'ಮನದ ಕಡಲು' ಸಿನಿಮಾದ ಶೂಟಿಂಗ್​ ವೇಳೆ ದುರ್ಘಟನೆ; ಲೈಟ್‌ ಮ್ಯಾನ್ ಸಾವು, ಯೋಗರಾಜ್ ಭಟ್ ವಿರುದ್ಧ ಎಫ್‌ಐಆರ್

ಎಲ್ಲಾ ಚಿತ್ರರಂಗಗಳಲ್ಲೂ ಆಗಾಗ ದುರಂತಗಳು ನಡೆಯುತ್ತಲೇ ಇರುತ್ತವೆ. ಕನ್ನಡ ಚಿತ್ರರಂಗದಲ್ಲೂ ಹಲವು ಬಾರಿ ಚಿತ್ರೀಕರಣದ ವೇಳೆ ದುರಂತಗಳು ನಡೆಯುತ್ತಲೇ ಇವೆ. ಆದರೂ ನಿರ್ಮಾಣ ಸಂಸ್ಥೆಗಳು, ನಿರ್ದೇಶಕರು ನಿರ್ಲಕ್ಷ್ಯ ತೋರುತ್ತಿದ್ದಾರೆ. ಈಗ ಯೋಗರಾಜ್‌ ಭಟ್ ನಿರ್ದೇಶನದ 'ಮನದ ಕಡಲು' ಸಿನಿಮಾದ ಶೂಟ್ ಸೆಟ್‌ನಲ್ಲಿಯೂ ಇಂತಹದ್ದೇ ಘಟನೆ ನಡೆದಿದೆ.

'ಮನದ ಕಡಲು' ಸಿನಿಮಾದ ಚಿತ್ರೀಕರಣದ ವೇಳೆ 30 ಅಡಿ ಎತ್ತರದಿಂದ ಲೈಟ್ ಮ್ಯಾನ್ ಆಯಾತಪ್ಪಿ ಬಿದ್ದು ಸಾವನ್ನಪ್ಪಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನಿರ್ದೇಶಕ ಯೋಗರಾಜ್ ಭಟ್ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಇವರೊಂದಿಗೆ ಈ ಸಿನಿಮಾದ ನಿರ್ಮಾಪಕ ಈ.ಕೆ. ಕೃಷ್ಣಪ್ಪ, ಮಾನೇಜರ್ ಸುರೇಶ್, ಅಸಿಸ್ಟೆಂಟ್ ಮ್ಯಾನೇಜರ್ ಮನೋಹರ್ ಅವರ ಮೇಲೂ ದೂರು ದಾಖಲಿಸಲಾಗಿದೆ.

FIR Filed Against director Yogaraj Bhat

ಯೋಗರಾಜ್ ಭಟ್ ನಿರ್ದೇಶಿಸುತ್ತಿದ್ದ ಈ ಸಿನಿಮಾದ ಚಿತ್ರೀಕರಣ ಬೆಂಗಳೂರು ಉತ್ತರ ತಾಲೂಕಿನ ಅಡಕಮಾರನಹಳ್ಳಿಯಲ್ಲಿ ನಡೆಯುತ್ತಿತ್ತು. ಸಿನಿಮಾದ ಚಿತ್ರೀಕರಣದ ವೇಳೆ ಸೂಕ್ತ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳದ ಆರೋಪದ ಮೇರೆಗೆ ಈ ಸಿನಿಮಾದ ನಿರ್ದೇಶಕ ಯೋಗರಾಜ್ ಭಟ್ ಹಾಗೂ ನಿರ್ಮಾಪಕ ಈ.ಕೆ.ಕೃಷ್ಣಪ್ಪ ಸೇರಿದಂತೆ ಹಲವರ ಮೇಲೆ ದೂರು ದಾಖಲಾಗಿದೆ.

