ಅಂತಿಮ ಹಂತದಲ್ಲಿ ಮಂಸೋರೆಯ ‘19.20.21’: ತೆರೆಗೆ ಬರಲು ಸಜ್ಜು

By ಫಿಲ್ಮಿಬೀಟ್ ಡೆಸ್ಕ್

ಈ ವರ್ಷ ಕನ್ನಡ ಚಿತ್ರರಂಗದಲ್ಲಿ ಹಲವು ಉತ್ತಮ ಸಿನಿಮಾಗಳು ತೆರೆಗೆ ಬಂದಿವೆ. ಅದರಲ್ಲಿಯೂ ಕಂಟೆಂಟ್ ಉಳ್ಳ ಸಿನಿಮಾಗಳು ರಾಷ್ಟ್ರಮಟ್ಟದಲ್ಲಿ ಸದ್ದು ಮಾಡಿವೆ. ಕತೆ, ಚಿತ್ರಕತೆ ನಂಬಿ ಸಿನಿಮಾ ಮಾಡುವವರಿಗೆ ಈ ವರ್ಷ ದೊಡ್ಡ ಮಟ್ಟಿನ ಭರವಸೆಯನ್ನು ನೀಡಿದೆ.

ಕಂಟೆಂಟ್ ಹೊಂದಿ ಸಿನಿಮಾ ಮಾಡುವ ಕನ್ನಡ ಚಿತ್ರರಂಗದ ನಿರ್ದೇಶಕರಲ್ಲಿ ಮಂಸೋರೆ ಸಹ ಒಬ್ಬರು. ಸೂಕ್ಷ್ಮ ವಿಚಾರಗಳಿಗೆ ಕತೆ, ಚಿತ್ರಕತೆಯ ರೂಪ ನೀಡಿ ತೆರೆಯ ಮೇಲೆ ತೋರಿಸುವ ಮಂಸೋರೆ, ತಮ್ಮ ಹೊಸ ಸಿನಿಮಾವನ್ನು ತೆರೆಗೆ ತರಲು ಸಕಲ ಸಜ್ಜಾಗಿದ್ದಾರೆ.

'ಹರಿವು', 'ನಾತಿಚರಾಮಿ', 'ಆಕ್ಟ್ 1978' ಹೀಗೆ ತಮ್ಮ ವಿಭಿನ್ನ ಸಬ್ಜೆಕ್ಟ್ ಸಿನಿಮಾಗಳ ಮೂಲಕ ಕನ್ನಡ ಸಿನಿ ಪ್ರೇಕ್ಷಕರಿಗೆ ಮನರಂಜನೆ ನೀಡುತ್ತ ಬಂದಿರುವ ರಾಷ್ಟ್ರಪಶಸ್ತಿ ಪುರಸ್ಕೃತ ನಿರ್ದೇಶಕ ಮಂಸೋರೆ. ಇದೀಗ '19.20.21' ಹೆಸರಿನ ಸಿನಿಮಾ ನಿರ್ದೇಶಿಸಿದ್ದಾರೆ. ಶೀರ್ಷಿಕೆ ಮೂಲಕವೇ ಸಾಕಷ್ಟು ನಿರೀಕ್ಷೆ ಮೂಡಿಸಿರುವ ಈ ಸಿನಿಮಾ ಬಿಡುಗಡೆಯ ಬಾಗಿಲಿಗೆ ಬಂದು ನಿಂತಿದೆ.

Mansores New Movie 19.20.21 Will Release Soon

ಹೊಸ ಪೋಸ್ಟರ್ ಗಳ ಮೂಲಕ ಗಮನ ಸೆಳೆದಿರುವ '19.20.21' ಪ್ರೇಕ್ಷಕರಲ್ಲಿ ಕುತೂಹಲವನ್ನೂ ಹುಟ್ಟು ಹಾಕಿದೆ. ಮಂಸೋರೆ ಅವರ ಹಿಂದಿನ ಸಿನಿಮಾಗಳಂತೆ ಈ ಚಿತ್ರ ಕೂಡ ಭಿನ್ನವಾಗಿರುತ್ತೆ ಅನ್ನೋದಕ್ಕೆ ಚಿತ್ರದ ಪೋಸ್ಟರ್ ಗಳು ಸಾಕ್ಷಿಯಾಗಿವೆ. ಪ್ರತಿ ಪೋಸ್ಟರ್ ಗಳು ಈ ಚಿತ್ರದ ಮೂಲಕ ನಿರ್ದೇಶಕರು ಸಮಾಜಕ್ಕೆ ಹೊಸದೊಂದು ಗಟ್ಟಿತನದ ಸಂದೇಶವನ್ನು ಹೇಳ ಹೊರಟಿದ್ದಾರೆ ಎನ್ನುವ ಸುಳಿವನ್ನು ನೀಡಿದೆ. ನೈಜ ಘಟನೆಗಳನ್ನು ಆಧಾರವಾಗಿಟ್ಟುಕೊಂಡು ಹೆಣೆದ ಕಥೆ ಚಿತ್ರದಲ್ಲಿದ್ದು, ಸೋಶಿಯಲ್ ಥ್ರಿಲ್ಲರ್ ಕಥಾಹಂದರ ಒಳಗೊಂಡಿದೆ. ಚಿತ್ರೀಕರಣ ಮುಗಿಸಿ ಅಂತಿಮ ಹಂತದ ಪೋಸ್ಟ್ ಪ್ರೊಡಕ್ಷನ್ ಕೆಲಸದಲ್ಲಿ ಚಿತ್ರತಂಡ ನಿರತವಾಗಿದೆ. ಸಿನಿಮಾ ಬಿಡುಗಡೆಗೂ ತಯಾರಿ ನಡೆಸುತ್ತಿದ್ದು ಶೀಘ್ರದಲ್ಲೇ ಸಿನಿಮಾ ರಿಲೀಸ್ ಡೇಟ್ ಅನೌನ್ಸ್ ಮಾಡಲಿದೆ 19.20.21 ಚಿತ್ರತಂಡ.

