಪಾಲಾಗಿದ್ದರು.

More from Filmibeat

English summary
Cheif Minister of Karnataka, Siddaramaiah announced Rs.5 Lakhs Compensation for 2 Actors (Anil and Uday) who had drowned in TG Halli Reservoir during climax shoot of Kannada Movie 'Maasti Gudi'
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X