100 ಕೋಟಿ ಬಜೆಟ್ ನಲ್ಲಿ ಸಿದ್ಧವಾಗುತ್ತಿದೆ ಉಪೇಂದ್ರ ಹೊಸ ಸಿನಿಮಾ: ನಿರ್ದೇಶಕ ಯಾರು?

ಸ್ಯಾಂಡಲ್ ವುಡ್ ನ 'ಬುದ್ಧಿವಂತ' ನಟ ಮತ್ತು ನಿರ್ದೇಶಕ ರಿಯಲ್ ಸ್ಟಾರ್ ಉಪೇಂದ್ರ ಅವರಿಗೆ ಇಂದು (ಸೆಪ್ಟಂಬರ್ 18) ಹುಟ್ಟುಹಬ್ಬ ಸಂಭ್ರಮ. 53ನೇ ವಸಂತಕ್ಕೆ ಕಾಲಿಟ್ಟಿರುವ ಉಪೇಂದ್ರ ಸರಳವಾಗಿ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದಾರೆ. ಆದರೆ ಅಭಿಮಾನಿಗಳು, ಸ್ನೇಹಿತರು ಮತ್ತು ಚಿತ್ರರಂಗದ ಗಣ್ಯರಿಂದ ಶುಭಾಶಯಗಳ ಸುರಿಮಳೆಯೇ ಹರಿದು ಬರುತ್ತಿದೆ. ಸಾಮಾಜಿಕ ಜಾಲತಾಣದಲ್ಲಿ ಅಭಿಮಾನಿಗಳು ಹಬ್ಬ ಆಚರಿಸುತ್ತಿದ್ದಾರೆ.

ಇಂದು ರಿಯಲ್ ಸ್ಟಾರ್ ಹುಟ್ಟುಹಬ್ಬದ ಪ್ರಯುಕ್ತ ಹೊಸ ಸಿನಿಮಾಗಳು ಅನೌನ್ಸ್ ಆಗಿವೆ. ಚಿತ್ರದ ಪೋಸ್ಟರ್ ಗಳು ಅಭಿಮಾನಿಗಳ ನಿದ್ದೆಗೆಡಿಸಿದೆ. ಇನ್ನೂ ವಿಶೇಷ ಅಂದರೆ ಉಪೇಂದ್ರ ಅವರ ಹೊಸ ಸಿನಿಮಾ ಬರೋಬ್ಬರಿ 100 ಕೋಟಿ ವೆಚ್ಚದಲ್ಲಿ ತಯಾರಾಗುತ್ತಿದೆ ಎನ್ನುವ ಸುದ್ದಿ ಬಹಿರಂಗವಾಗಿದೆ. 'ಕಬ್ಜ' ಸಿನಿಮಾ ಬಳಿಕ ರಿಯಲ್ ಸ್ಟಾರ್ ಮತ್ತೊಂದು ಪ್ಯಾನ್ ಇಂಡಿಯಾ ಸಿನಿಮಾ ಮೂಲಕ ಅಭಿಮಾನಿಗಳ ಮುಂದೆ ಬರಲು ಸಿದ್ಧರಾಗಿದ್ದಾರೆ. ಮುಂದೆ ಓದಿ..

ಮಂಜು ಮಾಂಡವ್ಯ ನಿರ್ದೇಶನದಲ್ಲಿ ಪ್ಯಾನ್ ಇಂಡಿಯಾ ಸಿನಿಮಾ

ಮಂಜು ಮಾಂಡವ್ಯ ನಿರ್ದೇಶನದಲ್ಲಿ ಪ್ಯಾನ್ ಇಂಡಿಯಾ ಸಿನಿಮಾ

ರಿಯಲ್ ಉಪೇಂದ್ರ ಅವರಿಗೆ 'ಮಾಸ್ಟರ್ ಪೀಸ್' ಖ್ಯಾತಿಯ ನಿರ್ದೇಶಕ ಮಂಜು ಮಾಂಡವ್ಯ ಆಕ್ಷನ್ ಕಟ್ ಹೇಳುತ್ತಿದ್ದಾರೆ. ಮೊದಲ ಬಾರಿಗೆ ಮಂಜು ಮಾಂಡವ್ಯ ಮತ್ತು ಉಪೇಂದ್ರ ಜೋಡಿ ಒಂದಾಗುತ್ತಿದ್ದು, ಪ್ಯಾನ್ ಇಂಡಿಯಾ ಸಿನಿಮಾಗೆ ತಯಾರಿ ನಡೆಸಿದ್ದಾರೆ. ಈ ಸಿನಿಮಾವನ್ನು ನಿಮಿಷಾಂಬ ಪ್ರೊಡಕ್ಷನ್ ಲಾಂಛನದಲ್ಲಿ ಅಣ್ಣಯ್ಯ ಚಂದ್ರು ನಿರ್ಮಾಣ ಮಾಡುತ್ತಿದ್ದಾರೆ. ಈ ಹಿಂದೆ 'ಕರ್ಪೂರದ ಗೊಂಬೆ', 'ಏನೋ ಒಂಥರ', 'ಬಿಂದಾಸ್', 'ರನ್ನ' ಅಂತಹ ಸೂಪರ್ ಹಿಟ್ ಸಿನಿಮಾಗಳು ಇವರ ನಿರ್ಮಾಣದಲ್ಲಿ ಮೂಡಿಬಂದಿವೆ.

