For Quick Alerts
  ALLOW NOTIFICATIONS  
  For Daily Alerts

  ಸ್ಯಾಂಡಲ್‌ವುಡ್‌ನಲ್ಲಿ ಡ್ರಗ್ಸ್ ಡೀಲ್ ಆರೋಪ: ಸುಮಲತಾ, ರಾಕ್‌ಲೈನ್‌ ಹೇಳಿದ್ದೇನು?

  |

  ಬೆಂಗಳೂರಿನಲ್ಲಿ ಅಕ್ರಮವಾಗಿ ಡ್ರಗ್ಸ್ ಮಾರಾಟ ಮಾಡುತ್ತಿದ್ದ ಜಾಲದ ಮೇಲೆ ಎನ್‌ಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದು, ಮೂವರು ಪ್ರಮುಖ ಆರೋಪಿಗಳನ್ನು ಬಂಧಿಸಲಾಗಿದೆ. ವಿಚಾರಣೆ ವೇಳೆ ಸ್ಯಾಂಡಲ್‌ವುಡ್‌ ನಟ, ನಟಿ, ನಿರ್ದೇಶಕ ಹಾಗೂ ಸಂಗೀತ ನಿರ್ದೇಶಕರಿಗೆ ಡ್ರಗ್ಸ್ ಮಾರಾಟ ಮಾಡುತ್ತಿದ್ದರು ಎಂದು ಆರೋಪಿಗಳು ಹೇಳಿದ್ದಾರೆ ಎಂದು ತಿಳಿದು ಬಂದಿದೆ.

  Ayogya ಸಿನಿಮಾದ ಕ್ಲೈಮ್ಯಾಕ್ಸ್ ಸನ್ನಿವೇಶದ ತೆರೆ ಹಿಂದಿನ ದೃಶ್ಯ | Ayogya Climax Making | Filmibeat Kannada

  ಬಂಧಿತ ಆರೋಪಿಗಳ ಹೇಳಿಕೆಯಿಂದ ಸ್ಯಾಂಡಲ್‌ವುಡ್‌ನ ಡ್ರಗ್ಸ್ ಪ್ರಿಯರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಯಾವೆಲ್ಲ ಕಲಾವಿದರಿಗೆ ಹಾಗೂ ತಂತ್ರಜ್ಞರಿಗೆ ಇವರು ಡ್ರಗ್ಸ್ ಮಾರಾಟ ಮಾಡಿದ್ದಾರೆ ಎನ್ನುವುದರ ಬಗ್ಗೆ ಎನ್‌ಸಿಬಿ ಅಧಿಕಾರಿಗಳು ಮಾಹಿತಿ ಪಡೆಯುತ್ತಿದ್ದಾರೆ ಎನ್ನಲಾಗಿದೆ.

  ಸ್ಯಾಂಡಲ್‌ವುಡ್‌ನಲ್ಲಿ ಡ್ರಗ್ಸ್ ಮಾಫಿಯಾ, ಅನಿಕಾ ಬಿಚ್ಚಿಟ್ಟ ಸೆಲೆಬ್ರಿಟಿಗಳ ನಂಟು!

  ಕನ್ನಡ ಚಿತ್ರರಂಗದಲ್ಲಿ ಡ್ರಗ್ಸ್ ಸೇವನೆ ಇದೆ ಎಂಬ ಆರೋಪಕ್ಕೆ ಮಂಡ್ಯ ಸಂಸದೆ ಸುಮಲತಾ ಪ್ರತಿಕ್ರಿಯಿಸಿದ್ದು, ''ಇಂದಿನ ಜನರೇಷನ್‌ನಲ್ಲಿ ಡ್ರಗ್ ಡೀಲರ್ಸ್ ಇರುವ ಕಡೆ ಇಂತಹದ್ದು ಇದ್ದೇ ಇದೆ. ಆದರೆ, ಕನ್ನಡ ಚಿತ್ರರಂಗದಲ್ಲಿ ಡ್ರಗ್ ಡೀಲಿಂಗ್ ನನ್ನ ಗಮನಕ್ಕೆ ಬಂದಿಲ್ಲ'' ಎಂದು ಹೇಳಿದ್ದಾರೆ.

  ಸುಮಲತಾ ಅಂಬರೀಶ್ ಇಂದು ತಮ್ಮ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದಾರೆ. ಈ ವಿಶೇಷವಾಗಿ ಕಂಠೀರವ ಸ್ಟುಡಿಯೋದಲ್ಲಿರುವ ಅಂಬರೀಶ್ ಸಮಾಧಿ ಬಳಿ ಭೇಟಿ ನೀಡಿ ನಮನ ಸಲ್ಲಿಸಿದ್ದಾರೆ.

  ಇದೇ ಸಂದರ್ಭದಲ್ಲಿ ನಿರ್ಮಾಪಕ ರಾಕ್‌ಲೈನ್ ವೆಂಕಟೇಶ್ ಸಹ ಈ ಕುರಿತು ಪ್ರತಿಕ್ರಿಯಿಸಿ ''ನಮ್ಮ ಇಂಡಸ್ಟ್ರಿಯಲ್ಲಿ ಡ್ರಗ್ ಸೇವನೆ ಮಾಡುವಂತಹ ಕಲಾವಿದರಿಲ್ಲ. ಬಾಡಿ ಬಿಲ್ಡಿಂಗ್‌ಗಾಗಿ ಪ್ರೋಟಿನ್ ತಗೊಳ್ಳಬಹುದು ಅಷ್ಟೇ'' ಎಂದಿದ್ದಾರೆ.

  English summary
  Mandya Mp Mandya Mp Sumalatha and producer Rockline venkatesh has reacts on Drugs Mafia.

  Kannada Photos

  Go to : More Photos
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X
  X