ಗೋಲ್ಡನ್ ಸ್ಟಾರ್ ಹುಟ್ಟುಹಬ್ಬಕ್ಕೆ 'ಕೃಷ್ಣಂ ಪ್ರಣಯ ಸಖಿ' ಸ್ಪೆಷಲ್ ಪೋಸ್ಟರ್ ಗಿಫ್ಟ್

By ಫಿಲ್ಮಿಬೀಟ್ ಡೆಸ್ಕ್

ಗೋಲ್ಡನ್ ಸ್ಟಾರ್ ಗಣೇಶ್ ನಟನೆಯ 'ಕೃಷ್ಣಂ ಪ್ರಣಯ ಸಖಿ' ಚಿತ್ರದ ಫಸ್ಟ್ ಲುಕ್ ರಿವೀಲ್ ಆಗಿತ್ತು. ಗಣಿ ಹುಟ್ಟುಹಬ್ಬಕ್ಕೆ ಒಂದು ದಿನ ಬಾಕಿ ಇರುವಾಗಲೇ ಚಿತ್ರತಂಡದಿಂದ ಸ್ಪೆಷಲ್ ಗಿಫ್ಟ್ ಸಿಕ್ಕಿದೆ. ಇದು ಗೋಲ್ಡನ್ ಸ್ಟಾರ್ ಹೀರೊ ಆಗಿ ನಟಿಸುತ್ತಿರುವ 41ನೇ ಸಿನಿಮಾ. 'ದಂಡುಪಾಳ್ಯ' ಸಿನಿಮಾ ಖ್ಯಾತಿಯ ಶ್ರೀನಿವಾಸ್ ರಾಜು ಆಕ್ಷನ್ ಕಟ್ ಹೇಳಿದ್ದಾರೆ.

ಕೌಟುಂಬಿಕ ಕಥಾಹಂದರ ಹೊಂದಿರುವ 'ಕೃಷ್ಣಂ ಪ್ರಣಯ ಸಖಿ' ಚಿತ್ರಕ್ಕೆ ಬೆಂಗಳೂರಿನಲ್ಲಿ ಬಿರುಸಿನ ಚಿತ್ರೀಕರಣ ನಡೆಯುತ್ತಿದೆ. ಮುಂದಿನ ದಿನಗಳಲ್ಲಿ ಮೈಸೂರು, ರಾಜಸ್ಥಾನ ಹಾಗೂ ಯುರೋಪ್‌ನಲ್ಲಿ ಚಿತ್ರೀಕರಣ ಮಾಡುವ ಲೆಕ್ಕಾಚಾರದಲ್ಲಿ ಚಿತ್ರತಂಡ. ಜುಲೈ 2, ನಟ ಗಣೇಶ್ ಹುಟ್ಟುಹಬ್ಬ. ಈ ಸಂದರ್ಭದಲ್ಲಿ ಫಸ್ಟ್ ಲುಕ್ ಬಿಡುಗಡೆ ಮಾಡುವ ಮೂಲಕ ಚಿತ್ರತಂಡ ಗಣೇಶ್‌ಗೆ ಹುಟ್ಟುಹಬ್ಬದ ಶುಭಾಶಯ ತಿಳಿಸಿದೆ.

Makers drop Ganeshs Krishnam Pranaya sakhi first look poster ahead of his birthday

ತ್ರಿಶೂಲ್ ಎಂಟರ್ಟೈನ್ಮೆಂಟ್ ಲಾಂಛನದಲ್ಲಿ ಪ್ರಶಾಂತ್ ಜಿ. ರುದ್ರಪ್ಪ 'ಕೃಷ್ಣಂ ಪ್ರಣಯ ಸಖಿ' ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ಈ ಸಂಸ್ಥೆಯಿಂದ ನಿರ್ಮಾಣವಾಗುತ್ತಿರುವ 3ನೇ ಚಿತ್ರವಿದು. ಚಿತ್ರದಲ್ಲಿ ಗೋಲ್ಡನ್ ಸ್ಟಾರ್ ಜೋಡಿಯಾಗಿ ಮಾಳವಿಕ ನಾಯರ್ ನಟಿಸುತ್ತಿದ್ದಾರೆ. ಸಾಧುಕೋಕಿಲ, ರಂಗಾಯಣ ರಘು, ಶಶಿಕುಮಾರ್, ಶ್ರುತಿ, ಸುಧಾರಾಣಿ, ಶ್ರೀನಿವಾಸಮೂರ್ತಿ, ಶಿವಧ್ವಜ್ ಶೆಟ್ಟಿ, ಬೆನಕ ಗಿರಿ ಮುಂತಾದ ಕಲಾವಿದರು 'ಕೃಷ್ಣಂ ಪ್ರಣಯ ಸಖಿ' ಚಿತ್ರದ ತಾರಾಗಣದಲ್ಲಿದ್ದಾರೆ.