2021ರಲ್ಲಿ ಸೆಟ್ಟೇರಲಿದೆ ಸಿನಿಮಾ

2021ರಲ್ಲಿ ಸೆಟ್ಟೇರಲಿದೆ ಸಿನಿಮಾ

ಬಹುನಿರೀಕ್ಷೆಯ ಸಿನಿಮಾದ ಟೈಟಲ್ ಇನ್ನೂ ಫೈನಲ್ ಆಗಿಲ್ಲ.ಬಿಗ್ ಬಜೆಟ್ ನ ಈ ಸಿನಿಮಾ ಮುಂದಿನ ವರ್ಷ 2021 ಜನವರಿಯಲ್ಲಿ ಸೆಟ್ಟೇರಲಿದೆ ಎಂದು ಹೇಳಲಾಗುತ್ತಿದೆ. ಈ ಸಿನಿಮಾದ ಕಥೆ ಕೇಳಿ ಉಪೇಂದ್ರ ಸಖತ್ ಇಂಪ್ರೆಸ್ ಆಗಿದ್ದಾರಂತೆ. ಚಿತ್ರದ ಬಗ್ಗೆ ಹೆಚ್ಚೇನು ಬಿಟ್ಟುಕೊಡದ ಸಿನಿಮಾತಂಡ, ಸದ್ಯದಲ್ಲೇ ಮತ್ತಷ್ಟು ಮಾಹಿತಿ ನೀಡುವುದಾಗಿ ನಿರ್ದೇಶಕರು ತಿಳಿಸಿದ್ದಾರೆ.

ನಿರ್ದೇಶಕ ಶಶಾಂಕ್ ಜೊತೆ ಉಪೇಂದ್ರ ಸಿನಿಮಾ

ನಿರ್ದೇಶಕ ಶಶಾಂಕ್ ಜೊತೆ ಉಪೇಂದ್ರ ಸಿನಿಮಾ

ನಿರ್ದೇಶಕ ಶಶಾಂಕ್ ಜೊತೆ ರಿಯಲ್ ಸ್ಟಾರ್ ಉಪೇಂದ್ರ ಹೊಸ ಸಿನಿಮಾ ಮಾಡುತ್ತಿದ್ದು, ಹುಟ್ಟುಹಬ್ಬದ ದಿನ ಪೋಸ್ಟರ್ ರಿಲೀಸ್ ಮಾಡಲಾಗಿದೆ. ಉಪೇಂದ್ರ ಅವರ 54ನೇ ಸಿನಿಮಾ ಇದಾಗಿದೆ. ನೈಜ ಘಟನೆ ಆಧಾರಿತ ಸಿನಿಮಾ ಇದಾಗಿದ್ದು, ಶಶಾಂಕ್ ನಿರ್ಮಾಣದಲ್ಲಿ ಸಿನಿಮಾ ಮೂಡಿ ಬರುತ್ತಿದೆ. ಈ ಸಿನಿಮಾ ಸಹ ಅಭಿಮಾನಿಗಳ ಕುತೂಹಲವನ್ನು ಇಮ್ಮಡಿಗೊಳಿಸಿದೆ.

Recommended Video

ನನ್ನ ನಂಬಿ ಸರ್ಕಾರ ದೊಡ್ಡ ಜವಾಬ್ದಾರಿ ಕೊಟ್ಟಿದೆ | Shruthi Krishna | Filmibeat Kannada
ಕಬ್ಜ ಸಿನಿಮಾದ ಪೋಸ್ಟರ್ ರಿಲೀಸ್

ಕಬ್ಜ ಸಿನಿಮಾದ ಪೋಸ್ಟರ್ ರಿಲೀಸ್

ಬಹುನಿರೀಕ್ಷೆಯ 'ಕಬ್ಜ' ಸಿನಿಮಾದ ಥೀಮ್ ಪೋಸ್ಟರ್ ರಿಲೀಸ್ ಮಾಡುವ ಮೂಲಕ ಅಭಿಮಾನಿಗಳಿಗೆ ಭರ್ಜರಿ ಉಡುಗೊರೆ ನೀಡಿದ್ದಾರೆ. 'ಕಬ್ಜ' ಸಿನಿಮಾ ದಕ್ಷಿಣ ಭಾರತದ ಎಲ್ಲಾ ಭಾಷೆಯ ಜೊತೆಗೆ ಹಿಂದಿಯಲ್ಲಿಯೂ ತೆರೆಗೆ ಬರುತ್ತಿದೆ. ಪ್ಯಾನ್ ಇಂಡಿಯಾ ಸಿನಿಮಾವಾಗಿ ತಯಾರಾಗುತ್ತಿರುವ 'ಕಬ್ಜ' ಸಿನಿಮಾದ ಥೀಮ್ ಪೋಸ್ಟರ್ ಅನ್ನು ಖ್ಯಾತ ನಿರ್ದೇಶಕ ರಾಮ್ ಗೋಪಾಲ್ ವರ್ಮಾ ರಿಲೀಸ್ ಮಾಡಿದ್ದಾರೆ.

More from Filmibeat

English summary
Director Manju Mandavya to Colloborate With Upendra for a Pan india Film to Be Made With 100crore Budget.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X