For Quick Alerts
  ALLOW NOTIFICATIONS  
  For Daily Alerts

  'ಸೂರರೈ ಪೊಟ್ರು' ಚಿತ್ರವನ್ನು ಹಾಡಿ ಹೊಗಳಿದ ಮಹೇಶ್ ಬಾಬು: ಸೂರ್ಯ ನಟನೆಗೆ ಫಿದಾ ಆದ ಪ್ರಿನ್ಸ್

  |

  ಹೆಮ್ಮೆಯ ಕನ್ನಡಿಗ ಕ್ಯಾಪ್ಟನ್ ಗೋಪಿನಾಥ್ ಅವರ ಜೀವನಾಧಾರಿತ ಸಿನಿಮಾ 'ಸೂರರೈ ಪೊಟ್ರು' ಚಿತ್ರಕ್ಕೆ ಎಲ್ಲಾ ಕಡೆಯಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಸಿನಿಮಾ ನವೆಂಬರ್ 12ರಂದು ಒಟಿಟಿಯಲ್ಲಿ ಬಿಡುಗಡೆಯಾಗಿದ್ದು, ಕನ್ನಡ ಸೇರಿದಂತೆ ಅನೇಕ ಭಾಷೆಯಲ್ಲಿ ತೆರೆಗೆ ಬಂದಿದೆ.

  ಕ್ಯಾಪ್ಟನ್ ಗೋಪಿನಾಥ್ ಅವರ ಸ್ಫೂರ್ತಿದಾಯಕ ಕಥೆಗೆ ಅಭಿಮಾನಿಗಳು ಫಿದಾ ಆಗಿದ್ದಾರೆ. ಗೋಪಿನಾಥ್ ಪಾತ್ರದಲ್ಲಿ ನಟ ಸೂರ್ಯ ಅದ್ಭುತವಾಗಿ ನಟಿಸಿದ್ದಾರೆ. ಚಿತ್ರಕ್ಕೆ ಸುಧಾ ಕೊಂಗಾರ ಅಕ್ಷನ್ ಕಟ್ ಹೇಳಿದ್ದಾರೆ. ಅಭಿಮಾನಿಗಳ ಜೊತೆಗೆ ಸಿನಿಮಾ ಗಣ್ಯರು ಸಹ ಚಿತ್ರ ನೋಡಿ ಹಾಡಿ ಹೊಗಳುತ್ತಿದ್ದಾರೆ.

  'ಸೂರರೈ ಪೊಟ್ರು' ಸಿನಿಮಾ ನೋಡಿ ಹಾಡಿ ಹೊಗಳಿದ ನಟ ವಿಜಯ್ ದೇವರಕೊಂಡ'ಸೂರರೈ ಪೊಟ್ರು' ಸಿನಿಮಾ ನೋಡಿ ಹಾಡಿ ಹೊಗಳಿದ ನಟ ವಿಜಯ್ ದೇವರಕೊಂಡ

  ಈಗಾಗಲೇ ಸಾಕಷ್ಟು ಸ್ಟಾರ್ಸ್ ಸಿನಿಮಾ ನೋಡಿ ಮೆಚ್ಚಿಕೊಂಡಿದ್ದಾರೆ. ಇದೀಗ ತೆಲುಗಗಿನ ಖ್ಯಾತ ನಟ ಮಹೇಶ್ ಬಾಬು ಸಿನಿಮಾ ನೋಡಿ ಫಿದಾ ಆಗಿದ್ದಾರೆ. ನಟ ಸೂರ್ಯ ಅಭಿನಯವನ್ನು ಕೊಂಡಾಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿರುವ ಮಹೇಶ್ ಬಾಬು, 'ಸೂರರೈ ಪೊಟ್ರು ಎಂತಹ ಸ್ಫೂರ್ತಿದಾಯಕ ಸಿನಿಮಾ. ಅದ್ಭುತ ನಿರ್ದೇಶನ, ಸೂರ್ಯ ಅಭಿನಯ ಅದ್ಭುತವಾಗಿದೆ. ಶೈನ್ ಆನ್ ಸಹೋದರ. ಇಡೀ ತಂಡಕ್ಕೆ ಅಭಿನಂದನೆಗಳು' ಎಂದಿದ್ದಾರೆ.

  Mahesh Babu Praises Suryas Performance In Soorarai Pottru
  ಸಿನಿಮಾದಲ್ಲಿ ಇರುವುದು ಎಲ್ಲವೂ ಸತ್ಯ ಅಲ್ಲ ಅಂದ್ರು ರಿಯಲ್ ಲೈಫ್ ಹೀರೊ ಗೋಪಿನಾಥ್ | Filmibeat Kannada

  ಮಹೇಶ್ ಬಾಬು ಟ್ವೀಟ್ ಗೆ ಸೂರ್ಯ ಕಡೆಯಿಂದ ಏನು ಪ್ರತಿಕ್ರಿಯೆ ಬರುತ್ತೆ ಎಂದು ಅಭಿಮಾನಿಗಳು ಕಾಯುತ್ತಿದ್ದಾರೆ. ಇತ್ತೀಚಿಗಷ್ಟೆ ನಟ ವಿಜಯ್ ದೇವರಕೊಂಡ ಸಿನಿಮಾ ನೋಡಿ ಹಾಡಿಹೊಗಳಿದ್ದರು. ಸೂರ್ಯ ನಟನೆ, ಅಪರ್ಣಾ ಬಾಲಮುರಳಿ ಅಭಿನಯ ಮತ್ತು ಸುಧಾ ಕೊಂಗಾರ ನಿರ್ದೇಶನದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದರು.

  English summary
  Telugu Actor Mahesh Babu praises Surya's performance in Soorarai Pottru.

  Kannada Photos

  Go to : More Photos
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X
  X