Makers drop Ganeshs Krishnam Pranaya sakhi first look poster ahead of his birthday

ಸಾಲು ಸಾಲು ಚಿತ್ರಗಳಲ್ಲಿ ಗಣಿ

ಅದ್ಯಾಕೋ ಇತ್ತೀಚೆಗೆ ತೆರೆಮೇಲೆ ಗೋಲ್ಡನ್ ಸ್ಟಾರ್ ಮ್ಯಾಜಿಕ್ ನಡೀತಿಲ್ಲ. ಕಳೆದ ವರ್ಷ 'ಗಾಳಿಪಟ' ಸಿನಿಮಾ ಕೊಂಚಮಟ್ಟಿಗೆ ಸದ್ದು ಮಾಡಿತ್ತು. ನಂತರ ಬಂದ 'ತ್ರಿಬಲ್ ರೈಡಿಂಗ್' ಬಾಕ್ಸಾಫೀಸ್‌ನಲ್ಲಿ ಭರ್ಜರಿ ರೈಡ್ ಮಾಡಲಿಲ್ಲ. ಇನ್ನು 'ಬಾನ ದಾರಿಯಲ್ಲಿ' ಸೇರಿದಂತೆ ಒಂದಷ್ಟು ಸಿನಿಮಾಗಳಲ್ಲಿ ಬಣ್ಣ ಹಚ್ಚಿದ್ದಾರೆ. ಕಳೆದ ಮಾರ್ಚ್‌ನಲ್ಲೇ ರಿಲೀಸ್ ಆಗಬೇಕಿದ್ದ 'ಬಾನ ದಾರಿಯಲ್ಲಿ' ಸಿನಿಮಾ ಕಾರಣಾಂತರಗಳಿಂದ ತಡವಾಗುತ್ತಿದೆ.

ಈ ಬಾರಿ ಫ್ಯಾನ್ಸ್ ಜೊತೆ ಹುಟ್ಟುಹಬ್ಬ?

ಕಳೆದೆರಡು ವರ್ಷಗಳಿಂದ ನಟ ಗಣೇಶ್ ಅಭಿಮಾನಿಗಳ ಜೊತೆ ಹುಟ್ಟುಹಬ್ಬ ಆಚರಿಸಿಕೊಂಡಿಲ್ಲ. ಕೋವಿಡ್ ಕಾರಣಕ್ಕೆ 2 ವರ್ಷ ಅದ್ಧೂರಿ ಹುಟ್ಟುಹಬ್ಬಕ್ಕೆ ಬ್ರೇಕ್ ಹಾಕಿದ್ದರು. ಕಳೆದ ಬಾರಿ ಅನಿವಾರ್ಯ ಕಾರಣಗಳಿಂದ ಅಭಿಮಾನಿಗಳಿಗೆ ಬಹಿರಂಗ ಪತ್ರ ಬರೆದು ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿಲ್ಲ ಎಂದಿದ್ದರು. ಆದರೆ ಈ ಬಾರಿ ಅಭಿಮಾನಿಗಳು ನೆಚ್ಚಿನ ನಟನ ಹುಟ್ಟುಹಬ್ಬ ಆಚರಿಸಲು ಕಾತರಿದಿಂದ ಕಾಯುತ್ತಿದ್ದಾರೆ.

ತಡವಾಗುತ್ತಿದೆ 'ರಾಯಘಡ ಕಥೆ'

ಸಿಂಪಲ್ ಸುನಿ ಬಹಳ ಹಿಂದೆಯೇ ಗೋಲ್ಡನ್ ಸ್ಟಾರ್ ಜೊತೆ 'ದಿ ಸ್ಟೋರಿ ಆಫ್ ರಾಯಘಡ' ಸಿನಿಮಾ ಘೋಷಿಸಿದ್ದರು. ಆದರೆ ಆ ಸಿನಿಮಾ ಕಾರಣಾಂತರಗಳಿಂದ ತಡವಾಗುತ್ತಿದೆ. ಈ ಹಿಂದೆ ಹಲವು ಬಾರಿ ಈ ಸಿನಿಮಾ ಆರಂಭಿಸುವ ಬಗ್ಗೆ ಮಾತುಗಳು ಕೇಳಿಬಂದಿತ್ತು. ಆದರೆ ಯಾಕೋ ಸಾಧ್ಯವಾಗಲೇ ಇಲ್ಲ. ಸ್ಟೈಲಿಶ್‌ ಲುಕ್‌ನಲ್ಲಿ ಗಣಿನ ತೋರಿಸುವ ಪ್ರಯತ್ನ ಮಾಡುತ್ತಿದ್ದಾರೆ ಸುನಿ. ಬಹಳ ಹಿಂದೆ ಬಂದಿದ್ದ ಈ ಸಿನಿಮಾ ಪೋಸ್ಟರ್ ವೈರಲ್ ಆಗಿತ್ತು.

More from Filmibeat

English summary
Makers drop Ganesh's Krishnam Pranaya sakhi first look poster ahead of his birthday. Srinivas Raju Directed family drama Krishnam Pranaya sakhi Shoot in full swing. know more.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X