For Quick Alerts
  ALLOW NOTIFICATIONS  
  For Daily Alerts

  'ಚಿಲಂ' ಚಿತ್ರಕ್ಕಾಗಿ ಮಾಸ್ ರಗಡ್ ಲುಕ್ ನಲ್ಲಿ ಮನೋರಂಜನ್

  By Pavithra
  |
  ಹೇಗಿದೆ ನೋಡಿ ಮನೋರಂಜನ್ ಚಿಲಂ ಲುಕ್ ..!! | Filmibeat Kannada

  ನಟ ಮನೋರಂಜನ್ ಬೃಹಸ್ಪತಿ ಸಿನಿಮಾ ನಂತರ 'ಚಿಲಂ' ಸಿನಿಮಾದಲ್ಲಿ ಅಭಿನಯ ಮಾಡುತ್ತಿದ್ದಾರೆ ಎನ್ನುವುದು ಹಳೆಯ ವಿಚಾರ. ಸದ್ಯ ಚಿತ್ರದ ಪಾತ್ರಕ್ಕಾಗಿ ಮನು ಹೊಸ ಲುಕ್ ನಲ್ಲಿ ಎಂಟ್ರಿಕೊಟ್ಟಿದ್ದಾರೆ. ಡ್ರಗ್ ಮಾಫಿಯಾ ಕುರಿತಾದ ಸಿನಿಮಾ ಇದಾಗಿದ್ದು ಮನೋರಂಜನ್ ಚಿತ್ರದಲ್ಲಿ ಡಿಫ್ರೆಂಟ್ ಆಗಿ ಕಾಣಿಸಿಕೊಳ್ಳಲಿದ್ದಾರೆ.

  'ಚಿಲಂ' ಚಿತ್ರದಲ್ಲಿನ ಮನು ಲುಕ್ ರಿಲೀಸ್ ಆಗಿದ್ದು ಮನು ಈ ಬಾರಿ ಔಟ್ ಅಂಡ್ ಔಟ್ ಮಾಸ್ ಲುಕ್ ನಲ್ಲಿ ಕಾಣಿಸಿಕೊಳ್ಳುವ ಸೂಚನೆ ಕೊಡುತ್ತಿದ್ದಾರೆ. ಚಂದ್ರಕಲಾ ನಿರ್ದೇಶನ ಮಾಡುತ್ತಿರುವ ಈ ಚಿತ್ರದ ಶೂಟಿಂಗ್ ಶುರುವಾಗಿದ್ದು ಹದಿನಾಲ್ಕು ವರ್ಷದ ನಂತರ ರಾಘವೇಂದ್ರ ರಾಜ್ ಕುಮಾರ್ ಮತ್ತೆ ಸಿನಿಮಾದಲ್ಲಿ ಅಭಿನಯ ಮಾಡುತ್ತಿದ್ದಾರೆ.

  ಗಿಡ ನೆಟ್ಟು ಪರಿಸರದ ಬಗ್ಗೆ ಅರಿವು ಮೂಡಿಸಿದ ಮನೋರಂಜನ್ಗಿಡ ನೆಟ್ಟು ಪರಿಸರದ ಬಗ್ಗೆ ಅರಿವು ಮೂಡಿಸಿದ ಮನೋರಂಜನ್

  ಕೈನಲ್ಲಿ ಗನ್ ಹಿಡಿದು ಕ್ಯಾಮೆರಾಗೆ ಪೋಸ್ ಕೊಟ್ಟಿರುವ ಮನು ಸಿನಿಮಾಗಾಗಿ ಗಡ್ಡ ಬಿಟ್ಟಿದ್ದಾರೆ. ಹೇರ್ ಸ್ಟೈಲ್ ಕೂಡ ಬದಲಾಗಿದ್ದು ಈ ಹಿಂದಿನ ಸಿನಿಮಾಗಳಿಗಿಂತಲೂ ವಿಭಿನ್ನವಾಗಿ ಕಾಣಿಸುತ್ತಿದ್ದಾರೆ.

  ಮನೋರಂಜನ್ ಗೆ ನಾಯಕಿಯಾಗಿ ಪ್ರಿಯಾಂಕ ತಿಮ್ಮೇಶ್ ಕಾಣಿಸಿಕೊಳ್ಳಲಿದ್ದಾರೆ. ಬಾಲಿವುಡ್ ನಟ ನಾನಾ ಪಾಟೇಕರ್ ಕೂಡ 'ಚಿಲಂ' ಸಿನಿಮಾದಲ್ಲಿ ಅಭಿನಯ ಮಾಡುತ್ತಿದ್ದಾರೆ. ಕಬೀರ ಚಿತ್ರ ಖ್ಯಾತಿಯ ನವೀನ್​ಕುಮಾರ್ ಛಾಯಾಗ್ರಹಣ ಮಾಡುತ್ತಿದ್ದು, ನೋಬಿನ್ ಪೌಲ್ ಸಂಗೀತ ನೀಡುತ್ತಿದ್ದಾರೆ. ಎರಡನೇ ಹಂತದ ಚಿತ್ರೀಕರಣಕ್ಕಾಗಿ ಸಿನಿಮಾ ತಂಡ ಮೈಸೂರಿಗೆ ಹೊರಡಲಿದೆ.

  English summary
  Kannada actor Manoranjan Ravichandran starrer Chilam film first look release. Chandrakala is directing the film and has already started filming the movie

  Kannada Photos

  Go to : More Photos
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X
  X