For Quick Alerts
  ALLOW NOTIFICATIONS  
  For Daily Alerts

  ನಟಿ ಪದ್ಮಜಾ ರಾವ್ ಗೆ ಜಾಮೀನು: ಈ ಪ್ರಕರಣದಲ್ಲಿ ಗೆದ್ದೇ ಗೆಲ್ಲುತ್ತೇನೆ ಎಂದ ನಟಿ

  |

  ಚೆಕ್ ಬೌನ್ಸ್ ಪ್ರಕರಣದಲ್ಲಿ ಜಾಮೀನು ರಹಿತ ವಾರೆಂಟ್ ಜಾರಿಯಾಗಿದ್ದ ನಟಿ ಪದ್ಮಜಾ ರಾವ್ ಅವರಿಗೆ ಜಾಮೀನು ಮಂಜೂರಾಗಿದೆ. ಶುಕ್ರವಾರ ಮಂಗಳೂರಿನ ಜೆ ಎಂ ಎಫ್ ಸಿ ನ್ಯಾಯಾಲಯಕ್ಕೆ ಹಾಜರಾಗಿದ್ದ ಪದ್ಮಜಾ ರಾವ್ ಅವರಿಗೆ ಕೋರ್ಟ್ ಜಾಮೀನು ನೀಡಿದೆ.

  4 ಲಕ್ಷ ಮೊತ್ತದ ಬಾಂಡ್ ಮತ್ತು 40 ಸಾವಿರ ರೂಪಾಯಿ ಠೇವಣಿ ಇಡಬೇಕು. ಹಾಗೂ ನಿಯಮಿತವಾಗಿ ಕೋರ್ಟ್ ಗೆ ಹಾಜರಾಗಬೇಕು ಎನ್ನುವ ಷರತ್ತಿನೊಂದಿಗೆ ನ್ಯಾಯಾದೀಶರು ಜಾಮೀನು ಮಂಜೂರು ಮಾಡಿದ್ದಾರೆ.

  40 ಲಕ್ಷ ವಂಚನೆ: ನಟಿ ಪದ್ಮಜಾ ರಾವ್ ಬಂಧಿಸಲು ಸೂಚಿಸಿದ ನ್ಯಾಯಾಲಯ

  ಮಂಗಳೂರಿನ ನಟ ಮತ್ತು ನಿರ್ದೇಶಕ ವೀರೇಂದ್ರ ಶೆಟ್ಟಿ ಒಡೆತನದ ವೀರೂ ಟಾಕೀಸ್ ಪ್ರೊಡಕ್ಷನ್ ಹೌಸ್ ನಿಂದ ನಟಿ ಪದ್ಮಜಾ ರಾವ್ 41 ಲಕ್ಷ ರೂಪಾಯಿ ಸಾಲ ಪಡೆದಿದ್ದರು. ಸಾಲದ ಭದ್ರತೆಗಾಗಿ 4 ಲಕ್ಷ ರೂಪಾಯಿ ಚೆಕ್ ನೀಡಿದ್ದರು. ಆದರೆ ಆ ಚೆಕ್ ಬೌನ್ಸ್ ಆಗಿದೆ. ಈ ಬಗ್ಗೆ ವೀರೂ ಶೆಟ್ಟಿ ಕೋರ್ಟ್ ಮೆಟ್ಟಿಲೇರಿದ್ದರು.

  ಪದ್ಮಾಜಾ ರಾವ್ ವಿರುದ್ಧ ಜಾಮಿನು ರಹಿತ ವಾರೆಂಟ್ ಹೊರಡಿಸಿದ ಕೋರ್ಟ್ | Padmaja Rao

  ನ್ಯಾಯಾಲಯಕ್ಕೆ ಹಾಜರಾಗಲು ಆದೇಶಿಸಿದ್ದ ಸಮನ್ಸ್ ಸ್ವೀಕರಿಸಲು ನಿರಾಕರಿಸುತ್ತಿದ್ದ ಹಿನ್ನಲೆಯಲ್ಲಿ ಪದ್ಮಜಾ ರಾವ್ ವಿರುದ್ಧ ವಾರೆಂಟ್ ಜಾರಿಯಾಗಿತ್ತು. ಮಂಗಳೂರಿನ ಜೆ ಎಂ ಎಫ್ ಸಿ ನ್ಯಾಯಾಲಯಕ್ಕೆ ಹಾಜರಾದ ಬಳಿಕ ಮಾಧ್ಯಮದ ಜೊತೆ ಮಾತನಾಡಿದ ಪದ್ಮಜಾ ರಾವ್ ಗೆದ್ದೇ ಗೆಲ್ಲುತ್ತೇನೆ ಎಂಬ ವಿಶ್ವಾಸವಿದೆ ಎಂದು ಹೇಳಿದ್ದಾರೆ. ನನಗೆ ಕಾನಾನು, ನ್ಯಾಯಾಲಯದ ಮೇಲೆ ಸಂಪೂರ್ಣ ಭರವಸೆ ಇದೆ. ನನ್ನ ಮೇಲೆ ಪೂರ್ಣ ಭರವಸೆ ಇದೆ. ನೀವೆಲ್ಲರೂ ಕಾದು ನೋಡಬೇಕು ಎಂದು ಹೇಳಿದ್ದಾರೆ.

  English summary
  Mangalore JMFC court grants bail to Actress Padmaja Rao.

  Kannada Photos

  Go to : More Photos
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X
  X