ಸೆಪ್ಟೆಂಬರ್ 3ನೇ ತಾರೀಕು ಈ ಘಟನೆ ನಡೆದಿದೆ. ನೆಲಮಂಗಲ ಸಮೀಪದ ಅಡಕಮಾರನಹಳ್ಳಿಯಲ್ಲಿ 'ಮನದ ಕಡಲು' ಸಿನಿಮಾದ ಚಿತ್ರೀಕರಣ ನಡೆಯುತ್ತಿತ್ತು. ಮಂಗಳವಾರ ಸಂಜೆ ( ಸೆಪ್ಟೆಂಬರ್ 3) 5.10 ಸುಮಾರಿಗೆ ಲೈಟ್ ಬಿಚ್ಚಲು ಏಣಿ ಏರಿದ್ದ ಲೈಟ್ ಮ್ಯಾನ್ ಮೋಹನ್ ಕುಮಾರ್ ಆಯಾತಪ್ಪಿ ಸುಮಾರು 30 ಅಡಿಯಿಂದ ಕೆಳಗೆ ಬಿದ್ದಿದ್ದಾರೆ. ಈ ವೇಳೆ ತಲೆಗೆ ತೀವ್ರ ಪೆಟ್ಟಾಗಿದ್ದರಿಂದ ತಕ್ಷಣವೇ ಅವರನ್ನು ಗೊರಗುಂಟೆಪಾಳ್ಯದ ಖಾಸಗಿ ಆಸ್ಪತ್ರೆಗೆ ಸೇರಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ. ಸಂಬಂಧ ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಲೈಟ್ ಮ್ಯಾನ್ ಮೋಹನ್ ಕುಮಾರ್‌ಗೆ ಸುರಕ್ಷತಾ ಸಾಧನಗಳನ್ನು ನೀಡಿರಲಿಲ್ಲ. ಈ ಕಾರಣಕ್ಕೆ ಶೂಟಿಂಗ್ ಸ್ಟಾಟ್‌ನಲ್ಲಿ ಇಂತಹ ದುರ್ಘಟನೆ ನಡೆದಿದೆ ಅನ್ನೋ ಆರೋಪ ಕೇಳಿಬಂದಿದೆ. ಈ ಪ್ರಕರಣ ತಡವಾಗಿ ಬೆಳೆಕಿಗೆ ಬಂದಿದ್ದು, ಯೋಗರಾಜ್ ಭಟ್ ಸೇರಿದಂತೆ 'ಮನದ ಕಡಲು' ಸಿನಿಮಾ ತಂಡ ಇನ್ನೂ ಪ್ರತಿಕ್ರಿಯೆ ನೀಡಿಲ್ಲ. ಕನ್ನಡ ಚಿತ್ರರಂಗದಲ್ಲಿ ಆಗಾಗ ಇಂತಹ ಪ್ರಕರಣಗಳು ನಡೆಯುತ್ತಿದ್ದರೂ ಚಿತ್ರತಂಡ ಎಚ್ಚೆತ್ತುಕೊಂಡಿಲ್ಲ.

ಸ್ಯಾಂಡಲ್‌ವುಡ್‌ನಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ ಶೂಟಿಂಗ್‌ ಸ್ಥಳದಲ್ಲಿ ಅಗತ್ಯ ಸುರಕ್ಷತೆಗೆ ಚಿತ್ರತಂಡ ಒತ್ತು ನೀಡುತ್ತಿಲ್ಲ. ಒಂದು ಸಿನಿಮಾ ಶುರು ಮಾಡುವ ಮೊದಲು ಅಲ್ಲಿ ಕೆಲಸ ಮಾಡುವವರಿಗೆ ಸುರಕ್ಷತೆ ಬಗ್ಗೆ ಮೊದಲ ಆದ್ಯತೆಯನ್ನು ನೀಡಬೇಕು. ಆದರೆ, ಕಳೆದ ಹಲವು ವರ್ಷಗಳಿಂದ ಇಂತಹದ್ದೊಂದು ಕೂಗು ಕೇಳಿ ಬರುತ್ತಿದ್ದರೂ, ಅದನ್ನು ಸರಿಪಡಿಸುವುದಕ್ಕೆ ಯಾರೂ ಮುಂದಾಗುತ್ತಿಲ್ಲ.

More from Filmibeat

English summary
Manada Kadalu movie light man died in the set FIR filed against Kannada movie director Yogaraj Bhat
Read more about: yogaraj bhat fir filmibeat news
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X