ಸಿನಿಮಾದ ಎಡಿಟಿಂಗ್, ಸಂಗೀತ, ಡಬ್ಬಿಂಗ್ ಎಲ್ಲವೂ ಮುಗಿದಿದ್ದು, ಡಿಟಿಎಸ್ ಮಿಕ್ಸಿಂಗ್ ಕಾರ್ಯ ಪ್ರಸ್ತುತ ನಡೆಯುತ್ತಿದೆ. ಈ ಕಾರ್ಯ ಮುಗಿಯುತ್ತಿದ್ದಂತೆ, ಸೆನ್ಸಾರ್‌ಗೆ ಸಿನಿಮಾವನ್ನು ಸಲ್ಲಿಸಿ ಬಿಡುಗಡೆ ಮಾಡಲಿದೆ ಚಿತ್ರತಂಡ. ದಿನಾಂಕವನ್ನು ಶೀಘ್ರವಾಗಿ ಘೋಷಿಸಲಾಗುವುದು.

ರಂಗಭೂಮಿ ಕಲಾವಿದರರಾದ ಶೃಂಗ ಬಿ ವಿ ಚಿತ್ರದಲ್ಲಿ ಮುಖ್ಯ ಭೂಮಿಕೆಯಲ್ಲಿ ನಟಿಸಿದ್ದು, ಬಾಲಾಜಿ ಮನೋಹರ್, ಸಂಪತ್, ಎಂ.ಡಿ ಪಲ್ಲವಿ, ಮಹದೇವ್ ಹಡಪತ್, ಉಗ್ರಂ ಸಂದೀಪ್ ಒಳಗೊಂಡ ಪ್ರತಿಭಾನ್ವಿತರ ತಾರಾಗಣ ಚಿತ್ರದಲ್ಲಿದೆ. ಯಲ್ಲಾಪುರ, ಧಾರವಾಡ, ಮಂಗಳೂರು, ಕುಂದಾಪುರ ಸೇರಿದಂತೆ ಹಲವು ಕಡೆ ಚಿತ್ರವನ್ನು ಸೆರೆ ಹಿಡಿಯಲಾಗಿದೆ. ಶಿವು ಬಿ ಕೆ ಕುಮಾರ್ ಛಾಯಾಗ್ರಹಣ, ರೋಣದ ಬಕ್ಕೇಶ್ ಹಿನ್ನೆಲೆ ಸಂಗೀತ, ಬಿಂದು ಮಾಲಿನಿ ಸಂಗೀತ ನಿರ್ದೇಶನ, ಸುರೇಶ್ ಆರ್ಮುಗಂ ಸಂಕಲನ, ವೀರೇಂದ್ರ ಮಲ್ಲಣ್ಣ ಮತ್ತು ಅವಿನಾಶ್ ಜಿ ಸಂಭಾಷಣೆ, ಮಂಸೋರೆ ಮತ್ತು ವೀರೇಂದ್ರ ಮಲ್ಲಣ್ಣ ಚಿತ್ರಕತೆ, ಕಿರಣ್ ಕಾವೇರಪ್ಪ ಸಾಹಿತ್ಯ ಚಿತ್ರಕ್ಕಿದೆ. ದೇವರಾಜ್ ಆರ್ 19.20.21 ಚಿತ್ರವನ್ನು ನಿರ್ಮಾಣ ಮಾಡಿದ್ದು ಶ್ರೀಘ್ರದಲ್ಲೇ ಪ್ರೇಕ್ಷರನ್ನು ರಂಜಿಸಲು ಸಿನಿಮಾ ತೆರೆಗೆ ಬರ್ತಿದೆ.

More from Filmibeat

English summary
National award winning director Mansore's new Kannada movie 19.20.21 will release soon. Movie's is on last phase of post production.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X