Just In
Don't Miss!
- Lifestyle
ದಿನ ಭವಿಷ್ಯ: ನಿಮ್ಮ ರಾಶಿಗೆ ಶನಿವಾರ ದಿನ ಹೇಗಿರಲಿದೆ ನೋಡಿ
- News
ದಿಢೀರ್ ಕೋರ್ಟ್ ಮೆಟ್ಟಿಲೇರಿದ್ದಕ್ಕೆ ಕಾರಣ ನೀಡಿದ ಸಚಿವ ಕೆ. ಸುಧಾಕರ್
- Education
KSCCF Recruitment 2021: 45 ಲೆಕ್ಕಿಗರು, ಎಫ್ಡಿಎ ಮತ್ತು ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ
- Automobiles
ಮಾರ್ಚ್ ತಿಂಗಳಿನಲ್ಲಿ ಹ್ಯುಂಡೈ ವಿವಿಧ ಕಾರುಗಳ ಖರೀದಿ ಮೇಲೆ ಭರ್ಜರಿ ರಿಯಾಯಿತಿ
- Sports
ಐಎಸ್ಎಲ್: ಸಮಬಲ ಸಾಧಿಸಿದ ಗೋವಾ ಎಫ್ಸಿ, ಮುಂಬೈ ಎಫ್ಸಿ
- Finance
ಅಡಿಕೆ, ಕಾಫೀ, ಮೆಣಸು ಹಾಗೂ ರಬ್ಬರ್ನ ಮಾ. 05ರ ಮಾರುಕಟ್ಟೆ ದರ ಇಲ್ಲಿದೆ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಚಿತ್ರರಂಗದಲ್ಲಿ ಟಕ್ಕರ್ ಕೊಡಲು ಬಂದ ದರ್ಶನ್ ಸಹೋದರ
ದರ್ಶನ್ ಸಹೋದರ ಸಂಬಂಧಿ ಚಿತ್ರರಂಗಕ್ಕೆ ನಾಯಕನಾಗಿ ಎಂಟ್ರಿ ಕೊಡುತ್ತಿರುವ ವಿಚಾರ ಎಲ್ಲರಿಗೂ ಗೊತ್ತೇ ಇದೆ. ಸಂಕ್ರಾಂತಿ ಹಬ್ಬದ ವಿಶೇಷವಾಗಿ ಸಿನಿಮಾ ಟೈಟಲ್ ಅನ್ನು ಬಿಡುಗಡೆ ಮಾಡಿದ್ದಾರೆ ಸಿನಿಮಾ ನಿರ್ದೇಶಕ ರಘು ಶಾಸ್ತ್ರಿ.
'ರನ್ ಆಂಟನಿ' ಸಿನಿಮಾದ ನಂತರ ಮನೋಜ್ ಅಭಿನಯದ ಹೊಸ ಚಿತ್ರಕ್ಕೆ ಆಕ್ಷನ್ ಕಟ್ ಹೇಳುತ್ತಿರುವ ರಘು ಶಾಸ್ತ್ರಿ ಸಿನಿಮಾಗೆ ಟಕ್ಕರ್ ಎಂದು ಟೈಟಲ್ ಫಿಕ್ಸ್ ಮಾಡಿದ್ದಾರೆ. ಈಗಾಗಲೇ ಫೋಟೋ ಶೂಟ್ ಮುಗಿಸಿ ಸುಗ್ಗಿ ಹಬ್ಬದ ಸಂಭ್ರಮಕ್ಕೆ ಫಸ್ಟ್ ಲುಕ್ ಬಿಡುಗಡೆ ಮಾಡಿರುವ ಟೀಂ ಸದ್ಯ ನಾಯಕಿಯ ಹುಡುಕಾಟದಲ್ಲಿದೆ.
30 ವರ್ಷದ ಹಿಂದೆ ಡಿ ಬಾಸ್ ಮಾಡಿದ ಡ್ರಾಮಾ ಇದು
ಮಾರ್ಚ್ ನಿಂದ ಚಿತ್ರೀಕರಣ ಶುರು ಮಾಡಿಲಿರುವ ಟಕ್ಕರ್ ಚಿತ್ರಕ್ಕೆ ನಾಗೇಶ್ ಕೋಗಿಲು ಬಂಡವಾಳ ಹಾಕಿದ್ದಾರೆ. ಸ್ಯಾಂಡಲ್ ವುಡ್ ನ ಇಬ್ಬರು ಸ್ಟಾರ್ ಚಿತ್ರದಲ್ಲಿ ಗೆಸ್ಟ್ ಅಪೀರಿಯನ್ಸ್ ನಲ್ಲಿ ಕಾಣಿಸಿಕೊಳ್ಳಲಿದ್ದಾರೆ.
ಪ್ರೀ ಪ್ರೊಡಕ್ಷನ್ ಕೆಲಸ ಮುಗಿಸಿರುವ ಚಿತ್ರತಂಡ ಕನ್ನಡದ ನಾಯಕಿಗಾಗಿ ಹುಡುಕಾಟ ಪ್ರಾರಂಭ ಮಾಡಿದ್ಯಂತೆ. ಚಾಲೆಂಜಿಂಗ್ ಸ್ಟಾರ್ ದರ್ಶನ್ ಜೊತೆ ಸಿನಿಮಾಗಳಲ್ಲಿ ಅಭಿನಯಿಸಿ ಚಿತ್ರರಂಗದ ನಂಟನ್ನ ಬೆಳಸಿಕೊಂಡಿರುವ ಮನೋಜ್ ಟಕ್ಕರ್ ಸಿನಿಮಾದ ಮೂಲಕ ಚಿತ್ರರಂಗದಲ್ಲಿ ನಾಯಕನಾಗಿ ಗುರುತಿಸಿಕೊಳ್ಳಲಿದ್ದಾರೆ.